ತುಮಕೂರು | ʼಬಡತನ ನಿರ್ಮೂಲನೆʼ ನಮ್ಮ ಸರ್ಕಾರದ ಪ್ರಥಮ ಆದ್ಯತೆ: ಡಿ.ಕೆ ಶಿವಕುಮಾರ್‌

Date:

ʼಬಡತನ ನಿರ್ಮೂಲನೆʼ ನಮ್ಮ ಸರ್ಕಾರದ ಪ್ರಥಮ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ, ಜಾರಿಗೆ ತಂದು, ಯಶಸ್ವಿಯಾಗಿ ಅನುಷ್ಟಾನಗೊಳಿಸುವ ಮೂಲಕ ರಾಜ್ಯದ ಬಡ ಜನರ ಬದುಕನ್ನು ಹಸನುಗೊಳಿಸುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಕುಣಿಗಲ್ ನಗರದ ಜಿ.ಕೆ.ಬಿ.ಎಂ.ಎಸ್. ಮೈದಾನದಲ್ಲಿ ಕುಣಿಗಲ್ ತಾಲ್ಲೂಕು  ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ಅನುಮೋದನೆಗೊಂಡ  ವಿವಿಧ ಕಾಮಗಾರಿಗಳ ಅನಾವರಣ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳ ಸವಲತ್ತು ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಯಾವುದೇ ರಾಜಕೀಯ ಪಕ್ಷಗಳ ವಿರುದ್ಧ ಯುದ್ಧ ಮಾಡುತ್ತಿಲ್ಲ. ಬದಲಿಗೆ ಬಡತನದ ವಿರುದ್ಧ ಯುದ್ಧ ಮಾಡುತ್ತಿದೆ ಎಂದರು.

ರಾಜ್ಯದ ಅಭಿವೃದ್ದಿ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, 3ಲಕ್ಷ 74 ಸಾವಿರ ಕೋಟಿ ರೂ.ಗಳ ಪೈಕಿ 1ಲಕ್ಷ 25 ಸಾವಿರ ಕೋಟಿ ರೂ.ಗಳನ್ನು ಅಭಿವೃದ್ಧಿ ಕೆಲಸಕ್ಕೆ ಮೀಸಲಿಟ್ಟಿದ್ದೇವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸರ್ಕಾರ ಜಾರಿಗೊಳಿಸಿರುವ 5 ಗ್ಯಾರಂಟಿ ಯೋಜನೆಗಳು ರಾಜ್ಯದ ಜನತೆಗೆ ಶಕ್ತಿ ತುಂಬಿದೆ.  ನಮ್ಮ ಗ್ಯಾರಂಟಿ ಯೋಜನೆಗಳು 420 ಅಥವಾ ಡೂಪ್ಲಿಕೇಟ್ ಯೋಜನೆಗಳಲ್ಲ. ಬದಲಿಗೆ ಯಶಸ್ವಿಯಾಗಿ ಅನುಷ್ಟಾನಗೊಂಡಿರುವ ಯೋಜನೆಗಳಾಗಿವೆ ಎಂದು ತಿಳಿಸಿದರು.

ಕುಣಿಗಲ್ ತಾಲ್ಲೂಕಿಗೆ 1 ಸಾವಿರ ಕೋಟಿ ರೂ.ಗಳನ್ನು ಕುಡಿಯುವ ನೀರಿಗಾಗಿ ಮಂಜೂರು ಮಾಡುವ ಮೂಲಕ ಹೇಮಾವತಿ ನೀರನ್ನು ಕ್ಷೇತ್ರಕ್ಕೆ ಹರಿಸಿ ಕೆರೆಗಳಿಗೆ ನೀರನ್ನು ತುಂಬಿಸಿ ಜನತೆಗೆ ಕುಡಿಯುವ ನೀರನ್ನು ಒದಗಿಸುವ  ಕೆಲಸವನ್ನು ಸಂಸದ ಡಿ.ಕೆ. ಸುರೇಶ್ ಮತ್ತು ಶಾಸಕ ರಂಗನಾಥ್ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. 350 ಕೋಟಿ ರೂ.ಗಳನ್ನು ವ್ಯಯಿಸುವ ಮೂಲಕ ಪ್ರತಿ ರೈತ ಕುಟುಂಬಕ್ಕೆ ವಿದ್ಯುತ್ ಟ್ರಾನ್ಸ್ಫಾರ್ಮನ್ನು ನೀಡಲಾಗಿದ್ದು, ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ ಪ್ರತಿ ಮನೆಗೂ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ  ಮಾತನಾಡಿ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ 9 ತಿಂಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಜನತೆ ಕಾಣುತ್ತಿದ್ದಾರೆ. ಕುಣಿಗಲ್‌ನ ಇಂದಿನ ಕಾರ್ಯಕ್ರಮದಲ್ಲಿ 36 ಅಡಿಗಲ್ಲುಗಳಿಗೆ ಶಂಕುಸ್ಥಾಪನೆ ನೆರವೇರಿಸಿರುವುದು ಇದಕ್ಕೆ ಒಂದು ಉದಾಹರಣೆ ಎಂದರು.

