ತುಮಕೂರು | ಕರ್ನಾಟಕದಲ್ಲಿ ದೇಶದಲ್ಲಿಯೇ ಅತಿಹೆಚ್ಚು 45 ಚಾಲನಾ ಪಥಗಳ ನಿರ್ಮಾಣ : ಸಚಿವ ರಾಮಲಿಂಗಾರೆಡ್ಡಿ

Date:

 ದೇಶದಲ್ಲಿಯೇ ಅತಿಹೆಚ್ಚು 45 ಚಾಲನಾ ಪರೀಕ್ಷಾ ಪಥಗಳನ್ನು ರಾಜ್ಯದಲ್ಲಿ ನಿರ್ಮಿಸಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸಾರಿಗೆ ಇಲಾಖೆ ಮತ್ತು ರೇಷ್ಮೆ ಇಲಾಖೆ ಸಹಯೋಗದಲ್ಲಿ ಶನಿವಾರ ಮಧುಗಿರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರಿಗೆ ಅಧಿಕಾರಿಗಳ ಕಚೇರಿ ನೂತನ ಕಟ್ಟಡ ಹಾಗೂ ಸ್ವಯಂ ಚಾಲಿತ ವಾಹನ ಚಾಲನಾ ಪರೀಕ್ಷಾ ಪಥ ಹಾಗೂ ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

  ದೇಶದಲ್ಲೇ ಅತಿಹೆಚ್ಚು ಚಾಲನಾ ಪರೀಕ್ಷಾ ಪಥಗಳನ್ನು ರಾಜ್ಯದಲ್ಲಿ ನಿರ್ಮಿಸಲಾಗಿದೆ. ದೇಶದ ಯಾವ ರಾಜ್ಯದಲ್ಲೂ ಇಷ್ಟು ಪಥಗಳಿಲ್ಲ. ಪ್ರಧಾನಿ ನರೇಂದ್ರಮೋದಿ ಅವರ ತವರು ಜಿಲ್ಲೆ ಗುಜರಾತಿನಲ್ಲೂ ಇಷ್ಟು ಪಥಗಳನ್ನು ನಿರ್ಮಿಸಿಲ್ಲ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರಿಗೆ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದೆ ಎಂದ ಅವರು, ಪ್ರಸ್ತುತ ರಾಜ್ಯದಲ್ಲಿ 45 ಚಾಲನಾ ಪಥಗಳನ್ನು ನಿರ್ಮಿಸಲಾಗಿದೆ. ಈ ಪೈಕಿ 7 ಪಥಗಳು ಈಗಾಗಲೇ ಪೂರ್ಣಗೊಂಡಿವೆ. 28 ಪಥಗಳು ಮುಗಿಯುವ ಹಂತದಲ್ಲಿವೆ ಹಾಗೂ ಇದೀಗ 10 ಪಥಗಳ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. 28 ಚಾಲನಾ ಪಥಗಳನ್ನು ಸದ್ಯದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕಕಾಲದಲ್ಲಿ ಉದ್ಘಾಟಿಸಲಿದ್ದಾರೆ ಎಂದರು.

ಅಲ್ಲದೆ 5800 ಬಸ್‌ಗಳನ್ನು ಈಗಾಗಲೆ ಖರೀದಿ ಮಾಡಲಾಗಿದ್ದು ಇನ್ನು ಹೊಸ 2000 ಬಸ್ ಗಳ ಖರೀದಿಗೆ ಕ್ರಮ ವಹಿಸಲಾಗಿದೆ. ಅಗತ್ಯ ಇರುವ ಕಡೆಗಳಲ್ಲಿ ಬಸ್‌ಗಳನ್ನು ಓಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಕಳೆದ 9 ವರ್ಷಗಳಿಂದ ಇಲಾಖೆಯಲ್ಲಿ ನೇಮಕಾತಿ ಆಗಿರಲಿಲ್ಲ. ನಮ್ಮ ಸರ್ಕಾರ 9 ಸಾವಿರ ಹುದ್ದೆಗಳನ್ನು ಭರ್ತಿಮಾಡಿದೆ. ಈ ಪೈಕಿ 1000 ಹುದ್ದೆಗಳನ್ನು ಅನುಕಂಪದ ಆಧಾರದಲ್ಲಿ ನೀಡಲಾಗಿದ್ದು, ಇನ್ನು ಹೆಚ್ಚಿನ ಹುದ್ದೆಗಳ ನೇಮಕಾತಿಗೆ ಅನುಮೋದನೆ ಪಡೆಯಲಾಗಿದೆ ಎಂದು ಅವರು ತಿಳಿಸಿದರು.

