ತುಮಕೂರು ನಗರ ವಿಧಾನಸಭಾ ಕ್ಷೇತ್ರ : ಎಲ್ಲಾ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ

Date:

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ಕ್ಕೆ ಸಂಬಂಧಿಸಿದಂತೆ ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಮತಗಟ್ಟೆ ಹಾಗೂ ಪಾಲಿಕೆ ಕಚೇರಿಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಹಾಗೂ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಬಿ.ವಿ. ಅಶ್ವಿಜ ತಿಳಿಸಿದ್ದಾರೆ. 

     ತುಮಕೂರು ನಗರದ ಅರ್ಹ ಮತದಾರರು ಸಂಬಂಧಿಸಿದ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆ ಮಟ್ಟದ ಅಧಿಕಾರಿ(ಬಿಎಲ್‌ಓ)ಯ ಮೂಲಕ ಪ್ರಕಟಿತ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಣಿಯಾಗಿರುವ ಬಗ್ಗೆ ಪರಿಶೀಲಿಸಿ ಖಚಿತ ಪಡಿಸಿಕೊಳ್ಳಬೇಕು ಅಥವಾ ಮತದಾರರು ಸ್ವತಃ ಆನ್‌ಲೈನ್ ಮೂಲಕವು ನೇರವಾಗಿ ಪರಿಶೀಲಿಸಿಕೊಳ್ಳಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಮತದಾರರು ತಮ್ಮ ಹೆಸರು ನೋಂದಣಿಯಾಗದೇ ಇದ್ದಲ್ಲಿ ನಿಗಧಿತ ನಮೂನೆ-6, ಕೈಬಿಡತಕ್ಕ ಪ್ರಕರಣ ಇದ್ದಲ್ಲಿ ನಿಗಧಿತ ನಮೂನೆ-7 ಮತ್ತು ತಿದ್ದುಪಡಿ ಅಗತ್ಯವಿದ್ದಲ್ಲಿ ನಮೂನೆ-8ನ್ನು ಭರ್ತಿ ಮಾಡಿ ಸಂಬಂಧಿಸಿದ ಬಿಎಲ್‌ಓಗಳಿಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಅವರು ಮನವಿ ಮಾಡಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...