ಕುಣಿಗಲ್ ಎಕ್ಸ್‌ಪ್ರೆಸ್ ಕೆನಾಲ್‌ಗೆ ವಿರೋಧ; ಹೋರಾಟದ ಎಚ್ಚರಿಕೆ

Date:

ತುಮಕೂರು ಜಿಲ್ಲೆಗೆ ಮಂಜೂರಾಗಿರುವ 24.08 ಟಿಎಂಸಿ ನೀರಿನಲ್ಲಿಯೇ ಎಕ್ಸ್‌ಪ್ರೆಸ್ ಕೆನಾಲ್ ಮೂಲಕ ರಾಮನಗರ ಜಿಲ್ಲೆ ಮಾಗಡಿ ತಾಲೂಕಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವ ಶ್ರೀರಂಗ ಏತ ನೀರಾವರಿ ಯೋಜನೆಯನ್ನು ಮೇ 15ರೊಳಗೆ ಸಂಪೂರ್ಣವಾಗಿ ಸ್ಥಗಿತಗೊಳಿಸದಿದ್ದರೆ, ಮೇ 16ರಿಂದ ತುಮಕೂರು ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ರೈತ ಸಂಘಟನೆಗಳು, ಮಠಾಧೀಶರುಗಳು ಪಕ್ಷಾತೀತವಾಗಿ ಎಕ್ಸ್‌ಪ್ರೆಸ್ ಕೆನಾಲ್ ಸ್ಥಗಿತಗೊಳಿಸುವಂತೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದರು.

ತುಮಕೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ಹೇಮಾವತಿ ಜಲಾಶಯದಿಂದ ಕುಣಿಗಲ್ ತಾಲೂಕಿಗೆ 3 ಟಿಎಂಸಿ ನೀರು ಹಂಚಿಕೆಯಾಗಿದ್ದು, ನಾಲೆಯ 0-241 ಕಿಮೀವರೆಗೆ ನೀರು ತೆಗೆದುಕೊಂಡು ಹೋಗಲು ಸುಮಾರು 751 ಕೋಟಿ ರೂ.ಗಳನ್ನು ಖರ್ಚು ಮಾಡಿ 72-241ರವರೆಗೆ ನಾಲೆಯ ಅಧುನೀಕರಣ ಕಾಮಗಾರಿಯೂ ಚಾಲ್ತಿಯಲ್ಲಿದೆ. ಆದರೂ ನೆರೆಯ ಮಾಗಡಿ ತಾಲೂಕಿಗೆ ನೀರು ತೆಗೆದುಕೊಂಡು ಹೋಗಲು, ಕೆಡಿಪಿ ಸಭೆಯ ನಿರ್ಣಯವನ್ನು ಲೆಕ್ಕಿಸದೆ ಸರ್ಕಾರಿ ಭೂಮಿ ಇರುವ ಕಡೆ ಕಾಮಗಾರಿಯನ್ನು ಹೇಮಾವತಿ ನಾಲಾ ಅಧಿಕಾರಿಗಳು ಕಾಮಗಾರಿ ಕೈಗೊಂಡಿದ್ದಾರೆ.‌ ಇದರಿಂದ ಜಿಲ್ಲೆಗೆ, ಜನರಿಗೆ ಬಹಳ ಅನ್ಯಾಯವಾಗಲಿದೆ” ಎಂದರು.

