ತುಮಕೂರು | ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ; ಶಿಕ್ಷಕ ಅಮಾನತು

Date:

ಶಾಲಾ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಪಾವಗಡ ತಾಲೂಕು ಸಾಸಲುಕುಂಟೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ನಾಗಭೂಷಣ್ ಪಿ. ಎಂಬುವರನ್ನು ಅಮಾನತುಗೊಳಿಸಲಾಗಿದೆ.

ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಎಂ.ಆರ್.ಮಂಜುನಾಥ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದು, ವಿಚಾರಣೆ ಕಾಯ್ದಿರಿಸಿದ್ದಾರೆ. ಶಿಕ್ಷಕ ನಾಗಭೂಷಣ್‌ ಪಿ ವಿರುದ್ಧ ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶಿಕ್ಷಕನ ನಡವಳಿಕೆಗಳು ಜವಾಬ್ದಾರಿಯುತ ಸರ್ಕಾರಿ ನೌಕರನಿಗೆ ತರವಲ್ಲದ ವರ್ತನೆಯಾಗಿದ್ದು, ವಿದ್ಯಾರ್ಥಿ ಸಮುದಾಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಅಲ್ಲದೆ, ಶಿಕ್ಷಕನ ವಿರುದ್ಧದ ಎಲ್ಲ ಆರೋಪಗಳು ಮೇಲ್ನೊಟಕ್ಕೆ ನೈಜವೆಂದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ, ಶಿಕ್ಷಕನ ವಿರುದ್ಧ ಶಿಸ್ತು ಕ್ರಮ ಜರುಗಿಸಲು ನಿರ್ಣಯಿಸಿ ವಿಚಾರಣೆಯನ್ನು ಕಾಯ್ದಿರಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಅಮಾನತು ಪತ್ರದಲ್ಲಿ ತಿಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...