ತುಮಕೂರು | ಮಹಿಳಾ ದಸರಾ ರಂಗೋಲಿ ಸ್ಪರ್ಧೆಗೆ ಪರಮೇಶ್ವರ್ ಚಾಲನೆ

Date:

ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರದೇ ಶಕ್ತಿ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ ಪರಮೇಶ್ವರ್ ಹೇಳಿದರು.

ತುಮಕೂರು ದಸರಾ 2024ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ರಾಜ್ಯ ಬಾಲಭವನ ಸೊಸೈಟಿ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಕ್ರೀಡಾ ದಸರಾ ಹಾಗೂ ಮಹಿಳಾ ದಸರಾ ರಂಗೋಲಿ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು,

ದೇಶ ವೇಗವಾಗಿ ಮುನ್ನಡೆಯುತ್ತಿದೆ. ಈ ಸಂದರ್ಭದಲ್ಲಿ ಮಹಿಳೆಯರು ತಮ್ಮ ಪಾತ್ರ ಏನೆಂಬುದನ್ನು ಅರ್ಥೈಸಿಕೊಳ್ಳಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನಿಗಧಿಪಡಿಸಿದ ಬಳಿಕ ಇಂದು ದೇಶದಾದ್ಯಂತ 14 ಲಕ್ಷ ಮಹಿಳೆಯರು ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ. ಈ ಮೂಲಕ ದೇಶದ ಅಭಿವೃದ್ಧಿಯಲ್ಲಿ ತಮ್ಮ ಶಕ್ತಿ ತೋರಿಸಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 10 06 at 6.40.46 PM 1

ದೇಶದ ಎಲ್ಲಾ ವಲಯದಲ್ಲಿಯೂ ಮಹಿಳೆಯರು ತಮ್ಮ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಹೊಂದುತ್ತಿದ್ದಾರೆ. ಮಹಿಳೆಯರು ಎಂದಿಗೂ ಸಮರ್ಥರು ಎಂದು ಸಚಿವರು ಹೇಳಿದರು.
ನಮ್ಮ ದೇಶದ ಸಂಸ್ಕೃತಿ ಪರಂಪರೆ ಉಳಿಯಬೇಕು. ಈ ಹಿನ್ನೆಲೆಯಲ್ಲಿ ತುಮಕೂರು ದಸರಾ ಆಚರಣೆಯಲ್ಲಿ ರಂಗೋಲಿ ಸ್ಪರ್ಧೆ ಮತ್ತಿತರ ಗ್ರಾಮೀಣ ಕ್ರೀಡಾ ಕೂಟಗಳನ್ನು ಆಯೋಜಿಸಲಾಗಿದೆ. ತುಮಕೂರು ದಸರಾದಲ್ಲಿ ನಮ್ಮ ಜಿಲ್ಲೆಯ ಮಹಿಳೆಯರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ಹರ್ಷ ತಂದಿದೆ ಎಂದರು.

ಜ್ಞಾನವನ್ನು ಹೆಚ್ಚಿಸುವ ಗ್ರಾಮೀಣ ಆಟಗಳು ಕಣ್ಮರೆ
ಮನುಷ್ಯನ ಜ್ಞಾನದ ಮಟ್ಟವನ್ನು ಹೆಚ್ಚಿಸುತ್ತಿದ್ದ ಅಳು-ಗುಣಿಮನೆ, ಕುಂಟೆ-ಬಿಲ್ಲೆ, ಹಗ್ಗ- ಜಗ್ಗಾಟ, ಲಗೋರಿ, ಚಿನ್ನಿದಾಂಡಿನಂತಹ ಗ್ರಾಮೀಣ ಆಟಗಳು ಕಣ್ಮರೆಯಾಗುತ್ತಿವೆ ಎಂದು ಬೇಸರ ವ್ಯಕ್ತ ಪಡಿಸಿದ ಅವರು, ಕಣ್ಮರೆಯಾಗುತ್ತಿರುವ ನಮ್ಮ ಸಂಸ್ಕೃತಿ, ಸಂಪ್ರದಾಯಗಳನ್ನು ಉಳಿಸಲು ಗ್ರಾಮೀಣ ಕ್ರೀಡಾ ಸ್ಪರ್ಧೆಗಳು ಪ್ರಯೋಜಕಾರಿಯಾಗಿವೆ ಎಂದು ತಿಳಿಸಿದರು.

