ತುಮಕೂರು | ‘ಜ್ಞಾನಸಿರಿ’ ಜ್ಞಾನ ಪ್ರವಾಹದ ಸಂಕೇತ : ಥಾವರ್‌ಚಂದ್ ಗೆಹ್ಲೋಟ್

Date:

ತುಮಕೂರು ವಿಶ್ವ ವಿದ್ಯಾನಿಲಯದ ನೂತನ ಕ್ಯಾಂಪಸ್ ಜ್ಞಾನ ಪ್ರವಾಹದ ಸಂಕೇತವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬಣ್ಣಿಸಿದರು

 ತುಮಕೂರು ಜಿಲ್ಲೆಯ ಬಿದರಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ತುಮಕೂರು ವಿಶ್ವವಿದ್ಯಾಲಯದ ‘ಜ್ಞಾನಸಿರಿ ಕ್ಯಾಂಪಸ್ ಹಾಗೂ ವಿವಿಧ ಕಟ್ಟಡ’ಗಳನ್ನು ಶುಕ್ರವಾರ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

  “ಜ್ಞಾನಸಿರಿ” ಎಂಬ ಹೆಸರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಮಾಜವನ್ನು ಬೆಳಗಿಸುವ, ನಿರಂತರವಾಗಿ ಹರಿಯುವ ಜ್ಞಾನದ ಪ್ರವಾಹವನ್ನು ಸಂಕೇತಿಸುತ್ತದೆ. ಹೊಸ ಶೈಕ್ಷಣಿಕ ಕಟ್ಟಡ ಮತ್ತು ಕಲಾ ಕಟ್ಟಡವು ವಿಶ್ವವಿದ್ಯಾನಿಲಯದ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ. ಈ ಕಟ್ಟಡಗಳು ಕಲಿಕಾ ಸೌಲಭ್ಯಗಳನ್ನು ಹೆಚ್ಚಿಸುತ್ತವೆ ಮತ್ತು ಸಂಶೋಧನೆ, ನಾವೀನ್ಯತೆ ಮತ್ತು ಸೃಜನಶೀಲತೆಗೆ ಹೊಸ ದೃಷ್ಟಿಕೋನಗಳನ್ನು ತೆರೆಯುತ್ತವೆ ಎಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನೂತನ ಕಟ್ಟಡಗಳು ಬೋಧನೆ, ತರಬೇತಿ, ಸಂಶೋಧನೆ ಮತ್ತು ನಾವೀನ್ಯತೆಗಳನ್ನು ಮತ್ತಷ್ಟು ಬಲಪಡಿಸುವ ಆಧುನಿಕ ಸೌಲಭ್ಯಗಳನ್ನು ಹೊಂದಿವೆ. ಇದು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಅತ್ಯುತ್ತಮ ಕಲಿಕಾ ವಾತಾವರಣವನ್ನು ಒದಗಿಸುತ್ತದೆ. ಈ ಕಟ್ಟಡಗಳು ಹೊಸ ಶಕ್ತಿ, ಹೊಸ ನಿರ್ದೇಶನ ಮತ್ತು ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲಿದೆ. ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಸ್ಥಾಪನೆ ಶ್ಲಾಘನೀಯವಾಗಿದೆ. ಈ ಕೇಂದ್ರವು ರಾಷ್ಟಿçÃಯ ಸೇವೆಗೆ ಬದ್ಧರಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಿರ್ದೇಶನ ನೀಡುತ್ತದೆ. ಇಲ್ಲಿಂದ ಪದವಿ ಪಡೆಯುವ ವಿದ್ಯಾರ್ಥಿಗಳು ದೇಶದ ಆಡಳಿತ, ಶಿಕ್ಷಣ, ವಿಜ್ಞಾನ ಮತ್ತು ಸಮಾಜದ ಪ್ರತಿಯೊಂದು ಕ್ಷೇತ್ರಕ್ಕೂ ಕೊಡುಗೆ ನೀಡುತ್ತಾರೆ ಎಂಬ ವಿಶ್ವಾಸ ನನಗಿದೆ” ಎಂದು ಭರವಸೆ ವ್ಯಕ್ತಪಡಿಸಿದರು. 

1002318492

ನಮ್ಮ ದೇಶವು ಸಾವಿರಾರು ವರ್ಷಗಳಿಂದ ಜ್ಞಾನದ ದೀಪವನ್ನು ಬೆಳಗಿಸುತ್ತಿದೆ. ವೇದ, ಉಪನಿಷತ್ತು, ಆಯುರ್ವೇದ, ಯೋಗ, ವಾಸ್ತು, ತತ್ವಶಾಸ್ತç, ನ್ಯಾಯಶಾಸ್ತç, ಇವು ನಮ್ಮ ಅಮೂಲ್ಯ ಪರಂಪರೆ. ಹೊಸ ಶಿಕ್ಷಣ ನೀತಿಯು ಈ ಜ್ಞಾನ ಧಾರೆಗಳನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಮತ್ತೆ ಪರಿಚಯಿಸಿದೆ. ಇಂದಿನ ಯುವಪೀಳಿಗೆ ಈ ಜ್ಞಾನ ಧಾರೆಗಳನ್ನು ಆಧುನಿಕ ಸಂದರ್ಭದಲ್ಲಿ ಅರ್ಥಮಾಡಿಕೊಂಡು, ಸಂಶೋಧನೆ ನಡೆಸಬೇಕು ಮತ್ತು ಜಾಗತಿಕ ವೇದಿಕೆಯಲ್ಲಿ ಅವುಗಳನ್ನು ಪ್ರಸ್ತುತಪಡಿಸಬೇಕು” ಎಂದು ಸಲಹೆ ನೀಡಿದರು. 

