ತುಮಕೂರು | ಮಗು ಸತ್ತರೂ ಊರಾಚೆಯೇ ಉಳಿದಿದ್ದ ತಾಯಿ; ಮನೆಗೆ ಸೇರಿಸಿದ ನ್ಯಾಯಾಧೀಶೆ

Date:

‘ಸೂತಕ ನಮ್ಮ ಮನೆ ದೇವರಿಗೆ ಆಗಲ್ಲ’ವೆಂದು ಹುಟ್ಟಿದ ಹಸುಗೂಸು ಮತ್ತು ಬಾಣಂತಿಯನ್ನು ಊರಾಚೆಯ ಗುಡಿಸಲಿಲ್ಲಿಯೇ ಇರಿಸಿ, ಹಸುಗೂಸು ಸಾವನ್ನಪ್ಪಿದ್ದ ಘಟನೆ ಭಾನುವಾರ ನಡೆದಿತ್ತು. ಚಳಿ-ಗಾಳಿ ತಾಳಲಾರದೆ ಮಗು ಸತ್ತ ಮೇಲೂ ಬಾಣಂತಿ ತಾಯಿಯನ್ನು ಊರಾಚೆಯ ಗುಡಿಸಲಿನಲ್ಲಿಯೇ ಇರಿಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದು, ಸ್ಥಳಕ್ಕೆ ದೌಡಾಯಿಸಿದ ತುಮಕೂರು ಸಿವಿಲ್ ನ್ಯಾಯಾಧೀಶೆ ಬಾಣಂತಿಯನ್ನು ಮನೆಗೆ ಕಳುಹಿಸಿದ್ದಾರೆ.

ತುಮಕೂರು ಜಿಲ್ಲೆಯ ಮಲ್ಲೇನಹಳ್ಳಿ ಗ್ರಾಮದ ಗೊಲ್ಲ ಸಮುದಾಯದ ಮಹಿಳೆಯೊಬ್ಬರು ಇಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಒಂದು ಮಗು ಹುಟ್ಟುವಾಗಲೇ ಸಾವನ್ನಪ್ಪಿತ್ತು. ಇನ್ನೊಂದು ಬದುಕುಳಿದಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಿಕೊಂಡು ಕರೆತಂದ ಮಹಿಳೆಯ ಕುಟುಂಬಸ್ಥರು, ಸೂತಕದ ಮೌಢ್ಯದಿಂದಾಗಿ ಆಕೆ ಮತ್ತು ಹಸುಗೂಸನ್ನು ಮಳೆ-ಗಾಳಿಯ ನಡುವೆಯೇ ಊರಾಚೆಯ ಗುಡಿಸಲಿನಲ್ಲಿ ಒಂಟಿಯಾಗಿ ಬಿಟ್ಟಿದ್ದರು.

ಮಳೆ, ಚಳಿ, ಗಾಳಿಯನ್ನು ತಾಳಲಾರದ ಹಸುಗೂಸು ಭಾನುವಾರ ಸಾವನ್ನಪ್ಪಿತ್ತು. ಅದಾದ ಮೇಲೂ, ಬಾಣಂತಿ ಮಹಿಳೆಯನ್ನು ಮನೆಗೆ ಕರೆದೊಯ್ಯದ ಕುಟುಂಬಸ್ಥರು ಆಕೆಯನ್ನು ಏಕಾಂಗಿಯಾಗಿ ಅದೇ ಗುಡಿಸಲಿನಿಲ್ಲಿ ಬಿಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಹಿತಿ ಪಡೆದ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸ ಅವರು ಸ್ಥಳಕ್ಕೆ ದಿಢೀರ್ ಭೇಟಿ ನೀಡಿ, ಮಹಿಳೆಯ ಕುಟುಂಬಸ್ಥರು ಮತ್ತು ಗ್ರಾಮಸ್ಥರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರಿಗೆ ಕಾನೂನುಗಳ ತಿಳುವಳಿಕೆ ನೀಡಿ, ಗುಡಿಸಲನ್ನು ಕೆಡವಿಸಿದ್ದು, ಬಾಣಂತಿಯನ್ನು ಮನೆಗೆ ಕಳುಹಿಸಿದ್ದಾರೆ.

ಈ ಸಂಧರ್ಭದಲ್ಲಿ ತಹಸೀಲ್ದಾರ್ ಸಿದ್ದೇಶ್, ಮಾನವ ಹಕ್ಕುಗಳ ಸೇವಾ ಕೇಂದ್ರದ ಅಧ್ಯಕ್ಷ ಸಿದ್ದಲಿಂಗೇಗೌಡ, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...