ತುಮಕೂರು | ಅನ್ಯಾಯದ ಭೂ ಸ್ವಾಧೀನ ವಿರೋಧಿಸಿ ಫೆ. 10ರಿಂದ ಕೆಪಿಆರ್‌ಎಸ್‌ನಿಂದ ವಿಧಾನಸೌಧ ಚಲೋ : ಆರ್.ಎಸ್. ಚನ್ನಬಸವಣ್ಣ

Date:

ರೈತ-ಕೃಷಿಕಾರರ ಮನೆ ನಿವೇಶನ, ಭೂಮಿ ಹಕ್ಕಿಗಾಗಿ, ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನ ವಿರೋಧಿಸಿ, ಎಂ.ಎಸ್.ಪಿ ಹಾಗೂ ಸಾಲ ಮನ್ನಾ ಹಕ್ಕಿಗಾಗಿ ಫೆಬ್ರವರಿ 10 ರಿಂದ ಬೃಹತ್ ವಿಧಾನಸೌಧ ಚಲೋ-ಅನಿರ್ಧಿಷ್ಠಾವಧಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಜಿಲ್ಲಾಧ್ಯಕ್ಷ ಆರ್.ಎಸ್. ಚನ್ನಬಸವಣ್ಣ ತಿಳಿಸಿದರು.

 ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ರೈತ ಹಾಗೂ ಜನ ವಿರೋಧಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಭೆ ವಿರೋಧಿಸಿ, ಮನೆ-ನಿವೇಶನ, ಬಗರ್ ಹುಕುಂ -ಅರಣ್ಯ ಸಾಗುವಳಿ ರೈತ-ಕೂಲಿಕಾರರ ಹಕ್ಕು ರಕ್ಷಣೆಗಾಗಿ, ಬಲವಂತದ ಭೂ ಸ್ವಾಧೀನ ಹಾಗೂ ಭೂ ಸಂಪತ್ತಿನ ಕಾರ್ಪೊರೇಟ್ ಲೂಟಿ ಹಿಮ್ಮೆಟ್ಟಿಸಲು ಈ ಆಂದೋಲನ ನಡೆಸಲಾಗುತ್ತಿದೆ ಎಂದರು.

ಜನ ವಿರೋಧಿ ಕರಾಳ ರಾಜ್ಯ ಕೃಷಿ, ಕಂದಾಯ ಹಾಗೂ ಭೂ ಸ್ವಾಧೀನ ಕಾಯ್ದೆಗಳ ರದ್ದತಿಗಾಗಿ, ಸಾಲಮನ್ನಾ ಹಾಗೂ ಕನಿಷ್ಟ ಬೆಂಬಲ ಬೆಲೆ ಹಕ್ಕಿಗಾಗಿ,ಕಿರುಕುಳ-ಲಂಚ ಇಲ್ಲದೇ ದರ್ಖಾಸ್ತ್ ಮಂಜೂರು ಹಾಗೂ ಇತರೆ ಭೂಮಿಗಳ ದುರಸ್ತ್ ಪೋಡಿ ಮಾಡಲು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ರಾಜ್ಯ ಸಮಿತಿಗಳು ರೈತ-ಕೂಲಿಕಾರರ ಬೃಹತ್ ವಿಧಾನ ಸೌಧ ಚಲೋ ಹಾಗೂ ಅನಿರ್ದಿಷ್ಟಾವಧಿ ಧರಣಿಯನ್ನು ಫೆಬ್ರವರಿ 10 ರಿಂದ ಹಮ್ಮಿಕೊಂಡಿದ್ದು ಜಿಲ್ಲಾದ್ಯಾಂತ 4000 ರೈತ ಕೂಲಿಕಾರರು ಭಾಗವಹಿಸುತ್ತಿದ್ದಾರೆ ಎಂದು ಆರ್.ಎಸ್.ಚನ್ನಬಸವಣ್ಣ ಮಾಹಿತಿ ನೀಡಿದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000992345