ಭಾರತ ಇಂದು ಸ್ವಾವಲಂಬನೆಯತ್ತ ಸಾಗುತ್ತಿದೆ. ಸ್ವಾವಲಂಬಿ ಭಾರತದ ಕನಸನ್ನು ನನಸಾಗಿಸಲು, ದೇಶವು “ಮೇಕ್ ಇನ್ ಇಂಡಿಯಾ” ನಂತಹ ಯೋಜನೆಯ ಮೂಲಕ ತನ್ನ ಪ್ರತಿಭೆ, ನಾವೀನ್ಯತೆ ಮತ್ತು ತಾಂತ್ರಿಕ ಸಾಮರ್ಥ್ಯಗಳನ್ನು ಬಲಪಡಿಸುತ್ತಿದೆ. ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯ ದಿಕ್ಕಿನಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ. ಡಿಜಿಟಲ್ ಇಂಡಿಯಾ ಮೂಲಕ, ನಮ್ಮ ದೇಶವು ಪಾರದರ್ಶಕತೆ ಮತ್ತು ಸಮಾನತೆಯ ಹೊಸ ಯುಗಕ್ಕೆ ನಾಂದಿ ಹಾಡಿದೆ. ಈ ಯೋಜನೆಗಳು ಶಿಕ್ಷಣ ಮತ್ತು ಆಡಳಿತವನ್ನು ಪ್ರತಿಯೊಬ್ಬ ನಾಗರಿಕನ ಬೆರಳ ತುದಿಗೆ ತಂದಿದೆ. ನಗರ ಮತ್ತು ಗ್ರಾಮೀಣ ಭಾರತದ ನಡುವಿನ ಅಂತರವನ್ನು ಕಡಿಮೆ ಮಾಡಿದೆ ಎಂದು ತಿಳಿಸಿದರು. 

   ಡಿಜಿಟಲ್ ಸಬಲೀಕರಣ ಮತ್ತು ಸ್ವಾವಲಂಬನೆಯ ಈ ಸಂಗಮವು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿಯತ್ತ ನಮ್ಮನ್ನು ಮುನ್ನಡೆಸುತ್ತಿದೆ. ಈ ಗುರಿಯನ್ನು ಸಾಧಿಸುವಲ್ಲಿ ನಮ್ಮ ವಿಶ್ವವಿದ್ಯಾಲಯಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಯುವ ಪೀಳಿಗೆಯಲ್ಲಿ ವಿಮರ್ಶಾತ್ಮಕ ಚಿಂತನೆ, ಸೃಜನಶೀಲತೆ ಮತ್ತು ರಾಷ್ಟç ನಿರ್ಮಾಣದ ಮನೋಭಾವವನ್ನು ಬೆಳೆಸಲಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿರುವ ಈ ವಿಶ್ವವಿದ್ಯಾಲಯವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮಾತ್ರವಲ್ಲದೆ ಜ್ಞಾನ, ಸಂಶೋಧನೆ, ನಾವೀನ್ಯತೆ ಮತ್ತು ಸಾಮಾಜಿಕ ಜವಾಬ್ದಾರಿಯ ಶ್ರೀಮಂತ ಸಂಪ್ರದಾಯಗಳನ್ನು ಹೊಂದಿದೆ. ಈ ಸಾಧನೆಗಾಗಿ ವಿಶ್ವವಿದ್ಯಾನಿಲಯ ಕುಟುಂಬದ ಎಲ್ಲ ಸದಸ್ಯರು ಅಭಿನಂದನಾರ್ಹರು ಎಂದರು.

  ಜ್ಞಾನಸಿರಿ ಹಾಗೂ ವಿವಿಧ ಕಟ್ಟಡಗಳ ನಿರ್ಮಾಣಕ್ಕೆ ಕಾರಣರಾದ ಸಚಿವರು, ಶಾಸಕರು, ಕುಲಪತಿ, ಎಂಜಿನಿಯರ್‌ಗಳು, ವಾಸ್ತುಶಿಲ್ಪಿಗಳು ಮತ್ತು ನಿರ್ಮಾಣ ಸಂಸ್ಥೆಗೆ ಅಭಿನಂದಿಸಿದರು. 

ಸಮಾರಂಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ.ಜಯಚಂದ್ರ, ಶಾಸಕರಾದ ಬಿ.ಸುರೇಶ್ ಗೌಡ, ಜಿ.ಬಿ. ಜ್ಯೋತಿಗಣೇಶ್, ಕುಲಪತಿ ಪ್ರೊಫೆಸರ್ ಎಂ.ವೆAಕಟೇಶ್ವರಲು, ಕುಲಸಚಿವೆ ನಹೀದಾ ಜûಮ್ ಜûಮ್, ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...