ತುಮಕೂರು | ಮೀಟರ್ ಬಡ್ಡಿ ದಂಧೆಯ ಕಿರುಕುಳ: ವಿಡಿಯೋ ಮಾಡಿಟ್ಟು ಬೇಕರಿ ಮಾಲೀಕ ಆತ್ಮಹತ್ಯೆ

Date:

ಮೀಟರ್ ಬಡ್ಡಿ ಕಿರುಕುಳಕ್ಕೆ ಬೇಸತ್ತು ತುಮಕೂರು ಜಿಲ್ಲೆಯ ಗುಬ್ಬಿ ಹೊರವಲಯದ ಸಿಐಟಿ ಕಾಲೇಜು ಬಳಿ ಇರುವ ಬೇಕರಿ ಅಂಗಡಿಯ ಮಾಲೀಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಬಸವರಾಜು(45) ಎಂದು ಗುರುತಿಸಲಾಗಿದೆ. ಸಾವಿಗೆ ಶರಣಾಗುವುದಕ್ಕೂ ಮುನ್ನ ಮಾಡಿರುವ ವಿಡಿಯೋದಲ್ಲಿ ಮೀಟರ್ ಬಡ್ಡಿ ದಂಧೆ, ಕಿರುಕುಳದ ಬಗ್ಗೆ ಉಲ್ಲೇಖಿಸಿದ್ದಾರೆ.

ಸಿಐಟಿ ಕಾಲೇಜು ಮುಂಭಾಗ ಬೇಕರಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದ ಮೃತ ಬಸವರಾಜು, ಚೆಕ್ ನೀಡಿ ಪಡೆದಿದ್ದ ಸಾಲಕ್ಕೆ ಮೀಟರ್ ಬಡ್ಡಿ ನೀಡುವಂತೆ ಮೀಟರ್ ಬಡ್ಡಿ ನಾಗ ಎಂಬ ವ್ಯಕ್ತಿ ಕೇಳಿರುವುದಾಗಿ ನೇರ ಆರೋಪ ಮಾಡಿದ್ದಾರೆ. ಬಡ್ಡಿಗೆ ಸಾಲ ನೀಡಿದ್ದ ನಾಗ ಎಂಬಾತನ ಎಲ್ಲ ಸಾಲವನ್ನೂ ತೀರಿಸಿದ್ದೇನೆ. ಆದರೂ ನನಗೆ ಕಿರುಕುಳ ನೀಡುತ್ತಿದ್ದ. ಹಾಗಾಗಿ, ಈ ನಿರ್ಧಾರ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ತನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿ, ನಂತರ ಬೇಕರಿಯಲ್ಲೇ ಆತ್ಮಹತ್ಯೆ ಶರಣಾಗಿದ್ದಾರೆ. ಇವರು ಪತ್ನಿ, ಮಗುವನ್ನು ಅಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾಗುಗೆ ನಾನು ಸಾಲ ಎಲ್ಲ ಕೊಟ್ಟಿದ್ದೀನಿ. ಅವನು ಕೊಟ್ಟಿದ್ದ ಚೆಕ್ ವಾಪಸ್ ಕೊಡದೆ ಬೆದರಿಸುತ್ತಿದ್ದಾನೆ. ತುಂಬಾ ರೌಡಿಸಂ ಮಾಡುತ್ತಿದ್ದಾನೆ. ನಂದಿನಿ ಪಾರ್ಲರ್ ನವನು ಓಡಿ ಹೋಗಲು ಇವನೇ ಕಾರಣ. ಯಾವುದೇ ಸಾಲ ಇಲ್ಲದಿದ್ದರೂ ತುಂಬಾ ಕಿರುಕುಳ ನೀಡುತ್ತಿದ್ದಾನೆ. ಎಷ್ಟೋ ಜನ ಇವನಿಂದ ಹೆದರಿ ಓಡಿ ಹೋಗಿದ್ದಾರೆ. ತುಂಬಾ ರೌಡಿಸಂ ಮಾಡುತ್ತಾನೆ. ನನಗೆ ಅವರು ಗೊತ್ತು ಇವರು ಗೊತ್ತು ವಾಸಣ್ಣ ಗೊತ್ತು ಎಂದು ಹೆದರಿಸುತ್ತಾನೆ. ಈತನ ಬಗ್ಗೆ ಹಲವು ಬಾರಿ ಕೇಸ್ ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ವಿಡಿಯೋದಲ್ಲಿ ಹೇಳಿರುವ ಮೃತನ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನು ಓದಿದ್ದೀರಾ? ವಿಜಯನಗರ | ತಾಡಪಲ್‌ ದರ ದುಪ್ಪಟ್ಟು : ಬೆಲೆ ಕಡಿಮೆಗೊಳಿಸಲು ಆಗ್ರಹಿಸಿ ರೈತ ಸಂಘದಿಂದ ಮನವಿ

ಆತ್ಮಹತ್ಯೆಯ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೀಟರ್ ಬಡ್ಡಿ ದಂಧೆಯ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸಿ, ಹೆಡೆಮುರಿ ಕಟ್ಟುವರೇ ಕಾದು ನೋಡಬೇಕಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...