“ಎಕ್ಸ್‌ಪ್ರೆಸ್ ಕೆನಾಲ್ ಆರಂಭವಾದರೆ 72 ಕಿಮೀಗಿಂತ ಹಿಂದೆ ಇರುವ ಗುಬ್ಬಿ, ಮಧುಗಿರಿ, ಕೊರಟಗೆರೆ, ತುಮಕೂರು ನಗರ, ಗ್ರಾಮಾಂತರ ತಾಲೂಕುಗಳಿಗೆ ನೀರಿನ ಸಮಸ್ಯೆ ಎದುರಾಗಲಿದೆ. ಕಾಮಗಾರಿ ನಿಲ್ಲಿಸುವಂತೆ ಜಿಲ್ಲೆಯ ಇಬ್ಬರು ಮಂತ್ರಿಗಳಿಗೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಮನವಿ ಮಾಡಲಾಗಿದೆ.‌ ಸರ್ಕಾರ ಮೇ 15ರೊಳಗೆ ಕಾಮಗಾರಿ ನಿಲ್ಲಿಸದಿದ್ದರೆ ಮೇ 16ರಂದು ಆರಂಭವಾಗಿರುವ ಕಾಮಗಾರಿಯನ್ನು ಮುಚ್ಚುವ ಹೋರಾಟವನ್ನು ಜಿಲ್ಲೆಯ ಜನರೊಂದಿಗೆ ಹಮ್ಮಿಕೊಳ್ಳಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ, “ತುಮಕೂರು ಜಿಲ್ಲೆಗೆ ಹಂಚಿಕೆಯಾಗಿರುವ ನೀರಿನಲ್ಲಿಯೇ ತರಾತುರಿಯಲ್ಲಿ ಮಾಗಡಿಗೆ ನೀರು ತೆಗೆದುಕೊಂಡು ಹೋಗಲು ಹಾಲಿ ಇರುವ ನಾಲೆಯ ಮಾರ್ಗವನ್ನು ಬದಲಾಯಿಸಲು ಹೊರಟಿದ್ದಾರೆ. ಜಿಲ್ಲಾ ಕೆಡಿಪಿ ಸಭೆಯ ನಿರ್ಣಯಕ್ಕೂ ಬೆಲೆ ಇಲ್ಲದಂತೆ ಖಾಸಗಿ ಜಮೀನುಗಳನ್ನು ಹೊರತುಪಡಿಸಿ, ಸರ್ಕಾರಿ ಭೂಮಿಯಲ್ಲಿ ಕಾಮಗಾರಿ ನಡೆಸುತಿದ್ದಾರೆ.‌ ನ್ಯಾಯೋಚಿತವಾಗಿ ಕಾಮಗಾರಿಯನ್ನು ನಿಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ಸಹಕಾರಿ ಸಚಿವರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೂ ಮನವಿ ಸಲ್ಲಿಸಿದ್ದೇವೆ. ಸರ್ಕಾರಕ್ಕೆ ಮೇ‌ 15ರವರೆಗೆ ಗಡುವು ನೀಡಿದ್ದು, ಮೇ 16ರಿಂದ ಜಿಲ್ಲೆಯ ರೈತರು, ಜನಪ್ರತಿನಿಧಿಗಳು, ಮಠಾಧೀಶರೊಂದಿಗೆ ಈಗಾಗಲೇ ನಡೆದಿರುವ ಕಾಮಗಾರಿಯನ್ನು ಮುಚ್ಚುವ ಕೆಲಸ ಮಾಡಲಿದ್ದೇವೆ. ಇದಕ್ಕಾಗಿ ಯಾವ ರೀತಿಯ ಹೋರಾಟಕ್ಕೂ ಸಿದ್ದ. ಜಿಲ್ಲೆಯ ಜನರಿಗೋಸ್ಕರ ಜೈಲಿಗೆ ಹೋಗಲೂ ಕೂಡಾ ತಯಾರಿದ್ದೇವೆ” ಎಂದರು.

ಶಾಸಕ ಬಿ ಸುರೇಶ್ ಗೌಡ ಮಾತನಾಡಿ, “ಜಿಲ್ಲೆಗೆ ಹಂಚಿಕೆಯಾಗಿರುವ ನೀರನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಇದೊಂದು ನಿರ್ಣಾಯಕ ಹೋರಾಟವಾಗಿದೆ. ಜಿಲ್ಲೆಯ ಉಸ್ತುವಾರಿ ಸಚಿವರು, ಸಹಕಾರಿ ಸಚಿವರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು, ಹೋರಾಟಗಾರರು ಈ ಅನ್ಯಾಯವನ್ನು ತಡೆಯುವ ನಿಟ್ಟಿನಲ್ಲಿ ಹೋರಾಟದಲ್ಲಿ ಭಾಗಿಯಾಗಬೇಕಿದೆ” ಎಂದರು.

ಮಾಜಿ ಶಾಸಕ ಹೆಚ್ ನಿಂಗಪ್ಪ ಮಾತನಾಡಿ, “ಜಿಲ್ಲೆಗೆ ಹಂಚಿಕೆಯಾಗಿರುವ 25.08 ಟಿಎಂಸಿ ನೀರೇ ಸಾಕಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ನಾಲೆಯನ್ನೇ ಡೈವರ್ಟ್ ಮಾಡಿ ಬೇರೆ ಜಿಲ್ಲೆಗೆ ನೀರು ತೆಗೆದುಕೊಂಡು ಹೋಗಲು ಅವಕಾಶ ಮಾಡಿಕೊಟ್ಟರೆ, ಮುಂದಿನ ಪೀಳಿಗೆ ನಮಗೆ ಶಾಪ ಹಾಕದೆ ಬಿಡದು. ಹಾಗಾಗಿ ಮಾಗಡಿ ತಾಲೂಕಿಗೆ ನೀರು ಹರಿಸಲು ಹಲವು ಮಾರ್ಗಗಳಿವೆ. ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿ ರದ್ದು ಮಾಡಿ, ಬೇರೆ ಮೂಲದಿಂದ ನೀರು ತರಲು ಪ್ರಯತ್ನಿಸಲಿ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಪ್ರಜ್ವಲ್ ಪ್ರಕರಣ ಕ್ರಮಕ್ಕೆ ಕೇಂದ್ರ ಸರ್ಕಾರ ಮಂದಾಗಲಿ: ಸಂಜಯ್‌ ದೊಡ್ಡಮನಿ

ಸುದ್ದಿಗೋಷ್ಟಿಯಲ್ಲಿ ಮುಖಂಡರಾದ ವೈ ಹೆಚ್ ಹುಚ್ಚಯ್ಯ, ಪಿ ಸಿ ಲೋಕೇಶ್ವರ್, ದಿಲೀಪ್‌ಕುಮಾರ್, ಪಂಚಾಕ್ಷರಯ್ಯ, ಪ್ರಭಾಕರ, ಡಾ ಸಂಜಯನಾಯಕ್, ಸೌಮ್ಯ, ಪುಟ್ಟಕಾಮಯ್ಯ ಸೇರಿದಂತೆ ಹಲವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...