ತುಮಕೂರು | ತಂಬಾಗನ್ನ ಹಟ್ಟಿಗೆ ನ್ಯಾ. ನೂರುನ್ನೀಸಾ ಭೇಟಿ; ಕಾನೂನು ಅರಿವು ಅಭಿಯಾನ

Date:

ತುಮಕೂರು ಜಿಲ್ಲೆಯ ಮಲ್ಲೇನಹಳ್ಳಿ ಸಮೀಪದ ಗೊಲ್ಲರಹಟ್ಟಿಯಲ್ಲಿ ಮೌಢ್ಯಚಾರಣೆ ಕಾರಣದಿಂದ ಬಾಣಂತಿ ಮತ್ತು ನವಜಾತ ಶಿಶುವನ್ನು ಮನೆಯಿಂದ ಹೊರಗಿಟ್ಟು ಮಗು ಮೃತಪಟ್ಟ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಪ್ರಕರಣ ಸಂಬಂಧ ಸಂತ್ರಸ್ತೆಯ ಪತಿ ಹಾಗೂ ಆಕೆಯ ತಂದೆಯ ವಿರುದ್ದ ಕರ್ನಾಟಕ ಅಮಾನವೀಯ ದುಷ್ಟ ಪದ್ಧತಿಗಳು ಹಾಗೂ ವಾಮಾಚಾರ ಇವುಗಳ ಪ್ರತಿಬಂಧ ಮತ್ತು ನಿರ್ಮೂಲನೆ ಕಾಯಿದೆ – 2017 ಹಾಗೂ ಐಪಿಸಿ ಅಧಿನಿಯಮ 304, 34ರಡಿ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಂಬಾಗನ್ನ ಹಟ್ಟಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಈ ಸಂಬಂಧ ಪ್ರಕರಣ ದಾಖಲಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ನೂರುನ್ನೀಸಾ ಅವರ ಸೂಚನೆ ಬಳಿಕ ಪ್ರಕರಣ ಸಂಬಂಧ ಪ್ರಥಮ ವರ್ತಮಾನ ವರದಿ ದಾಖಲಾಗಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ನೂರುನ್ನೀಸಾ ಅವರು ತುಮಕೂರು ಜಿಲ್ಲೆಯ ತಂಬಾಗನ್ನ ಹಟ್ಟಿಗೆ ಭೇಟಿ ನೀಡಿದ್ದು, ಕಾನೂನು ಅರಿವು ಮೂಲಕ ನಾಗರೀಕರಣ ಅಭಿಯಾನವನ್ನು ಹಮ್ಮಿಕೊಂಡು, ಪೋಕ್ಸೊ ಕಾಯ್ದೆ ಹಾಗೂ ಕರ್ನಾಟಕ ಅಮಾನವೀಯ ಕೆಟ್ಟ ಪದ್ಧತಿ ಪ್ರತಿಬಂಧ ಮತ್ತು ನಿರ್ಮೂಲನೆ ಅಧಿನಿಯಮ -2017 ಮೊದಲಾದ ಕಾನೂನುಗಳ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರು | ಊರಾಚೆ ಗುಡಿಸಲಲ್ಲಿ ಮಗು ಸಾವು ಪ್ರಕರಣ; ಮೂವರ ವಿರುದ್ಧ ಪ್ರಕರಣ ದಾಖಲು

ತಂಬಾಗನ್ನ ಹಟ್ಟಿಯ ಮನೆಗಳಿಗೆ ಭೇಟಿ ನೀಡಿದ ನ್ಯಾಯಾಧೀಶರು ಬಾಣಂತಿ ಹಾಗೂ ಹಸುಗೂಸು ಮನೆಯ ಪ್ರತ್ಯೇಕ ಕೊಠಡಿಯಲ್ಲಿರುವುದನ್ನು ಕಂಡು ಮಾತನಾಡಿಸಿ ಹರ್ಷ ವ್ಯಕ್ತಪಡಿಸಿ, ಇದೇ ರೀತಿ ಜನರಲ್ಲಿ ಮಾನವೀಯತೆ ಹಾಗೂ ಮೌಢ್ಯಚಾರಣೆ ವಿರುದ್ಧ ಅರಿವು ಮೂಡಬೇಕು ಎಂದರು

ಈ ಸಂದರ್ಭದಲ್ಲಿ ಗೊಲ್ಲರ ಸಮುದಾಯದ ರಾಜ್ಯ ಅದ್ಯಕ್ಷರು, ಜಿಲ್ಲಾ ಅಧ್ಯಕ್ಷ, ಸಮುದಾಯದ ಚಲನಚಿತ್ರ ಸಂಗೀತಗಾರ ಮೋಹನ್, ತಹಶೀಲ್ದಾರ್, ಸ್ಥಳೀಯ ಜನಪ್ರತಿನಿಧಿಗಳು, ಪಂಚಾಯತ್ ಸದಸ್ಯರು ಹಾಗೂ ಊರಿನ ಮುಖಂಡರು ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...