ತುಮಕೂರು | ಆಪರೇಷನ್ ಸಿಂಧೂರ ಐತಿಹಾಸಿಕ ಯಶಸ್ಸು : ಮೇಘಾಲಯ ರಾಜ್ಯ ರಾಜ್ಯಪಾಲ ಸಿ.ಹೆಚ್.ವಿಜಯಶಂಕರ್

Date:

ಆಪರೇಷನ್ ಸಿಂಧೂರ ದೇಶದ ಐತಿಹಾಸಿಕ ಯಶಸ್ಸು, ನಮ್ಮ ಮೇಲೆ ದಾಳಿ ಮಾಡಿದವರಿಗೆ ತಕ್ಕ ಉತ್ತರ ನೀಡುತ್ತೇವೆ ಎಂಬ ಸಂದೇಶ. ಆಪರೇಷನ್ ಸಿಂಧೂರ ವಿಜಯೋತ್ಸವ ದೇಶದ ಸೇನೆಯ ಪರಾಕ್ರಮಕ್ಕೆ ಸಲ್ಲಿಸುವ ಅಭಿನಂದನೆ ಎಂದು ಮೇಘಾಲಯ ರಾಜ್ಯ ರಾಜ್ಯಪಾಲ ಸಿ.ಹೆಚ್.ವಿಜಯಶಂಕರ್ ಹೇಳಿದರು.

ತುಮಕೂರು ನಗರದ ಸರ್ಕಾರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಆಪರೇಷನ್ ಸಿಂಧೂರ ವಿಜಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಏಪ್ರಿಲ್ 22ರಂದು ಪೆಹಲ್ಗಾಮ್‍ನಲ್ಲಿ ಭಯೋತ್ಪಾದಕರು ಅಮಾಯಕ ಪ್ರವಾಸಿಗರ ಮೇಲೆ ದಾಳಿ ನಡೆಸಿ ಹತ್ಯೆ ನಡೆಸಿದ ಕೃತ್ಯಕ್ಕೆ ಪ್ರತೀಕಾರವಾಗಿ ಭಯೋತ್ಪಾದಕರ ವಿರುದ್ಧ ನಡೆದ ಯಶಸ್ವಿ ದಾಳಿ ಎಂದರು.

ಪೆಹಲ್ಗಾಮ್ ದಾಳಿ ನಡೆದ ನಂತರ ಪ್ರಧಾನಿಯವರು ಮೂರೂ ವಿಭಾಗದ ಸೇನಾ ಮುಖ್ಯಸ್ಥರನ್ನು ಕರೆಸಿ, ದಾಳಿಗೆ ಪ್ರತೀಕಾರದ ತಂತ್ರ ರೂಪಿಸಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುಗಿಸಿ ತಕ್ಕ ಉತ್ತರ ನೀಡುವ ಶಕ್ತಿ ತಮಗಿದೆ ಎಂಬ ಸಂದೇಶ ನೀಡಿದರು. ಈ ಕಾರ್ಯಾಚರಣೆಯಲ್ಲಿ ಸೇನೆಯ ಪರಾಕ್ರಮ, ಯಶಸ್ಸು ಅಭಿನಂದಿಸೋಣ, ಶೌರ್ಯ, ಏಕತೆ ದೇಶಭಕ್ತಿ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧೂರ ವಿಜಯೋತ್ಸವ ನಡೆದಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮಾತನಾಡಿ, ಆಪರೇಷನ್ ಸಿಂಧೂರ ಭಯೋತ್ಪಾದನೆ ವಿರುದ್ಧ ಹೊಸ ಮಾನದಂಡ, ದೇಶದ ಮೇಲಿನ ದಾಳಿ, ಹಕ್ಕುಗಳ ರಕ್ಷಣೆಗೆ ಹಿಂಜರಿಯುವುದಿಲ್ಲ ಎಂಬುದು ಈ ಕಾರ್ಯಾಚರಣೆಯಲ್ಲಿ ಸಂದೇಶ ನೀಡಲಾಗಿದೆ. ಪ್ರಧಾನಿ ಮೋದಿಯವರ ನೇತೃತ್ವದ ಸರ್ಕಾದಲ್ಲಿ ದೇಶ ಸುಭದ್ರವಾಗಿದೆ ಎಂದರು.

ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಸಂಸ್ಥಾನದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು ಭಾಗವಹಿಸಿದ್ದರು.

ವಿಜಯೋತ್ಸವ ಆಚರಣಾ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಸೊಗಡು ಶಿವಣ್ಣ ಅಧ್ಯಕ್ಷತೆವಹಿಸಿದ್ದರು. 

ಇಸ್ರೋ ಮಾಜಿ ಅಧ್ಯಕ್ಷ ಡಾ.ಎ.ಎಸ್.ಕಿರಣ್‍ಕುಮಾರ್, ಶಾಸಕ ಎಂ.ಟಿ.ಕೃಷ್ಣಪ್ಪ,ಶಾಸಕ ಬಿ.ಸುರೇಶ್‍ಗೌಡ,   ಎಂ.ಪಿ.ನಾಡಗೌಡ, ಡಾ.ಎಂ.ಆರ್.ಹುಲಿನಾಯ್ಕರ್, ಸ್ಫೂರ್ತಿ ಚಿದಾನಂದ್, ಆರ್.ಸಿ.ಆಂಜನಪ್ಪ, ಆಚರಣಾ ಸಮಿತಿಯ ಆಶಾ ಪ್ರಸನ್ನಕುಮಾರ್, ಸಂಪಿಗೆ ಜಗದೀಶ್, ಪ್ರಭಾಕರ್, ಡಾ.ಎಸ್.ಪರಮೇಶ್, ಪ್ರದೀಪ್‍ಕುಮಾರ್, ಧನಿಯಾಕುಮಾರ್ ಮೊದಲಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...