ತುಮಕೂರು | ವೈದ್ಯಕೀಯ ಸಂಶೋಧನೆಯಿಂದ ಜೀವಿತಾವಧಿ ವಿಸ್ತರಣೆ : ಗೃಹ ಸಚಿವ ಡಾ. ಜಿ ಪರಮೇಶ್ವರ

Date:

ವೈದ್ಯಕೀಯ ಸಂಶೋಧನೆಯು ಆರೋಗ್ಯ, ರೋಗಗಳ ಶೀಘ್ರ ಪತ್ತೆ ಮತ್ತು ಮಾನವ ಶರೀರಶಾಸ್ತ್ರದ ವ್ಯವಸ್ಥಿತ ತನಿಖೆಗೆ ಸಹಕಾರಿಯಾಗುತ್ತದೆ. ವೈದ್ಯಕೀಯ ಸಂಶೋಧನೆಗಳಿಂದ ಆರೋಗ್ಯದ ಫಲಿತಾಂಶಗಳನ್ನು ಬೇಗ ಸುಧಾರಿಸುವ ಮತ್ತು ಜೀವಿತಾವಧಿಯನ್ನು ವಿಸ್ತರಿಸುವುದಕ್ಕೆ ಸಹಕಾರಿಯಾಗುವುದರಿಂದ ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರವಾಗಿ ಸಂಶೋಧನೆಗಳು ಅಗತ್ಯವಿದೆ ಎಂದು ಸಾಹೇ ವಿವಿಯ ಕುಲಾಧಿಪತಿ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ  ಪ್ರತಿಪಾದಿಸಿದ್ದಾರೆ.

ತುಮಕೂರು ನಗರ ಸಮೀಪದ ಅಗಳಕೋಟೆಯಲ್ಲಿರುವ ಶ್ರೀ ಸಿದ್ದಾರ್ಥ ದಂತ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ‘ಸವ್ಯಸಾಚಿ ಸಭಾಂಗಣ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ವೈದ್ಯಕೀಯ ಆವಿಷ್ಕಾರಗಳು ಮತ್ತು ಸಂಶೋಧನೆಗಳು, ರೋಗಗಳ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗೆ ಸಹಕಾರಿಯಾಗುತ್ತವೆ. ಅಲ್ಲದೆ ಆರೋಗ್ಯದ ಬಗ್ಗೆ ಜ್ಞಾನವನ್ನು ಪಡೆಯಲು, ವೈಜ್ಞಾನಿಕ ವಿಧಾನಗಳನ್ನು ಬಳಸಲು ಹಾಗೂ ಸಾಂಕ್ರಾಮಿಕ ರೋಗಗಳ ಅಧ್ಯಯನ ಮಾಡಲು ಸಹಕಾರಿಯಾಗುತ್ತವೆ ಎಂದರು.

ರಾಜ್ಯದ 50 ಡೆಂಟಲ್ ಕಾಲೇಜುಗಳ ಪೈಕಿ ಶ್ರೀ ಸಿದ್ದಾರ್ಥ ದಂತ ವೈದ್ಯಕೀಯ ಕಾಲೇಜು ಒಂದಾಗಿದೆ. ಗ್ರಾಮೀಣ ಪ್ರದೇಶಗಳ ಸಾಮಾನ್ಯ ಬಡಜನರಿಗೆ ಚಿಕಿತ್ಸೆ ನೀಡಲು ಸ್ಥಾಪಿಸಲಾದ ಕಾಲೇಜು, ಅದರ ಜೊತೆಗೆ ದಂತ ವಿದ್ಯಾರ್ಥಿಗಳ ಕಲಿಕೆ ಮತ್ತು ಉದ್ಯೋಗ ಸೇರಿದಂತೆ ಇತರೆ ಸೇವೆಗಳಿಗೆ ಅನುಕೂಲಕರವಾಗಿದೆ. ಸುಸಜ್ಜಿತ ಹಾಗೂ ಉತ್ತಮ ಗುಣಮಟ್ಟದ ದಂತ ವೈದ್ಯಕೀಯ ಸಾಧನ-ಸಲಕರಣೆಗಳನ್ನು ಅಳವಡಿಸಿಕೊಂಡು ಆರೋಗ್ಯ ಸೇವೆ ನೀಡಲಾಗುತ್ತಿದೆ ಎಂದು ಡಾ. ಜಿ.ಪರಮೇಶ್ವರ ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಶೋಧನೆ ಹೆಚ್ಚಾಗಲಿ:

