ತುಮಕೂರು | ಸೂರಿಗಾಗಿ ಧರಣಿ ನಡೆಸುತ್ತಿದ್ದವರ ಮೇಲೆ ಪೊಲೀಸ್ ದಬ್ಬಾಳಿಕೆ; ಸಿರಿಮನೆ ನಾಗರಾಜ್ ಖಂಡನೆ

Date:

ಭೂಮಿ-ವಸತಿಗಾಗಿ ಧರಣಿ ನಡೆಸುತ್ತಿದ್ದ ದಲಿತ, ಅಲೆಮಾರಿ, ಆದಿವಾಸಿ, ಅಲ್ಪಸಂಖ್ಯಾತ ಸಮುದಾಯದವರ ಮೇಲೆ ನಡೆದಿರುವ ಪೊಲೀಸ್‌ ದಬ್ಬಾಳಿಕೆಯನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಂಸ್ಥಾಪಕ ಉಪಾಧ್ಯಕ್ಷ ಸಿರಿಮನೆ ನಾಗರಾಜ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌ ಅವರಿಗೆ ಪತ್ರ ಬರೆದಿದ್ದಾರೆ.

“ಕಳೆದ 16 ದಿನಗಳಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಧರಣಿ ನಡೆಸಲಾಗುತ್ತಿತ್ತು. ಆದರೆ ಇಂದು ಬೆಳಗ್ಗೆ ಪೊಲೀಸರು ಬಲಪ್ರಯೋಗ ಮಾಡಿ ಧರಣಿಕಾರರನ್ನು ಹತ್ತಿಕ್ಕುವ ಯತ್ನ ಮಾಡಲಾಗಿದೆ. ಈ ವೇಳೆ ಕೆಲವರನ್ನು ಊರ್ಡಿಗೆರೆ ಪೊಲೀಸ್ ಠಾಣೆಗೆ ಕೊಂಡೊಯ್ಯಲಾಗಿದೆ. ಕನಿಷ್ಟ ತಲೆಮೇಲೊಂದು ಸೂರಿಗೆ ಪರದಾಡುತ್ತಿರುವ ನಿರ್ಗತಿಕ ನಾಗರಿಕರ ಧ್ವನಿಯನ್ನು ಹತ್ತಿಕ್ಕಲು ಈ ರೀತಿಯ ಕ್ರಮ ಕೈಗೊಂಡಿರುವುದು ಖಂಡನೀಯ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಈ ಸಮಸ್ಯೆಗಳು ಆಡಳಿತಾತ್ಮಕವಾಗಿ ಬಗೆಹರಿಸಬಹುದಾಗಿದ್ದರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿರಂತರವಾಗಿ ಸಮಸ್ಯೆಗಳು ಮುಂದುವರೆಐುತ್ತಲೇ ಇವೆ. ಮುಂಚಿನ ಹೋರಾಟಗಳ ಸಂದರ್ಭಗಳಲ್ಲಿ ಜಿಲ್ಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿದ್ದನ್ನು ಸ್ಮರಿಸಿಕೊಂಡು, ಇದೇ ರೀತಿ ಈ ಬಾರಿಯ ಸಮಸ್ಯೆಗೂ ಸೂಕ್ತ ಪರಿಹಾರ ನೀಡಬೇಕೆಂದು” ಅವರು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ತುಮಕೂರು | ಕಾರ್ಮಿಕರ ದಿನ, ಬಸವ ಜಯಂತಿ ಆಚರಿಸಿದ ವಿಶೇಷಚೇತನರ ʼಪ್ರೇರಣಾʼ

ಪತ್ರದ ಅಂತ್ಯದಲ್ಲಿ ನಾಗರಾಜ್ ಅವರು, ಬಂಧಿತರನ್ನು ಬಿಡುಗಡೆ ಮಾಡಿ, ಭೂಮಿ-ವಸತಿ ಸಮಸ್ಯೆಗಳ ಬಗ್ಗೆ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...