ತುಮಕೂರು | ಮರೆ ಮಾಚಿದ್ದ ಪೋಕ್ಸೊ ಪ್ರಕರಣ; ಸಂತ್ರಸ್ತ ಬಾಲಕಿ ಹೇಳಿಕೆ ಮೇಲೆ ದೂರು ದಾಖಲು

Date:

ಸುಳ್ಳು ಪ್ರಕರಣವೆಂದು ಮರೆ ಮಾಚಲು ಯತ್ನಿಸಿದ್ದ ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ತಡವಾಗಿ ನ್ಯಾಯ ದೊರಕಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿ ಎಸ್ ಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ನಾಲ್ಕು ವರ್ಷದ ಬಾಲಕಿಗೆ ವ್ಯಕ್ತಿಯೊಬ್ಬ ಬಿಸ್ಕೇಟ್ ಆಸೆ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ಕಳೆದ ಸಂಕ್ರಾಂತಿ ಹಬ್ಬದ ಹಿಂದಿನ ದಿನ ಕಡಬ ಹೋಬಳಿ ಕೆ.ಅರಿವೇಸಂದ್ರ ಗ್ರಾಮದಲ್ಲಿ ನಡೆದಿತ್ತು. ಈ ಬಗ್ಗೆ ಸಿ ಎಸ್ ಪುರ ಪೊಲೀಸ್ ಠಾಣೆಗೆ ದೂರು ನೀಡಲು ಹೋದ ಸಂತ್ರಸ್ತ ಬಾಲಕಿ ಮತ್ತು ಆಕೆಯ ತಾಯಿಯಿಂದ ದೂರು ಪಡೆಯುವಲ್ಲಿ ಪೊಲೀಸರು ತಡ ಮಾಡಿದ್ದರು. ಆರೋಪಿಯನ್ನು ಕರೆ ತಂದು ದೂರು ದಾಖಲು ಮಾಡದೆ ಕೈ ಚೆಲ್ಲಿದ್ದರು.

ಗ್ರಾಮದ ಕೆಲ ಬಲಾಢ್ಯರು ಆರೋಪಿಯ ಪರ ನಿಂತು ಸಂತ್ರಸ್ತ ಕುಟುಂಬದ ಜತೆಗೆ ಮೂರ್ನಾಲ್ಕು ಗಂಟೆ ಚರ್ಚಿಸಿ ರಾಜಿ ಸಂಧಾನ ನಡೆಸಿದ್ದರು. ಈ ಭಯದ ವಾತಾವರಣಕ್ಕೆ ಮಂಕಾದ ಕುಟುಂಬ ದೂರು ನೀಡಲು ಹಿಂದೆ ಸರಿದಿತ್ತು. ಇಡೀ ಪ್ರಕರಣ ಮುಚ್ಚಿ ಹಾಕುವಲ್ಲಿ ಈ ತಂಡ ಯಶಸ್ವಿಯಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರು ನೀಡದಂತೆ ತಾಕೀತು ಮಾಡಿದ ಮಾಹಿತಿ ತಿಳಿದ ಬಳಿಕ ಹೋರಾಟಗಾರ, ಮಾನವ ಹಕ್ಕುಗಳ ಸೇವಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಸಿದ್ದಲಿಂಗೇಗೌಡ ಅವರು ಮಕ್ಕಳ ಹಕ್ಕು ಆಯೋಗ, ಪೊಲೀಸ್ ಇಲಾಖೆಯ ಮೇಲಾಧಿಕಾರಿಗಳು ಹಾಗೂ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಬರೆದು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ನೀಡುವಂತೆ ಕೋರಿದ್ದರು.