ದಂತ ಕಾಲೇಜಿನಲ್ಲಿ ನಡೆಯುವ ಕಾರ್ಯಾಗಾರಗಳು ವಿದ್ಯಾರ್ಥಿಗಳಿಗೆ ಉಪಯೋಗವಾಗಲಿವೆ. ಮುಂದೆ ಅನೇಕ ಸಂಶೋಧನೆ ನಡೆಯಲಿವೆ. ಶೈಕ್ಷಣಿಕ ಸಂಶೋಧನೆ ಸೇರಿದಂತೆ ಇತರೆ ಗುಣಮಟ್ಟದ ಚಿಕಿತ್ಸೆಗಳನ್ನು ನೀಡಲು ಸಂಶೋಧನೆಗಳು ನಡೆಯುತ್ತಿವೆ ಎಂದ ಅವರು, ಜನಸಾಮನ್ಯರಿಗೆ ಆರೋಗ್ಯ ಸೇವೆ ಕೊಡಲು ಅನೇಕ ರೀತಿಯ ಯೋಜನೆ ರೂಪಿಸಿದ್ದೇವೆ. ಇದು ನಮ್ಮ ತಂದೆಯ ಗಂಗಾಧರಯ್ಯನವರ ಕನಸ್ಸಾಗಿತ್ತು. ತುಮಕೂರಿನ ನಾಗರಿಕರಿಗೆ ಎಲ್ಲಾ ರೀತಿಯ ಚಿಕಿತ್ಸೆ ನೀಡಲು ಅನೇಕ ಉಚಿತ ಸರ್ಕಾರಿ ಅರೋಗ್ಯ ಯೋಜನೆಗಳನ್ನು ಆಸ್ಪತ್ರೆಯಲ್ಲಿ ಅಳವಡಿಸಿಕೊಳ್ಳಲಾಗಿದೆ ಎಂದು ಪರಮೇಶ್ವರ್  ತಿಳಿಸಿದರು.

1001640008

ಮೆಡಿಕಲ್ ಮತ್ತು ಡೆಂಟಲ್ ಜರ್ನಲ್ ಗಳಲ್ಲಿ ಲೇಖನ ಪ್ರಕಟಿಸಿ :

ವಿದ್ಯಾರ್ಥಿಗಳು ಪ್ರಾಯೋಗಿಕ ತರಬೇತಿಯಲ್ಲದೆ, ದಂತ, ವೈದ್ಯಕೀಯ ವಿಷಯಗಳ ಕುರಿತ ಜನರ್ಲ್ಗಳಲ್ಲಿ ಲೇಖನ ಪ್ರಕಟಿಸಿ, ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಒಡ್ಡುವಷ್ಟು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಂಡು ಪ್ರಗತಿಯತ್ತ ಹೆಜ್ಜೆ ಹಾಕಿ. ಪ್ರಾಧ್ಯಾಪಕರು ಬೇರೆ ಬೇರೆ ದೇಶಗಳಿಗೆ ಹೋಗಿ ಅಧ್ಯಯನ ಮಾಡಿ, ಅಲ್ಲಿನ ಚಿಕಿತ್ಸಾ ವಿಧಾನಗಳು ಮತ್ತು ತಾಂತ್ರಿಕತೆ ಬಳಕೆಯನ್ನು ಅಳವಡಿಸಿಕೊಳ್ಳಬೇಕು ಎಂದು ಡಾ.ಪರಮೇಶ್ವರ್ ತಿಳಿಸಿದರು.

ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ ಅವರು ಮಾತನಾಡಿ, ರೋಗಿಗಳಿಗೆ ಚಿಕಿತ್ಸೆ ನೀಡಲು ಆಧುನಿಕ ಸಲಕರಣೆಗಳು ಮತ್ತು ಚಿಕಿತ್ಸಾ ಕ್ರಮಗಳನ್ನು ಅನುಸರಿಸಿ ಎಂದು ಸಲಹೆ ನೀಡಿದರು.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಮಾತನಾಡಿ, ತುಮಕೂರಿನಂತಹ ಪ್ರದೇಶದಲ್ಲಿ ಆಧುನಿಕ ವೈದ್ಯಕೀಯ ಸಲಕರಣೆಗಳನ್ನು ಹೊಂದಿರುವ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ ಜೊತೆಗೆ ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶದ ಜನಸಮುದಾಯಕ್ಕೆ ನೆರವಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಕಾರ್ಯಾಗಾರದಲ್ಲಿ ಪ್ರಾಸ್ತವಿಕ ನುಡಿಗಳನ್ನಾಡಿದ ಶ್ರೀ ಸಿದ್ದಾರ್ಥ ದಂತ ಕಾಲೇಜಿನ ಪ್ರಾಂಶುಪಾಲ ಡಾ.ಪ್ರವೀಣ್ ಬಿ. ಕುಡುವಾ, ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡದ ಜೊತೆಗೆ ಆಧುನಿಕ ಸಲಕರಣೆಗಳನ್ನು ಬಳಸಲಾಗುತ್ತಿದೆ. ವಿದ್ಯಾರ್ಥಿಗಳ ಪ್ರಾಯೋಗಿಕ ಕಲಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಸರ್ಕಾರದಿಂದ ಪ್ರತಿಷ್ಠಿತ ‘ಐಸಿಎಂಆರ್’ ಸಂಶೋಧನೆಗಳಿಗೆ ಅನುದಾನ ಪಡೆದ ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮತ್ತು ಮಾರ್ಗದರ್ಶನ ಮಾಡಿದ ಪ್ರಾಧ್ಯಾಪಕರಿಗೆ ನೆನಪಿನ ಕಾಣಿಕ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಾಹೇ ರಿಜಿಸ್ಟಾರ್ ಡಾ.ಅಶೋಕ ಮೆಹ್ತಾ, ಪರೀಕ್ಷಾ ನಿಯಂತ್ರಕ ಡಾ.ಗುರುಶಂಕರ್, ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ್ ವೀರಯ್ಯ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಮಹಾನಗರ ಪಾಲಿಕೆಯ ಆಯುಕ್ತರಾದ ಅಶ್ವಿಜಾ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ, ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...