ಗಿಡ-ಮರಗಳನ್ನೇ ತಮ್ಮ ಮಕ್ಕಳಂತೆ ಬೆಳಸಿ ವೃಕ್ಷಮಾತೆ ಎನಿಸಿಕೊಂಡಿರುವ ಸಾಲು ಮರದ ತಿಮ್ಮಕ್ಕನವರು ಮಹಿಳಾ ದಸರಾ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದ್ದಾರೆ. ತಮಗೆ ಮಕ್ಕಳಿಲ್ಲದ ಕಾರಣ ಲಕ್ಷಾಂತರ ಗಿಡಗಳನ್ನು ನೆಡುವ ಮೂಲಕ ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದು ತಿಳಿಸಿದರು.

WhatsApp Image 2024 10 06 at 6.30.15 PM 1

ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಮಾತನಾಡಿ ತುಮಕೂರು ದಸರಾ ಅತ್ಯಂತ ಯಶಸ್ಸಿನ ಹೊಸ್ತಿಲಲ್ಲಿ ಸಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಎಲ್ಲಾ ಕಾರ್ಯಕ್ರಮಗಳು ಉತ್ತಮವಾಗಿ ಸಜ್ಜುಗೊಳ್ಳುತ್ತಿವೆ ಎಂದರು.

ಈ ಕಾರ್ಯಕ್ರಮದಲ್ಲಿ ಸಾಲುಮರದ ತಿಮ್ಮಕ್ಕ ಅತಿಥಿಗಳಾಗಿ ಭಾಗವಹಿಸಿದ್ದರು.

ಶಾಸಕ ಹೆಚ್. ವಿ. ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಂ.ಎನ್. ಚೇತನ್ ಕುಮಾರ್, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ರಾಜೇಶ್ವರಿ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯದ ಅಭಿಯಾನ ವ್ಯವಸ್ಥಾಪಕರಾದ ದೊಡ್ಡವಲ್ಲಪ್ಪ ಹಾಗೂ ಅಂಜನ್ ಮೂರ್ತಿ, ಅಧಿಕಾರೇತರ ಸದಸ್ಯರಾದ ತುಮಕೂರು ದಸರಾ ಸಮಿತಿ ಕುಮುದಾ ಹರೀಶ್, ಮುಖಂಡರು ಹಾಗೂ ಸಮಾಜ ಸೇವಕ ನಾಗಮಣಿ, ಪತ್ರಕರ್ತರಾದ ನಾಗರತ್ನ ಶಿವಣ್ಣ, ಸಾ.ಚಿ. ರಾಜ್‌ಕುಮಾರ್, ಕಮಲ ಗಂಗಹನುಮಯ್ಯ ಮತ್ತಿತರರು ಭಾಗವಹಿಸಿದ್ದರು.

ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ಸಚಿವರಿಂದ ಸನ್ಮಾನ

WhatsApp Image 2024 10 06 at 6.40.46 PM

ತುಮಕೂರು ದಸರಾ ಉತ್ಸವ ಪ್ರಯುಕ್ತ ವಿವೇಕಾನಂದ ಸ್ಪೋರ್ಟ್ಸ್ ಮತ್ತು ಸಾಂಸ್ಕೃತಿಕ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ 3ನೇ ತುಮಕೂರು ದಸರಾ ಸ್ಪೋರ್ಟ್ಸ್ ಶೂಟಿಂಗ್ ಚಾಂಪಿಯನ್‌ಶಿಪ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಅಂತರರಾಷ್ಟ್ರೀತ ಮಟ್ಟದ ಜೂನಿಯರ್ ವರ್ಲ್ಡ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಗಾಂಭೀರ್ಯ ವಿ ಗೌಡ ಹಾಗೂ ಖೇಲೋ ಇಂಡಿಯಾ ಯೂತ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ವಿಜೇತ ಹಾಗೂ ರೆಕಾರ್ಡ್ ಹೋಲ್ಡರ್ ಜೊನಾಥನ್ ಗ್ಯಾವಿನ್ ಆಂಟೋನಿ, ರಾಷ್ಟ್ರ ಮಟ್ಟದ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ವಿಜೇತರಾದ ಮಹಾಲಕ್ಷ್ಮಿ, ಜಿ. ಅದಿತಿ ಅವರನ್ನು ಸಚಿವರು ಸನ್ಮಾನಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...