ತುಮಕೂರು | ಮನುಷ್ಯರ ಒಡಲು ಸೇರುತ್ತಿರುವ ಪ್ಲಾಸ್ಟಿಕ್ : ರೆನಿಟಾ ಮಥಾಯಿಸ್‌

Date:

ಪರಿಸರ ಉಳಿಸುವ ಕಾರ್ಯದಲ್ಲಿ ಗಿಡನೆಡುವಿಕೆಯು ಮಹತ್ವದ ಪಾತ್ರ ವಹಿಸಿದೆ. ನಾವೆಲ್ಲರೂ ಪರಿಸರ ಉಳಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮಾಡಬೇಕಿದೆ ಎಂದು ಇಎಮ್‌ಪಿ‌ಆರ್‌ಐ ಸಂಸ್ಥೆಯ ಮುಖ್ಯ ದತ್ತಾಂಶ ಮಾಹಿತಿ ಅಧಿಕಾರಿ ರೆನಿಟಾ ಮಥಾಯಿಸ್‌ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ತುಮಕೂರು ತಾಲೂಕಿನ ಹೆಬ್ಬೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI) ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ ೧ ಮತ್ತು ೨ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ಬೂರು ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ರಾ.ಸೇ.ಯೋ ಸ್ವಯಂ ಸೇವಕರಿಗೆ ಬುಧವಾರ ಆಯೋಜಿಸಿದ್ದ ಪರಿಸರ ಶಿಕ್ಷಣ ಕಾರ್ಯಾಗಾರದಲ್ಲಿ‌ ಮಾತನಾಡಿದ ಅವರು,

ಪ್ಲಾಸ್ಟಿಕ್ ಪುನರ್ಬಳಕೆ ಆಗಬೇಕು. ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ತಡೆಯಬೇಕು. ಪ್ಲಾಸ್ಟಿಕ್ ಎಂಬ ಮಹಾ ಮಾರಿ ಭೂಮಿ ಒಡಲನ್ನು ಮಾತ್ರ ಸೇರುತ್ತಿಲ್ಲ, ಮನುಷ್ಯರ ಒಡಲನ್ನೂ ಸೇರುತ್ತಿದೆ. ಹಾಗಾಗಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳು ಅವಶ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐಶಾರಾಮಿ ಜೀವನದಿಂದ ಪರಿಸರ ಮಾಲೀನ್ಯ ಉಂಟಾಗುತ್ತಿದೆ. ಅದರಿಂದ ವಿಮುಕ್ತರಾಗಿ ಸರಳತೆ ರೂಢಿಸಿಕೊಂಡಾಗ ಪರಿಸರ ಸ್ನೇಹಿಯಾಗಿ ಬದುಕಬಹುದು. ಪರಿಸರ ಉಳಿಸಲು ನಮ್ಮ ಸಂಸ್ಥೆ ಸದಾ ಕೆಲಸ ಮಾಡುತ್ತಾ ಬಂದಿದೆ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ ಚಂದನ್ ಡಿ.ಎನ್ ಅವರು ಮಾತನಾಡಿ, ಪರಿಸರ ಸಂರಕ್ಷಣೆ ಇಂದು ಭಾಷಣಗಳಲ್ಲಿ ಮಾತ್ರ ವಿಜೃಂಭಿಸುತ್ತಿದೆ. ರಾಜಕಾರಣಿಗಳು ತಮ್ಮ ಪ್ರಣಾಳಿಕೆಗಳಲ್ಲೂ ಪರಿಸರ ಪೂರಕ ಕಾನೂನುಗಳನ್ನು ತರುವ ಅಂಶಗಳನ್ನು ಸೇರಿಸಬೇಕು. ಜತೆಗೆ ಜನರ ಆರೋಗ್ಯದ ಖಾತ್ರಿಯ ಭರವಸೆಯನ್ನು ನೀಡಬೇಕು. ಈ ಬಗ್ಗೆ ವಿದ್ಯಾರ್ಥಿಗಳು ಚಿಂತನೆ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು.

ಶ್ರೀಮಂತರಿಂದ ಅತೀ ಹೆಚ್ಚು ಪರಿಸರ ಮಾಲೀನ್ಯವಾಗುತ್ತಿದೆ. ಸರ್ಕಾರ ಅವರಿಂದಲೇ ಹೆಚ್ಚಿನ ತೆರಿಗೆ ಪಡೆಯಬೇಕು ಎಂದು ಹೇಳಿದರು.

ಕಾಲೇಜು ಪ್ರಾಂಶುಪಾಲರಾದ ಪ್ರೊ.ಡಿ.ಕೃಷ್ಣ ಮಾತನಾಡಿ, ಹವಾಮಾನ ವೈಪರೀತ್ಯದಿಂದ ಹಿಮಗಡ್ಡೆಗಳು ಕರಗಿ ಸಮುದ್ರ ಮಟ್ಟ ಏರುತ್ತಿದೆ. ಹಲವು ಮಹಾನಗರಗಳು ಮುಳುಗುವ ಭೀತಿ ಎದುರಾಗಿದೆ. ಆದ್ದರಿಂದ ನಾವು ಪರಿಸರವನ್ನು ಉಳಿಸಿಕೊಳ್ಳುವ ಅನಿವಾರ್ಯತೆಯಲ್ಲಿದ್ದೇವೆ ಎಂದು ಹೇಳಿದರು.

ಈ ವೇಳೆ ಸಂಪನ್ಮೂಲ ವ್ಯಕ್ತಿ ಹರೀಶ್ ಕಮ್ಮನಕೋಟೆ, ರಾ.ಸೇ.ಯೋ ಕಾರ್ಯಕ್ರಮ ಅಧಿಕಾರಿಗಳಾದ ಮಧುಸೂಧನ.ಕೆ.ಪಿ, ಡಾ.ಗೋಂವಿದರಾಜು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...