ತುಮಕೂರು | ಅಧಿಕಾರಿಗಳು ಕಾನೂನಿನ ಚೌಕಟ್ಟಿನೊಳಗೆ ಕೆಲಸ ಮಾಡಲು ಸೂಚನೆ : ಉಪಲೋಕಾಯುಕ್ತ

Date:

 ಸರ್ಕಾರಿ ಅಧಿಕಾರಿಗಳು ಕಾನೂನಿನ ಚೌಕಟ್ಟಿನೊಳಗೆ ಮಾತ್ರ ಕೆಲಸ ಮಾಡಬೇಕು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಸೂಚನೆ ನೀಡಿದರು. 

 ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜರುಗಿದ ತುಮಕೂರು ಹಾಗೂ ಕೊರಟಗೆರೆ ತಾಲ್ಲೂಕಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿ ತನಿಖೆಗೆ ಬಾಕಿ ಇರುವ ಪ್ರಕರಣಗಳ ವಿಚಾರಣಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪವತಿ ಖಾತೆಗೆ ಸಂಬAಧಿಸಿದAತೆ ಸುಮಾರು 4ಲಕ್ಷ ಅರ್ಜಿಗಳು ಬಾಕಿಯಿವೆ. ತಹಶೀಲ್ದಾರರು ಮನಸ್ಸು ಮಾಡಿದರೆ 4 ತಿಂಗಳಲ್ಲಿ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಬಹುದಾಗಿದೆ ಎಂದು ತಿಳಿಸಿದರು. 

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ವರ್ಷದಿಂದ ಅಭಿಯಾನದ ರೀತಿಯಲ್ಲಿ ಸುಮಾರು 25ಸಾವಿರ ಪವತಿ ಖಾತೆ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಸಾಕಷ್ಟು ಅರ್ಜಿಗಳಲ್ಲಿ ಹೆಣ್ಣು ಮಕ್ಕಳನ್ನು ಬಿಟ್ಟು ಪವತಿ ಖಾತೆ ಮಾಡಿಕೊಡಬೇಕೆಂದು ಬೇಡಿಕೆ ಇರುವುದರಿಂದ ಸುಮಾರು ಅರ್ಜಿಗಳು ಬಾಕಿ ಉಳಿದುಕೊಳ್ಳುತ್ತಿವೆ ಎಂದರಲ್ಲದೆ, ಪ್ರಸ್ತುತ ಪವತಿ ಖಾತೆ ಅರ್ಜಿ ವಿಲೇವಾರಿಯಲ್ಲಿ ಜಿಲ್ಲೆಯು ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಪ್ರತಿದಿನ ಹೋಬಳಿವಾರು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿ ಪವತಿ ಖಾತೆ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲು 500 ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಮಾತನಾಡಿದ ಉಪಲೋಕಾಯುಕ್ತರು, ಪವತಿ ಖಾತೆ ಅರ್ಜಿಗಳ ವಿಲೇವಾರಿಯಲ್ಲಿ ಸಿವಿಲ್ ವಿವಾದಗಳಿದ್ದಲ್ಲಿ ಹಿಂಬರಹ ನೀಡಬೇಕು. ಸರ್ಕಾರಿ ಕೆಲಸ ಮಾಡಲು ಅಧಿಕಾರಿ-ಸಿಬ್ಬಂದಿಗಳಿಗೆ ಇಚ್ಛಾಶಕ್ತಿ ಇರಬೇಕು. ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಬೇಕೇ ಹೊರತು ಬಾಕಿ ಉಳಿಸಿಕೊಳ್ಳಬಾರದು ಎಂದು ನಿರ್ದೇಶನ ನೀಡಿದರು.  

ವೈಯಕ್ತಿಕ ವಿಚಾರಗಳಿಗೆ ಅನಾವಶ್ಯಕವಾಗಿ ಲೋಕಾಯುಕ್ತಕ್ಕೆ ದೂರು ನೀಡುವುದನ್ನು ಸಾರ್ವಜನಿಕರು ನಿಲ್ಲಿಸಬೇಕು. ಇದರಿಂದ ಲೋಕಾಯುಕ್ತದ ಸಮಯ ಹಾಳಾಗುತ್ತದೆ. ಬಹುತೇಕ ಗ್ರಾಮೀಣ ಪ್ರದೇಶದ ದೂರುಗಳಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಂಬAಧಿಸಿದ್ದಾಗಿರುತ್ತದೆ. ಪಂಚಾಯತಿ ಅಧಿಕಾರಿಗಳು ಗ್ರಾಮಸ್ಥರಿಗೆ ನ್ಯಾಯ ಒದಗಿಸುವಂತಹ ಕೆಲಸ ಮಾಡಬೇಕು. ಕಾನೂನು ಮೀರಿ ಯಾವುದೇ ಕಾರ್ಯಗಳನ್ನು ಮಾಡಬಾರದು. ತಮ್ಮ ವ್ಯಾಪ್ತಿಯಲ್ಲಿ ಕಾನೂನು ಪರಿಧಿಯೊಳಗೆ ಬಗೆಹರಿಸಲು ಸಾಧ್ಯವಾಗದ ಅರ್ಜಿಗಳಿಗೆ ಹಿಂಬರಹ ನೀಡಿದಲ್ಲಿ ಅರ್ಜಿದಾರರು ನ್ಯಾಯಾಲಯಕ್ಕೆ ಹೋಗಲು ಅವಕಾಶವಾಗುತ್ತದೆ ಎಂದು ತಿಳಿಸಿದರು. 