ತುಮಕೂರು ಜಿಲ್ಲೆಯಲ್ಲಿ 10 ಸಾವಿರಕ್ಕೂ ಹೆಚ್ಚು ಬಗರ್‌ಹುಕುಂ ಸಾಗುವಳಿ ಸಕ್ರಮ ಕೋರಿ ಅರ್ಜಿ ಸಲ್ಲಿಸಿರುವ ರೈತರ ನ್ಯಾಯಬದ್ದ ಕೋರಿಕೆಯನ್ನು ಸಮರೋಪಾಧಿಯಲ್ಲಿ ತಿರಸ್ಕರಿಸಲಾಗಿದೆ. ರಾಜ್ಯದಾದ್ಯಂತ ಲಕ್ಷಾಂತರ ಸಂಖ್ಯೆಯಲ್ಲಿ ಮನೆ-ನಿವೇಶನ ಕೋರಿ ,ಸರ್ಕಾರಿ ಭೂಮಿಗಳಲ್ಲಿ ಕಟ್ಟಿಕೊಂಡಿರುವ ಮನೆಗಳನ್ನು ಸಕ್ರಮಗೊಳಿಸಲು ಕೋರಿ 94(ಎ), 94(ಬಿ), ಅರ್ಜಿ ಸಲ್ಲಿಸಿರುವ ಬಡವರು, ಫಾರಂ ನಂ 50,53,57 ರಲ್ಲಿ ತಮ್ಮ ಬಗರ್ ಹುಕುಂ ಸಾಗುವಳಿ ಸಕ್ರಮ ಕೋರಿ ಅರ್ಜಿ ಸಲ್ಲಿಸಿರುವ ರೈತರ ನ್ಯಾಯಬದ್ಧವಾದ ಕೋರಿಕೆಯನ್ನು ಸಮರೋಪಾದಿಯಲ್ಲಿ ತಿರಸ್ಕರಿಸಲಾಗುತ್ತಿದೆ. ಈ ರೈತ-ಕೂಲಿಕಾರರ ಮನೆ-ನಿವೇಶನ, ಭೂಮಿ ಹಕ್ಕನ್ನು ಖಾತರಿಪಡಿಸಬೇಕಾಗಿದ್ದ ಸರ್ಕಾರ ವಿವಿಧ ರೀತಿಯ ನೆಪಗಳನ್ನು ಮುಂದು ಮಾಡಿ ರಾಜ್ಯದಾದ್ಯಂತ ದೊಡ್ಡ ಪ್ರಮಾಣದಲ್ಲಿ ಒಕ್ಕಲೆಬ್ಬಿಸಲಾಗುತ್ತಿದೆ ಎಂದರು.

ಈಗಾಗಲೇ ಮಂಜೂರಾಗಿದ್ದು ದುರಸ್ತ್ (ಪೋಡಿ) ಆಗದೇ ಇರುವ ರೈತರ ಭೂಮಿಯನ್ನು ಸಹ ಕಿತ್ತುಕೊಳ್ಳುತ್ತಿದೆ. ಸಕ್ರಮಾತಿ ಸಮಿತಿಯ ಅಧಿಕಾರವನ್ನು ಕಂದಾಯ ಇಲಾಖೆ ಅಧಿಕಾರಿಗಳೇ ಚಲಾಯಿಸಿ ಬಗರ್ ಹುಕುಂ ಸಾಗುವಳಿ ಸಕ್ರಮ ಅರ್ಜಿಗಳನ್ನು ಅನರ್ಹ ಎಂದು ತಿರಸ್ಕರಿಸುತ್ತಿರುವುದು ಕರ್ನಾಟಕ ಭೂ ಕಂದಾಯ ಕಾಯ್ದೆ 94(ಎ) ,94(ಬಿ) ಕಲಂಗಳ ಸ್ಪಷ್ಟ ಉಲ್ಲಂಘನೆ ಯಾಗಿದೆ ಮತ್ತು ಕಾನೂನು ಬಾಹಿರವಾಗಿದೆ ಎಂದು ದೂರಿದರು.

ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಜಿಲ್ಲಾ ಕಾರ್ಯದರ್ಶಿ ಎನ್.ಕೆ. ಸುಬ್ರಮಣ್ಯ ಮಾತನಾಡಿ ಜಿಲ್ಲೆಯ ಅರಣ್ಯ ಭೂಮಿ ಇಂಡೀಕರಣ, ಗೋಮಾಳ, ಭೂಹೀನ ರೈತರಿಗೆ ನಿವೇಶನ, ಗೋಮಾಳ ಭೂಮಿಯನ್ನು ಭೂರಹಿತರಿಗೆ ಮತ್ತು ಅರ್ಜಿ ಹಾಕಿರುವ ಯಾವುದೇ ಅರ್ಜಿಗಳನ್ನು ವಜಾಮಾಡಬಾರದು, ನಿವೇಶನ ರಹಿತರಿಗೆ ನಿವೇಶನ ಕೊಡಬೇಕು, 20-30 ವರ್ಷಗಳ ಹಿಂದೆ ಮಂಜೂರಾಗಿರುವ ಜಮೀನುಗಳ ಪೋಡಿ ದುರಸ್ತಿ ಆಗಬೇಕು, ಶಿರಾ ತಾಲ್ಲೂಕು ಗೌಡಗೆರೆ ಹೋಬಳಿಯ ಉಜ್ಜನಕುಂಟೆ ವ್ಯಾಪ್ತಿಯಲ್ಲಿ ಬರುವ ಬಗರ್ ಹುಕ್ಕಂ ಸಾಗುವಳಿದಾರರ ಜಮೀನನ್ನು 1000 ಸಾವಿgಹೇರಿಟೇಜ್ ಕಂಪನಿಗೆಭೂಸ್ವಾಧಿನ ಮಾಡಿಕೂಳ್ಳಲು ಕೆ.ಐ.ಡಿ.ಬಿ ಯಿಂದ ಸಿದ್ದತೆ ಮಾಡಿಕೂಂಡಿದೆ. ತುರುವೇಕೆರೆ ತಾಲ್ಲೂಕಿನ ಅಮ್ಮಸಂದ್ರ ಮೈಸೂರು ಸಿಮೆಂಟ್ಸ್ ಕಾರ್ಖಾನೆಯ ಲೀಸ್‌ನಲ್ಲಿರುವ ಬಳಕೆಯಾಗದ ಸುಮರು 600 ಎಕರೆ ಜಮೀನು ಅಕ್ಕಪಕ್ಕ ಹಳ್ಳಿಗಳ ಭೂ ರಹಿತರಿಗೆ ಕೊಡಬೇಕು ಎಂದು ಒತ್ತಾಯಿಸಿದರು.

