ತುಮಕೂರು | ಕನ್ನಡ ವಿಶ್ವವಿದ್ಯಾಲಯದಿಂದ ಕೆ ಮುರುಳಿ ಮೋಹನ್‌ಗೆ ಪಿಎಚ್‌ಡಿ ಪದವಿ

Date:

ʼಕನ್ನಡ ಸಿನಿಮಾಗಳಲ್ಲಿ ತಳಸಮುದಾಯಗಳ ಪ್ರತಿನಿಧೀಕರಣದ ನೆಲೆಗಳು’ ಎಂಬ ವಿಷಯ ಕುರಿತು ಪ್ರೌಢಪ್ರಬಂಧ ಮಂಡಿಸಿದ ಲೇಖಕ ಹಾಗೂ ಪತ್ರಕರ್ತ ಕೆ ಮುರುಳಿ ಮೋಹನ್ ಅವರಿಗೆ‌ ತುಮಕೂರು ನಗರದ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಸಂದಿದೆ.

ನಿವೃತ್ತ ಪ್ರಾಧ್ಯಾಪಕ ಡಾ ಎಚ್ ಟಿ ಕೃಷ್ಣಮೂರ್ತಿ ಅವರ ಮಾರ್ಗದರ್ಶನ ಹಾಗೂ ನಗರದ ಎಸ್‌ಎಸ್‌ಐಟಿ ಕ್ಯಾಂಪಸ್‌ನಲ್ಲಿರುವ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕರಾಗಿರುವ ಡಾ. ಬಿ ಟಿ ಮುದ್ದೇಶ್ ಅವರ ಸಹ ಮಾರ್ಗದರ್ಶನದಲ್ಲಿ ಪತ್ರಕರ್ತ ಕೆ ಮುರುಳಿ ಮೋಹನ್ ಅವರು ‘ʼಕನ್ನಡ ಸಿನಿಮಾಗಳಲ್ಲಿ ತಳಸಮುದಾಯಗಳ ಪ್ರತಿನಿಧೀಕರಣದ ನೆಲೆಗಳು’ ಎಂಬ ವಿಷಯ ಕುರಿತು ಸಂಶೋಧನೆ ನಡೆಸಿ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್‌ ಪದವಿ ಸಂದಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನವರಾದ ಕೆ ಮುರುಳಿ ಮೋಹನ್ ಅವರು ಎಂಎಸ್‌ಸಿ, ಎಲೆಕ್ಟ್ರಾನಿಕ್‌ ಮೀಡಿಯಾ ಮುಗಿಸಿದ್ದಾರೆ. ಪತ್ರಕರ್ತರಾಗಿ, ರಂಗ ನಟರಾಗಿ, ಸಾಕ್ಷ್ಯಚಿತ್ರ ನೀದೇರ್ಶಕರಾಗಿ, ಸಿನಿಮಾಟೋಗ್ರಫರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ ಹದಿನೈದು ವರ್ಷಗಳಿಂದ ಬೆಂಗಳೂರಿನ ಸಂವಾದ-ಬದುಕು ಸೆಂಟರ್ ಫಾರ್ ಲೈವ್ಲಿಹುಡ್ ಲರ್ನಿಂಗ್ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಸಂಸ್ಥೆಯ ಕಾರ್ಯಕ್ರಮ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೆ ಮುರುಳಿ ಮೋಹನ್‌ ಕಾಟಿ

ಈ ಸುದ್ದಿ ಓದಿದ್ದೀರಾ? ತುಮಕೂರು | ಅಧಿಕಾರಿಗಳ ಸಮನ್ವಯತೆ ಕೊರತೆ; ಜೆಜೆಎಂ ಸಭೆಯಲ್ಲಿ ಬಹಿರಂಗ

ಕೆ ಮುರುಳಿ ಮೋಹನ್ ಕರ್ನಾಟಕದ ಹಲವು ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ತರಬೇತುದಾರರಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕಾವ್ಯ, ಲೇಖನ, ಪತ್ರಿಕಾ ಬರವಣಿಗೆ ಒಳಗೊಂಡ ಮೂರು ಕೃತಿಗಳು ಪ್ರಕಟಗೊಂಡಿವೆ. ಸಮಾಜದ ಜ್ವಂಲತ ಸಮಸ್ಯೆಗಳು, ಸಾಮಾಜಿಕ ಹೋರಾಟಗಳು, ಪರಿಸರ ವಿಚಾರ, ಮಾನವ ಹಕ್ಕುಗಳ ಕುರಿತು ಹಲವು ಸಾಕ್ಷ್ಯಚಿತ್ರಗಳನ್ನು ನಿರ್ಮಿಸಿದ್ದಾರೆ. ಜತೆಗೆ ಕರ್ನಾಟಕದ ಹಲವು ಜನಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ಪರಿಸರ ಸಂಘಟನೆಗಳೊಂದಿಗೆ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...