ತುಮಕೂರು | ಪದವಿ ನಂತರ ಉದ್ಯೋಗದ ಬದಲು ಸಂಶೋಧನೆ ಆಯ್ಕೆಮಾಡಿಕೋಳ್ಳಿ : ಕೆ. ಶಿವನ್

Date:

ಹೊಸ ಸಂಶೋಧನೆಗಳನ್ನು ಮಾಡುವಾಗ ಅನೇಕ ಸವಾಲು ಹಾಗೂ ಸೋಲುಗಳು ಎದುರಾಗುತ್ತವೆ. ಈ ಸವಾಲುಗಳಿಗೆ ಹೆದರದೆ ಮೆಟ್ಟಿನಿಂತು ಮುನ್ನಡೆದಾಗ ಯಶಸ್ಸು ಪ್ರಾಪ್ತಿಯಾಗಲಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಡಾ. ಕೆ. ಶಿವನ್ ಹೇಳಿದರು.

ತುಮಕೂರು ನಗರದ ಎಸ್‌ಐಟಿ ಕಾಲೇಜಿನ ಆವರಣದಲ್ಲಿ ನಡೆದ 15ನೇ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪದವಿ ಮುಗಿದ ನಂತರ ಉದ್ಯೋಗಕ್ಕಾಗಿ ಹುಡುಕಾಟ ನಡೆಸುವ ಬದಲು ಸಂಶೋಧನಾ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡು ಹೊಸ ಹೊಸ ಸಂಶೋಧನೆಗಳಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.

ಇಸ್ರೋ ಸಂಸ್ಥೆಯಿಂದ ನಡೆದ ಚಂದ್ರಯಾನ ಸಂದರ್ಭದಲ್ಲಿ ಅನೇಕ ಸವಾಲುಗಳು ಎದುರಾದವು. ಜತೆಗೆ ಸೋಲುಗಳು ಉಂಟಾದವು. ಆದರೂ ವಿಜ್ಞಾನಿಗಳು ಎದೆಗುಂದದೆ, ಪ್ರಯತ್ನವನ್ನು ಮುಂದುವರೆಸಿದರ ಫಲಯಾಗಿ ಚಂದ್ರಯಾನ-2 ಯಶಸ್ವಿಯಾಯಿತು. ಹಾಗೆಯೇ ವಿದ್ಯಾರ್ಥಿಗಳು ಸೋಲನ್ನು ಪಾಠವೆಂದು ಪರಿಗಣಿಸಿ ಮುನ್ನುಗ್ಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 10 06 at 11.03.51 AM

ಬದುಕಿನಲ್ಲಿ ಆತ್ಮ ಸ್ಥೖರ್ಯ, ಕಠಿಣ ಪರಿಶ್ರಮ ಹಾಗೂ ಶೋಧನೆ ಮಾಡುವ ಮನೋಭಾವ ಬಹಳ ಮುಖ್ಯ. ಈ ಮೂರು ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನಡೆದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು.

ದೇಶದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ, ಕೊಡುಗೆ ಬಹುಮುಖ್ಯವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಮೆಕ್ಯಾನಿಕಲ್, ಎಲೆಕ್ಟ್ರಾನಿಕ್, ಎಲೆಕ್ಟ್ರಾನಿಕ್ಸ್ ಸೇರಿದಂತೆ ವಿವಿಧ ವಿವಿಧ ವಿಭಾಗಗಳಲ್ಲಿ ಅನುಭವ ಪಡೆಯಬೇಕು. ಆಗ ಮಾತ್ರ ಪರಿಪೂರ್ಣತೆ ಹೊಂದಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಇಂದು ಪದವಿ ಪಡೆಯುತ್ತಿರುವ ಎಲ್ಲ ವಿದ್ಯಾರ್ಥಿಗಳ ಕನಸು ನನಸಾಗಲಿ ಎಂದು ಆಶಿಸಿದ ಅವರು, ನಿಮ್ಮನ್ನು ಉತ್ತಮ ರೀತಿಯಲ್ಲಿ ರೂಪಿಸಿದ ಎಸ್‌ಐಟಿ ಕಾಲೇಜಿನ ಶಿಕ್ಷಕರು, ಪೋಷಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