ಡ್ರೆಸ್ ಕೋಡ್ ಪಾಲಿಸದ ಅಧಿಕಾರಿಗಳ ಮೇಲೆ ಉಪ ಲೋಕಾಯುಕ್ತರ ಗರಂ :

ಲೋಕಾಯುಕ್ತ ಪ್ರಕರಣಗಳನ್ನು ವಿಲೇವಾರಿ ಮಾಡುತ್ತಿರುವ ಸಂದರ್ಭದಲ್ಲಿ ಡ್ರೆಸ್ ಕೋಡ್ ಪಾಲಿಸದ ಅಧಿಕಾರಿಗಳನ್ನು ಕಂಡ ಅವರು ಕರ್ತವ್ಯದಲ್ಲಿದ್ದಾಗ ಸರ್ಕಾರಿ ಅಧಿಕಾರಿ/ಸಿಬ್ಬಂದಿ ಸರಿಯಾದ ಡ್ರೆಸ್ ಕೋಡ್ ಅನುಸರಿಸುವುದು ಕಡ್ಡಾಯ. ಡ್ರೆಸ್ ಕೋಡ್ ಅಧಿಕಾರಿಗಳ ಹುದ್ದೆ, ಶಿಸ್ತು ಮತ್ತು ಗೌರವದ ಪ್ರಮುಖ ಅಂಶವಾಗಿದ್ದು ಯಾವುದೇ ರೀತಿ ಅಸಡ್ಡೆ ತೋರದೆ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಉಪಲೋಕಾಯುಕ್ತ ಬಿ. ವೀರಪ್ಪ ಅವರು ಸೂಚಿಸಿದರು.

1002364350

ವಿಚಾರಣೆ ಸಂದರ್ಭದಲ್ಲಿ ಕೆಲವು ಪ್ರಕರಣಗಳು ಸ್ಥಳದಲ್ಲೇ ಪರಿಹರಿಸಬಹುದಾದ ಸಣ್ಣಪುಟ್ಟ ವಿಷಯಗಳಾಗಿದ್ದರೂ ಅವು ಲೋಕಾಯುಕ್ತದವರೆಗೆ ಬರುವುದರ ಬಗ್ಗೆ ವಿಷಾದ ವ್ಯಕ್ತಪಡಿಸಿದ ಅವರು, ಅಧಿಕಾರಿಗಳು ಸ್ಥಳೀಯ ಮಟ್ಟದಲ್ಲೇ ಉದಾಸೀನತೆ ತೋರದೇ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕು ಎಂದು ಸೂಚಿಸಿದರು.

ಜನರು ಕೆಲವೊಮ್ಮೆ ಅಧಿಕಾರಿಗಳ ವಿರುದ್ಧ ಸುಳ್ಳು ದೂರುಗಳನ್ನು ದಾಖಲಿಸುವುದು ಕಂಡುಬAದಿದೆ ಎಂದು ತಿಳಿಸಿದ ಅವರು, ಇಂತಹ ಪ್ರಕರಣಗಳನ್ನು ಗುರುತಿಸಲಾಗಿದ್ದು, ಮುಂದಿನ ದಿನಗಳಲ್ಲಿ ಸುಳ್ಳು ದೂರುಗಳನ್ನು ದಾಖಲಿಸುವವರ ವಿರುದ್ಧ ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬಾಕಿ ಪ್ರಕರಣಗಳ ವಿವರವಾದ ಪರಿಶೀಲನೆ, ಸಂಬAಧಿಸಿದ ಇಲಾಖೆಗಳ ಸ್ಪಷ್ಟೀಕರಣ ಮತ್ತು ತಕ್ಷಣ ವಿಲೇವಾರಿ ಮಾಡಬಹುದಾದ ಪ್ರಕರಣಗಳ ತ್ವರಿತ ಪರಿಹಾರಕ್ಕೆ ಕ್ರಮವಹಿಸಬೇಕೆಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಪವತಿ ಖಾತೆ, ಜಮೀನಿನ ಮುಟೇಷನ್, ಪಹಣಿ, ಅಕ್ರಮ ಖಾತೆ ಮತ್ತು ಪಹಣಿ, ರಾಜಗಾಲುವೆ ಒತ್ತುವರಿ, ದೇವಸ್ಥಾನದ ಜಾಗ ಒತ್ತುವರಿ, ರಸ್ತೆ ಒತ್ತುವರಿ, ನಕಾಶೆಯಂತೆ ಕಾಲುದಾರಿ ಬಿಡುವ ಬಗ್ಗೆ ವಿವಾದ, ಮಾಹಿತಿ ಹಕ್ಕು ಅರ್ಜಿ, ನರೇಗಾ ಕಾಮಗಾರಿ ಕೂಲಿ ಪಾವತಿ, ವೇತನ ಪಾವತಿ ವಿಳಂಬ, ಕರ್ತವ್ಯ ಲೋಪ, ಸೇರಿದಂತೆ ಮತ್ತಿತರ ತಕರಾರು ಅರ್ಜಿಗಳಿಗೆ ವಿಚಾರಣೆ ನಡೆಸಲಾಯಿತು.

ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ ಉಪನಿಬಂಧಕ ಅರವಿಂದ ಎನ್.ವಿ., ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ತುಮಕೂರು ಮಹಾನಗರಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ತುಮಕೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಲಕ್ಷ್ಮೀನಾರಾಯಣ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...