ತುಮಕೂರು | ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು, ಕಿರುಕುಳ ಆರೋಪ

Date:

ಪೊಲೀಸರ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ತುರುವೇಕೆರೆ ಪೊಲೀಸರ ಕಿರುಕುಳದಿಂದಲೇ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆರೋಪಿಸುತ್ತಿದ್ದಾರೆ.

ಅ.23ರಂದು ವಿಠಲದೇವರಹಳ್ಳಿ ಬಳಿ ಇಸ್ಪಿಟ್ ಜೂಜಾಟದ ಅಡ್ಡೆಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ನಾಲ್ವರನ್ನ ವಶಕ್ಕೆ ಪಡೆದು, ಪೊಲೀಸ್ ಠಾಣೆಗೆ ಕರೆದುಕೊಂಡು ಬರುವಾಗ ಕುಮಾರ್ ಆಚಾರ್ ಮೃತಪಟ್ಟಿದ್ದರು. ಪೊಲೀಸರೇ ಕುಮಾರ್ ಆಚಾರ್ ಸಾವಿಗೆ ಕಾರಣ ಎಂದು ಸಂಬಂಧಿಕರು ಹಾಗೂ ಮಾಜಿ ಶಾಸಕ ಮಸಾಲೆ ಜಯರಾಮ್ ಆರೋಪಿಸಿದ್ದಾರೆ.

ಕುಮಾರ್ ಆಚಾರ್​ನ ಸಾವನ್ನು ಸಹಜ ಸಾವು ಎಂದು ಪೊಲೀಸರು ದಾಖಲಿಸಿದ್ದಾರೆ. ಸಾವಿಗೆ ನ್ಯಾಯ ಒದಗಿಸಿ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...