WhatsApp Image 2024 10 06 at 11.03.52 AM

ನೀವು ಕಲಿತ ಶಿಕ್ಷಣ ಸಂಸ್ಥೆ ಎಸ್‌ಐಟಿಗೆ ಕೃತಜ್ಞತೆ ಸಲ್ಲಿಸಬೇಕು. ಪ್ರಪಂಚದ ಯಾವ ಭಾಗದಲ್ಲಿದ್ದರೂ ನೀವು ಕಲಿತ ಶಿಕ್ಷಣ ಸಂಸ್ಥೆಯನ್ನು ಸದಾ ಸ್ಮರಿಸಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಕಠಿಣ ಪರಿಶ್ರಮ, ಆಸಕ್ತಿ ಇದ್ದರೆ ಮಾತ್ರ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ. ಜತೆಗೆ ಮುಂದಿನ ಜೀವನಕ್ಕೆ ಉತ್ಸಾಹ ನೀಡುತ್ತದೆ ಎಂದರು.

ಇಂದಿನ ವಿದ್ಯಾರ್ಥಿಗಳು ದೇಶದ ಮುಂದಿನ ಭವಿಷ್ಯ. ಹಾಗಾಗಿ ಗ್ರಾಜುಯೇಷನ್ ಡೇ ವಿದ್ಯಾರ್ಥಿಗಳ ಜೀವನದ ಒಂದು ಪ್ರಮುಖ ಘಟ್ಟವಾಗಿದೆ. ಗುರಿ ಸಾಧನೆಗೆ ಇದು ಮೆಟ್ಟಲಾಗಲಿದೆ ಎಂದರು.

ಶ್ರೀಮಠದ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಅನೇಕ ಬದಲಾವಣೆಯಾಗಿದ್ದು, ಯಾವುದೇ ಕಷ್ಟಕರ ಸನ್ನಿವೇಶವನ್ನು ಎದುರಿಸಲು ಶಕ್ತಿ ಬರುತ್ತದೆ ಎಂದ ಅವರು, ಎಸ್‌ಐಟಿ ಕಾಲೇಜು ಕೇವಲ ವಿದ್ಯಾಭ್ಯಾಸ, ಭಾಷಣ, ತರಗತಿ ಪಾಠಕ್ಕೆ ಸೀಮಿತವಾಗದೆ ನಿಮ್ಮನ್ನು ಉತ್ತಮ ಪ್ರಜೆಯಾಗಿ ರೂಪಿಸುತ್ತಿದೆ ಎಂದರು.

ದೇಶ ಮತ್ತು ಪ್ರಪಂಚಕ್ಕೆ ವಿದ್ಯಾರ್ಥಿಗಳ ಕೊಡುಗೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಇಂದು ಪದವಿ ಪಡೆದು ಹೊರ ಹೋಗುತ್ತಿರುವ ನೀವುಗಳು ಕಾರ್ಯಪ್ರವೃತ್ತರಾಗಬೇಕು ಎಂದು ಶ್ರೀಗಳು ಕರೆ ನೀಡಿದರು.

ಸದೃಢ ದೇಶ ನಿರ್ಮಿಸುವಲ್ಲಿ ಯುವ ಸಮುದಾಯದ ಪಾತ್ರ ಮಹತ್ವದ್ದಾಗಿದೆ. ಉತ್ತಮ ಪ್ರೋತ್ಸಾಹ ನೀಡಿದರೆ ಕ್ರೀಡೆ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿಯೂ ಉನ್ನತ ಸ್ಥಾನ ಪಡೆಯಬಹುದು ಎಂದ ಅವರು, ಗುಣಮಟ್ಟದ ಬೋಧನೆ ವಿದ್ಯಾರ್ಥಿಗಳಿಗೆ ತುಂಬಾ ಉಪಯುಕ್ತವಾಗಿದ್ದು, ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಉತ್ತಮ ಕಾರ್ಯ ಮಾಡುತ್ತಿದೆ ಎಂದರು.