ನಮ್ಮ ಸರ್ಕಾರ ಜನಪರ ಸರ್ಕಾರವಾಗಿದ್ದು, ರಾಜ್ಯದ ಜನತೆಗೆ 5 ಗ್ಯಾರಂಟಿಗಳ ಜೊತೆಗೆ ಕೃಷಿ, ನೀರಾವರಿ, ಗ್ರಾಮೀಣಾಭಿವೃದ್ಧಿ ಮುಂತಾದ ಅಭಿವೃದ್ಧಿ ಕೆಲಸಗಳನ್ನು ಕಳೆದ ೯ ತಿಂಗಳಲ್ಲಿ ಮಾಡಿದ್ದೇವೆ. ಜನರ ಬಡತನ ನಿರ್ಮೂಲನೆ ಮಾಡುವುದೇ ನಮ್ಮ ಸರ್ಕಾರದ ಮೂಲ ಧ್ಯೇಯವಾಗಿದೆ ಎಂದು ಹೇಳಿದರು.

ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಹೇಮಾವತಿ ಲಿಂಕ್ ಕಾಲುವೆಯನ್ನು ಕುಣಿಗಲ್ ತಾಲ್ಲೂಕಿಗೆ ತರುವ ವಿವಿಧ ಹಂತದಲ್ಲಿ ಸಹಕರಿಸಿದ ಎಲ್ಲರನ್ನೂ ಸ್ಮರಿಸುವುದಾಗಿ ತಿಳಿಸಿದ ಅವರು, 885 ಕೋಟಿ ರೂ. ವೆಚ್ಚದ 34.5ಕಿ.ಮೀ. ಉದ್ದದ ಕುಣಿಗಲ್ ಎಕ್ಸ್ಪ್ರೆಸ್ ಕಾಲುವೆಯಿಂದಾಗಿ ತಾಲೂಕಿನ ಎಲ್ಲಾ ಕೆರೆಗಳು ತುಂಬುತ್ತವೆ ಎಂದರು.

ಕುಣಿಗಲ್ ಪಟ್ಟಣಕ್ಕೆ ಕುಡಿಯುವ ನೀರಿಗಾಗಿ 40 ಕೋಟಿ ರೂ.ಗಳ ಅನುದಾನ ನೀಡಲಾಗಿದ್ದು, ಯೋಜನೆ ಟೆಂಡರ್ ಹಂತದಲ್ಲಿರುತ್ತದೆ ಮತ್ತು ತಾಲ್ಲೂಕಿನ ಜನತೆಗೆ 10 ಸಾವಿರ ನಿವೇಶನಗಳನ್ನು ನೀಡುವ ಗುರಿ ಹೊಂದಲಾಗಿದ್ದು, ಈಗಾಗಲೇ 1000 ನಿವೇಶಗಳನ್ನು ಶಾಸಕ ಡಾ: ರಂಗನಾಥ್ ಅವರ ನೇತೃತ್ವದಲ್ಲಿ ರಚಿಸಲಾಗಿದೆ. ಇನ್ನು 2000 ನಿವೇಶನಗಳಿಗೆ ತಾಲ್ಲೂಕು ಆಡಳಿತ ಜಮೀನು ಗುರುತಿಸಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಂತಿಮ ಘಟ್ಟದಲ್ಲಿ ಗೃಹಲಕ್ಷ್ಮೀ, ಅನ್ನಭಾಗ್ಯ, ಯುವನಿಧಿ, ಭಾಗ್ಯಲಕ್ಷಿ ಸೇರಿದಂತೆ ವಿವಿಧ ಇಲಾಖೆಗಳ ಸವಲತ್ತುಗಳ ಫಲಾನುಭವಿಗಳಿಗೆ ಉಪ ಮುಖ್ಯಮಂತ್ರಿಗಳು ಚೆಕ್ ವಿತರಿಸಿದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್  ಪ್ರಾಸ್ತಾವಿಕವಾಗಿ ಮಾತನಾಡಿ ಗಣ್ಯರನ್ನು ಸ್ವಾಗತಿಸಿದರು. ಶಾಸಕ ಡಾ: ರಂಗನಾಥ್ ಅವರು ವಂದಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಚೆಲುವರಾಯಸ್ವಾಮಿ, ರೆಹಿಮ್ ಖಾನ್, ಪಾವಗಡ ಶಾಸಕ ವೆಂಕಟೇಶ್, ಮಾಜಿ ಶಾಸಕ ವೆಂಕಟರಮಣಪ್ಪ ಸೇರಿದಂತೆ ಇತರೆ ಜನಪ್ರತಿನಿಧಿಗಳು ಗಣ್ಯರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...