ಲೈಂಗಿಕ ಪ್ರಕರಣ ಮರೆ ಮಾಚಲು ಯತ್ನಿಸಿದ್ದ ದೊಡ್ಡ ತಂಡ, “ಯಾರೋ ಕಿಡಿಗೇಡಿಗಳು ಅಪಪ್ರಚಾರ ಮಾಡಿದ್ದಾರೆ” ಎಂದು ಪ್ರಕರಣ ಮುಚ್ಚಿ ಹಾಕಿದ ಬಲಾಢ್ಯರಿಗೆ ತಕ್ಕ ಉತ್ತರ ನೀಡಿದ ಪ್ರಕರಣ ಇಪ್ಪತ್ತು ದಿನಗಳ ಬಳಿಕ ಹೊಸ ತಿರುವು ಪಡೆಯಿತು.

ಹೋರಾಟಗಾರ ಸಿದ್ದಲಿಂಗೇಗೌಡ ಅವರ ಪತ್ರವನ್ನು ಗಣನೆಗೆ ತೆಗೆದುಕೊಂಡ ಮಕ್ಕಳ ಹಕ್ಕು ಆಯೋಗ ಜಿಲ್ಲಾ ಮಕ್ಕಳ ಸಂರಕ್ಷಣಾ ಅಧಿಕಾರಿಗಳು ಗೌಪ್ಯವಾಗಿ ಸಂತ್ರಸ್ತ ಬಾಲಕಿ ಕೊಟ್ಟ ಹೇಳಿಕೆಯಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಪ್ರಕರಣಕ್ಕೆ ಮರು ಜೀವ ಬಂದಿತು. ಯಾವ ಪೊಲೀಸ್ ಠಾಣೆಯಲ್ಲಿ ರಾಜಿ ಸಂಧಾನ ನಡೆದಿತ್ತು, ಅದೇ ಸಿ ಎಸ್ ಪುರ ಠಾಣೆಯಲ್ಲಿ ದೂರು ದಾಖಲಾಗಿ ಆರೋಪಿ ದೊರೆಸ್ವಾಮಿ ಜೈಲು ಪಾಲಾಗಿದ್ದು, ಇಡೀ ಪ್ರಕರಣ ಮುಚ್ಚುವ ಪಟ್ಟಭದ್ರ ಹಿತಾಸಕ್ತಿಗಳ ಕುತಂತ್ರಕ್ಕೆ ತಕ್ಕ ಉತ್ತರ ಸಿಕ್ಕಿ ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಸಿಕ್ಕಿದಂತಾಗಿದೆ.

ಸಾಮಾಜಿಕ ಹೋರಾಟಗಾರ ಜಿ ಎಸ್ ಮಂಜುನಾಥ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಗಂಭೀರತೆ ತಿಳಿಯದೆ ಕೆಲ ಪತ್ರಿಕೆ ಹಾಗೂ ದೃಶ್ಯ ಮಾಧ್ಯಮ ಪ್ರಕರಣ ತಿರುಚುವಲ್ಲಿ ಸಹಕರಿಸಿದ್ದು ವಿಷಾದನೀಯ. ನಿಷ್ಪಕ್ಷವಾಗಿ ವರ್ತಿಸಬೇಕಿದ್ದ ಕೆಲ ಮಾಧ್ಯಮಗಳು ಆಮಿಷಕ್ಕೆ ಬಲಿಯಾಗಿದ್ದು ದುರಂತವೇ ಸರಿ” ಎಂದು ವಿಷಾದ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ನಿವೇಶನ ಹಕ್ಕು ಪತ್ರಕ್ಕಾಗಿ ದಲಿತ ಕುಟುಂಬಗಳ ಧರಣಿ

ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರ ಸಂಸ್ಥಾಪಕ ಅಧ್ಯಕ್ಷ ಸಿದ್ದಲಿಂಗೇಗೌಡ ಅವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಘಟನೆ ನಾಗರಿಕ ಸಮಾಜಕ್ಕೆ ನಾಚಿಕೆ ತರುವಂತದ್ದು. ನಡೆದ ಪ್ರಕರಣವನ್ನು ಮರೆ ಮಾಚುವ ಕೆಲಸ ತಿಳಿದೂ ಕೈ ಚೆಲ್ಲಿದ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...