ತುಮಕೂರು | ರೈತಭವನ ಉದ್ಘಾಟಿಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ

Date:

ರೈತ ಹೋರಾಟಗಾರರ ಹೆಸರನ್ನು ಮುಂದಿನ ಪೀಳಿಗೆಗೆ ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ತುಮಕೂರಿನ ಕರ್ನಾಟಕ ರಾಜ್ಯ ರೈತ ಸಂಘದಿಂದ ಹೆಬ್ಬೂರಿನಲ್ಲಿ ಕೆ ಎಸ್ ಪುಟ್ಟಣ್ಣಯ್ಯ ಅವರ ಹೆಸರಿನಲ್ಲಿ ಭವನ ನಿರ್ಮಾಣ ಮಾಡಿ, ಅವರ ಪುತ್ಥಳಿ ಆನಾವರಣ ಮಾಡಿ, ಹೊಸ ಪದ್ದತಿಗೆ ನಾಂದಿ ಹಾಡಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಭಿಪ್ರಾಯಪಟ್ಟರು.

ತುಮಕೂರಿನ ಹೆಬ್ಬೂರಿನಲ್ಲಿ ರೈತ ಸಂಘದದಿಂದ ಆಯೋಜಿಸಿದ್ದ ರೈತ ಭವನ ಉದ್ಘಾಟನೆ ಹಾಗೂ ಕೆ ಎಸ್ ಪುಟ್ಟಣ್ಣಯ್ಯ ಪುತ್ಥಳಿ ಆನಾವರಣ ಮತ್ತು 6ನೇ ವರ್ಷದ ನೆನಪಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

“ರೈತ ಸಂಘವೇ ತನ್ನ ಸ್ವಂತ ಅನುದಾನದಲ್ಲಿ ಒಂದು ಭವನ ನಿರ್ಮಾಣ ಮಾಡುವ ಮೂಲಕ ಇಡೀ ರೈತ ಸಂಘಕ್ಕೆ ಒಂದು ನೆಲೆಯನ್ನು ಕಲ್ಪಿಸಿದೆ. ಇದು ಮಾದರಿ ಕೆಲಸವಾಗಿದೆ” ಎಂದ ಅವರು, ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿಯೂ ಈ ರೀತಿಯ ಭವನ ನಿರ್ಮಾಣಕ್ಕೆ ಮುಂದಾಗುವುದಾಗಿ ತಿಳಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪುಟ್ಟಣ್ಣಯ್ಯ ರೈತ ಭವನ ಉದ್ಘಾಟಿಸಿ ಮಾತನಾಡಿದ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರಪ್ಪ, “ರೈತ ಸಂಘದ ಅಧ್ಯಕ್ಷರಾಗಿದ್ದ ದಿವಂಗತ ಕೆ ಎಸ್ ಪುಟ್ಟಣ್ಣಯ್ಯ ಅವರ ಕನಸು ಇದಾಗಿತ್ತು. ಪ್ರತಿ ಜಿಲ್ಲೆಯಲ್ಲಿಯೂ ಒಂದೊಂದು ಭವನ ನಿರ್ಮಾಣ ಮಾಡಬೇಕೆಂಬ ಮಹಾದಾಸೆಯನ್ನು ಹೊಂದಿದ್ದರು. ಆದನ್ನು ಇಂದು ತುಮಕೂರು ಜಿಲ್ಲೆಯವರು ನೇರವೇರಿಸಿದ್ದಾರೆ. ಇನ್ನೂ ಉಳಿದ ಜಿಲ್ಲೆಗಳಲ್ಲಿ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಹಂತ ಹಂತವಾಗಿ ಎಲ್ಲ ಜಿಲ್ಲೆಗಳಲ್ಲಿಯೂ ಈ ಕೆಲಸ ಮಾಡಲಿದ್ದೇವೆ” ಎಂಬ ವಿಶ್ವಾಸ ವ್ಯಕ್ತಪಡಿಸಿದರು.