1000992345 1

ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ. ಅಜ್ಜಪ್ಪ ಮಾತನಾಡಿ  ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ರಾಜ್ಯದಾದ್ಯಂತ ಇರುವ ಲಕ್ಷಾಂತರ ಎಕರೆ ಸರ್ಕಾರಿ ಕಂದಾಯ ಭೂಮಿಗಳನ್ನು ಪರಿಭಾವಿಸಲ್ಪಟ್ಟ ಅರಣ್ಯ ವ್ಯಾಪ್ತಿಗೆ ವರ್ಗಾಯಿಸಲಾಗಿದೆ. ಈ ರೀತಿ ವರ್ಗಾಯಿಸಲ್ಪಟ್ಟ ಭೂಮಿಗಳನ್ನು ಅರಣ್ಯ ಇಲಾಖೆಯೂ ತನ್ನ ಹೆಸರಿಗೆ ಇಂಡೀಕರಣ ಮಾಡಿಸಿಕೊಂಡು ಪೊಲೀಸ್ ರಕ್ಷಣೆಯಲ್ಲಿ ಒಕ್ಕಲೆಬ್ಬಿಸುತ್ತಿರುವುದು ತೀವ್ರ ಗತಿಯಲ್ಲಿ ನಡೆಯುತ್ತಿದೆ. ಇಂತಹ ಯಾವುದೇ ಸಂದರ್ಭದಲ್ಲೂ ರೈತರ ಬಗರ್ ಹುಕುಂ ಸಾಗುವಳಿ ಸಕ್ರಮ ಕೋರಿರುವ ಅರ್ಜಿಗಳನ್ನಾಗಲಿ ಅಥವಾ ಈಗಾಗಲೇ ಮಂಜೂರಾಗಿ ನಮೂದಾಗಿರುವ ಹಕ್ಕು ದಾಖಲೆಗಳ ಕಂದಾಯ ದಾಖಲೆಗಳನ್ನಾಗಲಿ ಪರಿಗಣನೆಗೆ ತೆಗೆದುಕೊಳ್ಳದೇ ರಾತ್ರೋ ರಾತ್ರಿ ಬೃಹತ್ ಜೆಸಿಬಿ ಯಂತ್ರಗಳ ಮೂಲಕ ಫಸಲು ನಾಶ ಪಡಿಸಲಾಗುತ್ತಿದೆ ಎಂದು ದೂರಿದರು.

ಹಳೇ ಮೈಸೂರು ಭಾಗದಲ್ಲಿ 1920 ದಶಕದ ಮೈಸೂರು ಮಹಾರಾಜರ ಗೆಜೆಟ್ ಪ್ರಕಟಣೆಯನ್ನು ಮುಂದು ಮಾಡಿ ಭೂಮಿ ಕಿತ್ತುಕೊಳ್ಳಲು ಬಳಸುತ್ತಿದ್ದರೆ, ಹಿಂದಿನ ಮದ್ರಾಸ್ ಪ್ರೆಸಿಡೆನ್ಸಿ ಪ್ರದೇಶಗಳಲ್ಲಿ ಮದ್ರಾಸ್ ಗೆಜೆಟ್ ಅಧಿಸೂಚನೆ 1890 ಅನ್ನು ಬಳಸಲಾಗುತ್ತಿದೆ. ಹೀಗೆ ಸುಮಾರು ನೂರು ವರ್ಷಗಳ ಹಿಂದಿನ ಅಂದರೆ ಸ್ವತಂತ್ರ ಪೂರ್ವದ ದಾಖಲಾತಿಗಳನ್ನು ಮುಂದು ಮಾಡಿ ರೈತರನ್ನು ಬೆದರಿಸಲಾಗುತ್ತಿದೆ. ಇಂತಹ ಎಲ್ಲಾ ಸಂದರ್ಭಗಳಲ್ಲೂ ಜಿಲ್ಲಾಧಿಕಾರಿಗಳಾಗಲಿ ಅಥವಾ ಸರ್ಕಾರವಾಗಲಿ ರೈತರ ರಕ್ಷಣೆಗೆ ಬರುತ್ತಿಲ್ಲ. ಕೋರ್ಟ್ ತೀರ್ಪು, ಅರಣ್ಯ ಕಾಯ್ದೆಗಳ ಕಡೆ ಬೆರಳು ತೋರಿ ಅರಣ್ಯ ಇಲಾಖೆಯ ರೈತ ವಿರೋಧಿ ಕ್ರಮಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ದೂರಿದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಆರ್‌ಎಸ್‌ನ ಜಿಲ್ಲಾ ಉಪಾಧ್ಯಕ್ಷರಾದ ದೊಡ್ಡನಂಜಯ್ಯ, ರಾಜಮ್ಮ ಕೆ.ಎಂ, ತುರುವೇಕೆರೆಯ ಬೋಜರಾಜು, ಹಾಲಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...