ತುಮಕೂರು | ಕೆಎಸ್‌ಆರ್‌ಟಿಸಿ ಕಂಡಕ್ಟರ್‌ ಮೇಲೆ ಪ್ರಯಾಣಿಕರಿಂದ ಹಲ್ಲೆ

Date:

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರು ಎಲೆ-ಅಡಿಕೆ ಜಗಿದು ಉಗಿದಿದ್ದನ್ನು ಪ್ರಶ್ನಿಸಿದ ಕಂಡಕ್ಟರ್‌ ಮೇಲೆ ಪ್ರಯಾಣಿಕರು ಹಲ್ಲೆ ನಡೆಸಿರುವ ಘಠನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ.

ಪಾವಗಡದಿಂದ ತುಮಕೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಘಟನೆ ನಡೆದಿದೆ. ಬಸ್‌ನ ಕಂಡಕ್ಟರ್‌ ಅನಿಲ್ ಕುಮಾರ್​ ಮೇಲೆ ಪ್ರಯಾಣಿಕರು ಹಲ್ಲೆ ಮಾಡಿದ್ದಾರೆ. ಬೆಂಗಳೂರಿಗೆ ಪ್ರಯಾಣಿಸಬೇಕಿದ್ದ ಆರು ಮಂದಿ ತುಮಕೂರಿಗೆ ಹೊರಟಿದ್ದ ಬಸ್‌ ಹತ್ತಿದ್ದಾರೆ. ಬಸ್‌ ಬೆಂಗಳೂರಿಗೆ ಹೋಗುವುದಿಲ್ಲ. ಬೇರೊಂದು ಬಸ್‌ನಲ್ಲಿ ಹೋಗಿರಿ ಎಂದು ಕಂಡಕ್ಟರ್‌ ಅವರನ್ನು ಬಸ್‌ನಿಂದ ಇಳಿಸಿದ್ದಾರೆ. ಈ ವೇಳೆ, ಆರು ಮಂದಿಯಲ್ಲಿದ್ದ ಓರ್ವ ಮಹಿಳೆ ಬಸ್‌ನಲ್ಲಿಯೇ ಎಲೆ-ಅಡಿಕೆಯ ಎಂಜಲು ಉಗಿದಿದ್ದಾರೆ ಎಂದು ಹೇಳಲಾಗಿದೆ.

ಮಹಿಳೆ ಎಂಜಲು ಉಗಿದಿದ್ದನ್ನು ಕಂಡಕ್ಟರ್‌ ಪ್ರಶ್ನಿಸಿದ್ದು, ಆಕೆಗೆ ಬೈದಿದ್ದಾರೆ. ಉಗಿದಿದ್ದ ಎಂಜಲನ್ನು ಸ್ವಚ್ಛಗೊಳಿಸುವಂತೆ ಮಹಿಳೆಗೆ ಸೂಚಿಸಿದ್ದಾರೆ. ಇದರಿಂದ ಕುಪಿತಗೊಂಡ ಮಹಿಳೆಯ ಜೊತೆಗಿದ್ದವರು ಕಂಡಕ್ಟರ್ ಜೊತೆ ಜಗಳಕ್ಕಿಳಿದಿದ್ದಾರೆ. ಗಲಾಟೆಗೆ ವಿಕೋಪಕ್ಕೆ ತಿರುಗಿದ್ದು, ಕಂಡಕ್ಟರ್‌ ಮೇಲೆ ಹಲ್ಲೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಸಂಬಂಧ ಕಂಡಕ್ಟರ್ ಅನಿಲ್ ಕುಮಾರ್ ಪಾವಗಡ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...