ಮಧುಗಿರಿಗೆ ಸಾರಿಗೆ ಉಪ ವಿಭಾಗ ಕಚೇರಿ ನೀಡಲು ಸದ್ಯದಲ್ಲಿ ಮಂಡಳಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲಾಗುವುದು. ಅಲ್ಲದೆ ಶಾಸಕ ಕೆ.ಎನ್ ರಾಜಣ್ಣ ಅವರು ಪ್ರಸ್ತಾಪಿಸಿರುವ ಮಧುಗಿರಿ ತಾಲೂಕಿನ 21 ಗ್ರಾಮಗಳಿಗೆ ಬಸ್ ಸಂಚಾರಕ್ಕೆ ಕ್ರಮ ವಹಿಸುವುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

  ಶಾಸಕ ಕೆ.ಎನ್. ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ರಾಜ್ಯದಲ್ಲಿ ಮಹಿಳೆಯರು ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ಅತಿಹೆಚ್ಚು ಸೌಲಭ್ಯಗಳನ್ನು ನೀಡಿದೆ ಎಂದರು.

ಅನ್ನಭಾಗ್ಯ ಮೂಲಕ ಹಸಿವುಮುಕ್ತ ಕರ್ನಾಟಕ ಯೋಜನೆಯಲ್ಲದೆ ಹಲವಾರು ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರಲಾಗಿದೆ ಎಂದರು.

  ಮಧುಗಿರಿ ಸಂಪರ್ಕ ರಸ್ತೆಗಳ ವಿಸ್ತರಣೆಗೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ ಎಂದ ಅವರು ಜನರ ಬೇಡಿಕೆಗನುಸಾರ ರಾಜಧಾನಿ ಬೆಂಗಳೂರು, ತುಮಕೂರು ಕೈಗಾರಿಕಾ ಪ್ರದೇಶ ವಸಂತ ನರಸಾಪುರ ಹಾಗೂ ಕೊಡಿಗೇನಹಳ್ಳಿ ಮಾರ್ಗಕ್ಕೆ ಇಂದು ಹೊಸ ಬಸ್ ಸಂಚಾರ ಆರಂಭಿಸಲಾಗಿದೆ ಎಂದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಕಾಲದಲ್ಲಿಯೇ ಸಾರಿಗೆ ಘಟಕ, ಸಹಾಯಕ ಸಾರಿಗೆ ಕಚೇರಿ ಆರಂಭಿಸಿ ಇದೀಗ ಕಚೇರಿ ಕಟ್ಟಡಕ್ಕೂ ಶಂಕುಸ್ಥಾಪನೆ ನೆರವೇರಿದ್ದು ಇವರೇ ಉದ್ಘಾಟಿಸುವಂತಾಗಬೇಕು ಎಂಬ ಆಶಯ ವ್ಯಕ್ತಪಡಿಸಿದರು. 

ಅಲ್ಲದೆ ಮುಂದಿನ ದಿನಗಳಲ್ಲಿ ಮಧುಗಿರಿ ಜಿಲ್ಲೆಯಾಗುವ ಎಲ್ಲ ಸಾಧ್ಯತೆಗಳಿರುವುದರಿಂದ ಪೂರಕ ಸೌಲಭ್ಯಗಳು ಆಗಬೇಕಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂಪಾಷಾ, ಪುರಸಭೆ ಅಧ್ಯಕ್ಷ ಲಾಲಪೇಟೆ ಮಂಜುನಾಥ್, ಅಪರ ಸಾರಿಗೆ ಆಯುಕ್ತೆ ಎಂ.ಪಿ.ಓಂಕಾರೇಶ್ವರಿ, ರೇಷ್ಮೆ ಅಪರ ನಿರ್ದೇಶಕ ವೈ.ಟಿ.ತಿಮ್ಮಯ್ಯ, ಜಂಟಿ ಸಾರಿಗೆ ಆಯುಕ್ತೆ ಎನ್.ಜಿ. ಗಾಯತ್ರಿದೇವಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಎ.ವಿ.ಪ್ರಸಾದ್, ಸಹಾಯಕ ಸಾರಿಗೆ ಅಧಿಕಾರಿ ವೀರಣ್ಣ, ಉಪ ಪೊಲೀಸ್ ಅಧೀಕ್ಷಕ ಮಂಜುನಾಥ್, ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...