“ಎರಡನೇ ಬಾರಿಗೆ ದೆಹಲಿಯಲ್ಲಿ ಲಕ್ಷಾಂತರ ರೈತರ ಅನಿರ್ದಿಷ್ಟಾವಧಿ ಮುಷ್ಕರವನ್ನು ಆರಂಭಿಸಿದ್ದಾರೆ. ಆದರೆ ಅವರು ದೆಹಲಿಯ ಒಳ ಪ್ರವೇಶಿಸಿದಂತೆ ತಂತಿ ಬೇಲಿ, ಸಿಮೆಂಟ್ ಗೋಡೆಗಳನ್ನು ನಿರ್ಮಿಸಿ ತಡೆಯುವ ಪ್ರಯತ್ನ ನಡೆಸಿದೆ. ಇದು ನಿಜಕ್ಕೂ ಸರ್ವಾಧಿಕಾರಿ ಧೋರಣೆ. ಇದನ್ನು ಖಂಡಿಸಿ ರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯಲಿವೆ. ಹಾಗೆಯೇ ರಾಜ್ಯದಲ್ಲಿ ಕರಾಳ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಮುಂದಿನ ದಿನಗಳಲ್ಲಿ ಪ್ರತಿಭಟನೆಗಳು ನಡೆಯಲಿವೆ. ಎಲ್ಲರೂ ಕೈಜೋಡಿಸಬೇಕು” ಎಂದು ಮನವಿ ಮಾಡಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಆದಿ ಚುಂಚನಿಗಿರಿಯ ಶಾಖಾ ಮಠದ ಮಂಗಳನಾಥಸ್ವಾಮೀಜಿ ಮಾತನಾಡಿ, “ವಿಧಾನಸಭೆಯಲ್ಲಿ ರೈತರ ಬಗ್ಗೆ ಅತ್ಯಂತ ನಿಖರವಾಗಿ ಅಂಕಿ, ಆಂಶಗಳ ಮೂಲಕ ಮಾತನಾಡುತ್ತಿದ್ದ ವ್ಯಕ್ತಿ ಕೆ ಎಸ್ ಪುಟ್ಟಣ್ಣಯ್ಯ. ಅವರ ಪುತ್ರ ದರ್ಶನ್ ಕೂಡ ಅದೇ ಹಾದಿಯಲ್ಲಿ ಸಾಗಿದ್ದಾರೆ. ರೈತ ಸಂಘ ತುಮಕೂರು ಜಿಲ್ಲಾ ಘಟಕ ಅವರ ಹೆಸರಿನಲ್ಲಿ ಭವನವೊಂದನ್ನು ನಿರ್ಮಿಸಿ, ಮುಂದಿನ ಪೀಳಿಗೆಗೆ ಪುಟ್ಟಣ್ಣಯ್ಯ ಅವರ ಹೆಸರನ್ನು ಹಸಿರಾಗಿಸಿದೆ. ಇದೊಂದು ಒಲ್ಳೆಯ ಕೆಲಸ. ಇಂತಹ ಕೆಲಸಗಳು ಮುಂದೆಯೂ ನಡೆಯಲಿ” ಎಂದು ಶುಭ ಹಾರೈಸಿದರು.

ಮಾಜಿ ಶಾಸಕ ಎಚ್ ನಿಂಗಪ್ಪ ಮಾತನಾಡಿ, “ಹೆಬ್ಬೂರಿನಲ್ಲಿ ರೈತಭವನ ನಿರ್ಮಾಣ ಮಾಡಿರುವುದು ನಿಜಕ್ಕೂ ಒಳ್ಳೆಯ ಬೆಳೆವಣಿಗೆ. ರೈತ ಸಂಘದ ಹಲವಾರು ಹೋರಾಟದ ಫಲವಾಗಿ ಹಲವಾರು ಕರಾಳ ಕಾಯ್ದೆಗಳನ್ನು ಸರ್ಕಾರ ಹಿಂಪಡೆದಿದೆ. ಇದು ನಿಜಕ್ಕೂ ರೈತರ ಹೋರಾಟದ ಒಂದು ಮೈಲಿಗಲ್ಲು. ಅದೇ ರೀತಿ ಎಂಎಸ್‌ಪಿ ಕಾಯ್ದೆಗಾಗಿ ಹೋರಾಟ ನಡೆಸುತ್ತಿರುವ ರೈತರು ಯಶಸ್ವಿಯಾಗಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಟಿಪ್ಪು‌ ಸುಲ್ತಾನ್ ಕಟೌಟ್ ತೆರವು ಮಾಡುವುದಿಲ್ಲ: ಡಿವೈಎಫ್ಐ

ರಾಜ್ಯ ರೈತ ಸಂಘದ ಅಧ್ಯಕ್ಷ ಎ.ಗೋವಿಂದರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅರೆ ಶಂಕರ ಮಠದ ಶ್ರೀಸಿದ್ದರಾಮಚೈತನ್ಯ ಸ್ವಾಮೀಜಿ, ರಾಜ್ಯ ರೈತ ಸಂಘದ ಉಪಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಮಹೇಶ್ ಪ್ರಭು, ರಾಜ್ಯ ಕಾರ್ಯದರ್ಶಿ ಗೋಪಾಲ್, ಜಿ ಸಿ ಶಂಕರಪ್ಪ, ರವೀಶ್ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...