ತುಮಕೂರು | ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Date:

ತುಮಕೂರು ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಕಚೇರಿ ಸಿಬ್ಬಂದಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಶನಿವಾರ ಬೆಳಿಗ್ಗೆ 11ಕ್ಕೆ ಲೋಕಾಯುಕ್ತ ಎಸ್‌ಪಿ ವಲಿಬಾಷ ನೇತೃತ್ವದಲ್ಲಿ ಬೆಂಗಳೂರು ಮತ್ತು ತುಮಕೂರಿನ ಸುಮಾರು 25ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಇಡೀ ಕಚೇರಿಯನ್ನು ತಮ್ಮ ಹಿಡಿತಕ್ಕೆ ಪಡೆದು ವಿವಿಧ ಶಾಖೆಗಳಲ್ಲಿ ಅಗತ್ಯ ದಾಖಲಾತಿಗಳ ಪರಿಶೀಲನೆ ನಡೆಸಿದರು.

6 ವಾಹನಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ಮಹಾನಗರ ಪಾಲಿಕೆಯ ಕಂದಾಯ ಶಾಖೆ, ಎಂಜಿನಿಯರ್ ಶಾಖೆ, ಆರೋಗ್ಯ ಶಾಖೆ, ಯುಜಿಡಿ ಸೇರಿದಂತೆ ಹಲವು ಶಾಖೆಗಳಿಗೆ ತೆರಳಿ ಅಗತ್ಯ ಕಡತಗಳು, ದಾಖಲಾತಿಗಳ ತಪಾಸಣೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ಕೇಳಿ ಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪಾಲಿಕೆಯ ಹಲವು ಶಾಖೆಗಳನ್ನು ಜಾಲಾಡಿದರು.

ಮಹಾನಗರ ಪಾಲಿಕೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದಾಗ ಕಚೇರಿಯ ಆವರಣದಲ್ಲಿ ಮಧ್ಯವರ್ತಿಗಳನ್ನು ವಶಕ್ಕೆ ಪಡೆದು ಅವರ ಕೆಲಸ ಕಾರ್ಯಗಳ ಬಗ್ಗೆ ವಿಚಾರಣೆ ನಡೆಸಿದರು.

ಮಹಾನಗರ ಪಾಲಿಕೆಯ ಹೊಸ ಆಡಳಿತ ಕಚೇರಿ ಸೇರಿದಂತೆ ಇಡೀ ಮಹಾನಗರ ಪಾಲಿಕೆಯ ಕಚೇರಿ ಆವರಣವನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ಸಂಪೂರ್ಣ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಗೆ ತಮ್ಮ ಕೆಲ ಕಾರ್ಯಗಳಿಗಾಗಿ ಪಾಲಿಕೆ ಕಚೇರಿಗೆ ಬಂದಿದ್ದ ಸಾರ್ವಜನಿಕರು ಹೊರ ಬರಲಾಗದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ರಾಜ್ಯಾದ್ಯಂತ ನಾಮಫಲಕಗಳಲ್ಲಿ ಕನ್ನಡಕ್ಕೆ ಶೇ.60ರಷ್ಟು ಅವಕಾಶ ನೀಡಬೇಕು: ಕರವೇ ರಾಜ್ಯಾಧ್ಯಕ್ಷ

ಮಹಾನಗರ ಪಾಲಿಕೆಯ ಎಲ್ಲ ಶಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ.

ದಾಳಿಯಲ್ಲಿ ಲೋಕಾಯುಕ್ತ ಎಸ್‌ಪಿ ವಲಿಭಾಷ, ಡಿವೈಎಸ್‌ಪಿ ಉಮಾಶಂಕರ್, ಇನ್ಸ್‌ಪೆಕ್ಟರ್ ರಾಮಕೃಷ್ಣ ಸೇರಿದಂತೆ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...