WhatsApp Image 2024 10 06 at 11.03.52 AM 1

ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿಜ್ಞಾನ, ತಂತ್ರಜ್ಞಾನದ ಮೂಲಕ ಹೊಸ ಆವಿಷ್ಕಾರಗಳನ್ನು ಮಾಡಲು ಸಾಧ್ಯವಾಗುತ್ತಿದ್ದು, ವಿದ್ಯಾರ್ಥಿಗಳು ಹೊಸ ಆವಿಷ್ಕಾರಗಳತ್ತ ಗಮನ ಹರಿಸಬೇಕು ಎಂದು ಶ್ರೀಗಳು ಸಲಹೆ ನೀಡಿದರು.

ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರವೂ ಪ್ರಮುಖವಾಗಿದೆ. ಉತ್ತಮ ಸಂಸ್ಕಾರ ಪಡೆಯುವ ಮೂಲಕ ಉನ್ನತ ಶಿಕ್ಷಣ ಪಡೆದು ಅವರಿಗೆ ಗೌರವ ತರುವಂತಹ ಕೆಲಸ ಮಾಡಬೇಕು ಎಂದು ಹೇಳಿದರು.

ಸಮಾಜದಲ್ಲಿ ಎಷ್ಟು ದೊಡ್ಡವರಾಗಿ ಬೆಳೆದು ಉನ್ನತ ಸ್ಥಾನಮಾನ ಗಳಿಸಿದರೂ ನಮ್ಮನ್ನು ಹೆತ್ತ ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ಕೊಡಬೇಕು. ಇದನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ಶಿವಕುಮಾರ ಸ್ವಾಮೀಜಿ ಚಿನ್ನದ ಪದಕ ಪ್ರದಾನ
ಸಮಾರಂಭದಲ್ಲಿ ಬಿ.ಇ. ಬಯೋಟೆಕ್ನಾಲಜಿ ವಿಭಾಗದಲ್ಲಿ ಅಗ್ರಸ್ಥಾನ ಪಡೆದಿರುವ ಕು. ಸ್ಪಂದನಾ ವಿ. ಸಿಂಗ್ ರವರಿಗೆ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಚಿನ್ನದ ಪದಕ ಹಾಗೂ ಇನ್ನು ಮೂರು ಚಿನ್ನದ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಎಂಟೆಕ್ 50 ಅಭ್ಯರ್ಥಿಗಳು, ಬಿ.ಇ. ವಿಭಾಗಗಳ 847 ಅಭ್ಯರ್ಥಿಗಳು, ಬಿಆರ್ಕ್ 35 ಅಭ್ಯರ್ಥಿಗಳು, ಎಂ.ಸಿ.ಎ. 118 ಅಭ್ಯರ್ಥಿಗಳು, ಹಾಗೂ ಎಂ.ಬಿ.ಎ. 196 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸಿದ್ದಗಂಗಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಟಿ.ಕೆ. ನಂಜುಂಡಪ್ಪ, ಎಸ್‌ಐಟಿ ಸಿಇಓ ಡಾ. ಶಿವಕುಮಾರಯ್ಯ, ಪ್ರಾಂಶುಪಾಲರಾದ ಪ್ರೊ. ಎಸ್.ವಿ. ದಿನೇಶ್, ಮಾಲತಿ ಶಿವನ್, ಟಿ.ಎಂ. ಸ್ವಾಮಿ ಸೇರಿದಂತೆ ಕಾಲೇಜಿನ ಬೋಧಕ ವರ್ಗ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...