ತುಮಕೂರು | ಸಂಸದ ಸೋಮಣ್ಣನವರಿಂದ ಸಾಂಸ್ಕೃತಿಕ ದಾಳಿಯ ಸಂಚು : ಮಂಜುನಾಥ್ ಹೆತ್ತೇನಹಳ್ಳಿ ಕಿಡಿ

Date:

 ಕೇಂದ್ರ ಸಚಿವ ಹಾಗೂ ತುಮಕೂರು ಸಂಸದ ವಿ. ಸೋಮಣ್ಣನವರ ‘ಮೇಲ್ಜಾತಿಯವರನ್ನು ತುಳಿಯುವ ಸಲುವಾಗಿ ಜಾತಿವಾರು ಸಮೀಕ್ಷೆ ಮಾಡಲಾಗುತ್ತಿದೆ ಎಂಬ ಆರೋಪದ ಹಿಂದೆ ಮಹಾ ಮೋಸ ಅಡಗಿದೆ. ಮೇಲ್ಜಾತಿ ಅನ್ನೊ ಮಾತಿನ ಹಿಂದೆ ಬಹುದೊಡ್ಡ ರಾಜಕೀಯ ಮತ್ತು ಸಾಂಸ್ಕೃತಿಕ ದಾಳಿಯೂ ಇದೆ ಎಂದು ಕಾಂಗ್ರೆಸ್ ಮುಖಂಡ ಮಂಜುನಾಥ್ ಹೆತ್ತೇನಹಳ್ಳಿ ಹೇಳಿದರು. 

ತುಮಕೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನಸಂಖ್ಯೆಯಲ್ಲಿ ಸವರ್ಣೀಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂಬ ಸುಳ್ಳನ್ನೇ ಇಲ್ಲೀವರೆಗೂ ನಂಬಿಸಿ ಅಧಿಕಾರ ಹಿಡಿದಿದ್ದಾರೆ. ಅದನ್ನೇ ಇನ್ನೂ ಮುಂದುವರೆಸಲು ಸಾಧ್ಯವಿಲ್ಲ. ಇವರ ನಿಜ ಬಣ್ಣ ಸಮೀಕ್ಷೆಯಿಂದ ಬಯಲಾಗಲಿದೆ ಎಂಬ ಆತಂಕ ಸಂಸದ ಸೋಮಣ್ಣ ಅವರ ಹೇಳಿಕೆಯಿಂದ ಹೊರಬಿದ್ದಿದೆ ಎಂದರು.

ಬ್ರಾಹ್ಮಣರಿಗೆ ಇಡಬ್ಲ್ಯುಎಸ್ ನೀಡಿದಾಗ ಸೊಲ್ಲೆತ್ತದ ಸೋಮಣ್ಣ ಈಗ ಬಾಯಾಡಿಸಲು ಮುತುವರ್ಜಿ ವಹಿಸಿದ್ದಾರೆ. ಸರ್ವರಿಗೂ ಸಮಾನ ಗೌರವ ದೊರಕಲೆಂಬ ಬಸವಾದಿ ಶರಣರ ತತ್ವದ ವಿರುದ್ಧ ಸೋಮಣ್ಣನವರು ಮಾತನಾಡಿದ್ದಾರೆ. ತಾವು ಪ್ರತಿನಿಧಿಸುವ ಲಿಂಗಾಯತರೂ ಶೂದ್ರವರ್ಗಕ್ಕೆ ಸೇರಿದವರು ಎಂಬುದನ್ನು ಮೆರೆಯಬಾರದು. ಲಿಂಗಾಯತ ಪರಂಪರೆಯನ್ನು ಅರ್ಥಮಾಡಿಕೊಂಡಿದ್ದಾರೆಂದು ಭ್ರಮಿಸಿ ಹಿಂದುಳಿದ ವರ್ಗದ ಜನ ನಿಮ್ಮನ್ನು ಗೆಲ್ಲಿಸಿ ತಪ್ಪು ಮಾಡಿರುವ ಬಗ್ಗೆ ಈಗ ಜನರಿಗೆ ಮನವರಿಕೆಯಾಗುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮಣ್ಣನವರೇ ನೀವು ವಚನ ಪರಂಪರೆಯನ್ನು ಸರಿಯಾಗಿ ಓದಿಕೊಳ್ಳಬೇಕು. ಆಗ ನೀವು ಜನದನಿಯ ಸಾರಥಿಯಾಗುವಿರಿ. ಇಲ್ಲದಿದ್ದರೆ ಹೀಗೆ ನಿಮ್ಮ ನಯ ವಂಚಕತನ ಆಗಾಗ ಪ್ರದರ್ಶಿಸುತ್ತಲೇ ಇರಬೇಕಾಗುತ್ತದೆ. ಹಾಗಾಗಿ ತಮ್ಮ ಹೇಳಿಕೆಯನ್ನು ಹಿಂಪಡೆದು ಸಮೀಕ್ಷೆ ಪರವಾದ ನಿಲುವು ತಳೆಯುವಂತೆ ಮಂಜುನಾಥ್ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...