ಒಪಿಡಿ ಬಂದ್ : ತುಮಕೂರಿನಲ್ಲಿ ವೖದ್ಯರಿಂದ ಮೌನ ಪ್ರತಿಭಟನೆ

Date:

ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿನಿಯ ಅಮಾನುಷ ಹತ್ಯೆ ಮತ್ತು ಮುಂದುವರೆದು ಪ್ರತಿಭಟನೆ ನಿರತ ವೈದ್ಯರನ್ನು ಗುರಿಯಾಗಿಸಿಕೊಂಡು ಗುಂಪೊಂದು ಹಲ್ಲೆ ಮಾಡಿ ಅರಾಜಕತೆ ಮೆರೆದಿರುವುದನ್ನು ಖಂಡಿಸಿ ತುರ್ತು ಸೇವೆ ವಿಭಾಗವನ್ನು ಹೊರತುಪಡಿಸಿ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಹೊರರೋಗಿ (ಒಪಿಡಿ) ವೈದ್ಯಕೀಯ ಸೇವೆ ಬಂದ್ ಮಾಡಿ ತುಮಕೂರು ಜಿಲ್ಲೆಯಲ್ಲಿ ವೖದ್ಯರು ಮೌನ ಪ್ರತಿಭಟನೆ ನಡೆಸಿದ್ದಾರೆ.

ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಎಲ್ಲ ಸರ್ಕಾರಿ ಮತ್ತು ಖಾಸಗಿ ಕ್ಲಿನಿಕ್‌ಗಳು ಓಪಿಡಿ ಬಂದ್ ಮಾಡಿದ್ದು, ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಯಾವುದೇ ರೀತಿಯ ಓಪಿಡಿ ಸೇವೆಗಳು ಜಿಲ್ಲೆಯಾದ್ಯಂತ ಲಭ್ಯ ಇರುವುದಿಲ್ಲ.

ನಗರದ ಸಿದ್ದಗಂಗಾ ಆಸ್ಪತ್ರೆ, ಸಿದ್ದಾರ್ಥ ಆಸ್ಪತ್ರೆ, ಶ್ರೀದೇವಿ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‌ಗಳು, ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಬಂದ್ ಆಗಿರುವುದರಿಂದ ಜ್ವರ, ನೆಗಡಿ, ಕೆಮ್ಮು ಸೇರಿದಂತೆ ಇನ್ನಿತರೆ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ರೋಗಿಗಳು ಪರದಾಡುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೈದ್ಯಕೀಯ ಸಂಸ್ಥೆಗಳು ಮತ್ತು ವೈದ್ಯಕೀಯ ಸಿಬ್ಬಂದಿ ಅತಿ ಸೂಕ್ಷ್ಮ ಪರಿಸ್ಥಿತಿಯಲ್ಲಿ ಆತಂಕದಿಂದ ತಮ್ಮ ಸೇವಾಕ್ಷೇತ್ರದಲ್ಲಿ ಅಭದ್ರತೆಯೊಂದಿಗೆ ಕರ್ತವ್ಯ ನಿರ್ವಹಿಸುವ ಸನ್ನಿವೇಶಗಳನ್ನು ಸೃಷ್ಠಿಸಲಾಗುತ್ತಿದೆ. ಆದ್ದರಿಂದ ಮಾನವೀಯ ಕಾಳಜಿಯ ಸೇವಾಕ್ಷೇತ್ರವನ್ನು ಕಲುಷಿತಗೊಳಿಸುವ ಈ ಪ್ರಯತ್ನಗಳನ್ನು ಮೊಳೆಕೆಯಲ್ಲೆ ನಿಷ್ಕ್ರೀಯಗೊಳಿಸದಿದ್ದಲ್ಲಿ ಮುಂದೆ ಭಾರೀ ಬೆಲೆ ತೆರಬೇಕಾಗುತ್ತದೆ ಐಎಂಎ ಜಿಲ್ಲಾಧ್ಯಕ್ಷ ಡಾ. ಹೆಚ್.ವಿ. ರಂಗಸ್ವಾಮಿ ಹೇಳಿದರು.

ಈ ನಿಟ್ಟಿನಲ್ಲಿ ಅಗತ್ಯ ಎಲ್ಲಾ ಕ್ರಮಗಳನ್ನು ಸರ್ಕಾರದ ಮಟ್ಟದಲ್ಲಿ ಕೈಗೊಳ್ಳಲು ನಮ್ಮ ಹಕ್ಕೊತ್ತಾಯವನ್ನು ದಾಖಲಿಸಲು ಸರ್ಕಾರ ಮತ್ತು ಸಾರ್ವಜನಿಕರ ಗಮನ ಸೆಳೆಯುವ ಸಲುವಾಗಿ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆವರೆಗೆ ಎಲ್ಲ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಈ ಅವಧಿಯಲ್ಲಿ ತುರ್ತು ಮತ್ತು ಅಗತ್ಯ ಸೇವೆಗಳ ಲಭ್ಯ ಇರುತ್ತವೆ ಎಂದು ಅವರು ತಿಳಿಸಿದ್ದಾರೆ.

ಎಂದಿನಂತೆ ತುರ್ತುಸೇವೆಗಳ ಲಭ್ಯವಿದ್ದು, ದೇಶಾದ್ಯಂತ ನಡೆಯುತ್ತಿರುವ ವೈದ್ಯರ ಮುಷ್ಕರವನ್ನು ಬೆಂಬಲಿಸಲು ಸಹಕರಿಸುವಂತೆ ಆಸ್ಪತ್ರೆಯ ವೈದ್ಯರು ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...