ತುಮಕೂರು | ಸಮಸ್ಯೆಗಳ ಆಗರವಾದ ತಾಯಿ-ಮಕ್ಕಳ ಸರ್ಕಾರಿ ಆಸ್ಪತ್ರೆ; ಪೋಷಕರ ನರಳಾಟ

Date:

ತುಮಕೂರು ಜಿಲ್ಲೆಯ ಶಿರಾದಲ್ಲಿರುವ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯು ಸಮಸ್ಯೆಗಳ ಆಗರವಾಗಿದ್ದು, ರೋಗಿಗಳು ಮತ್ತು ಅವರ ಪೋಷಕರು ಪರದಾಡುವಂತಾಗಿದೆ.

ಆಸ್ಪತ್ರೆಯಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳಬೇಕಾದ ರೋಗಿಗಳು ಮತ್ತಷ್ಟು ಅನಾರೋಗ್ಯಕ್ಕೆ ತುತ್ತಾಗುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಸಿಗೆಗಳ ದುರವಸ್ಥೆ
ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಹಾಸಿಗೆ ಬಟ್ಟೆಗಳ ದುರವಸ್ಥೆ

ಆಸ್ಪತ್ರೆಯಲ್ಲಿ ಮಗುವನ್ನು ದಾಖಲಿಸಿಕೊಂಡಿರುವ ತಾಯಿಯೊಬ್ಬರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ದಿನಕ್ಕೆ ಒಂದು ಬಾರಿಯಾದರೂ ಶೌಚಾಲಯಗಳನ್ನು ಸ್ವಚ್ಛಗೊಳಿಸುವುದಿಲ್ಲ. ಸಮಯಕ್ಕೆ ಸರಿಯಾಗಿ ನೀರು ಪೂರೈಕೆ ಮಾಡುವುದಿಲ್ಲ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಶೌಚಾಲಯ ವ್ಯವಸ್ಥೆ
ಶೌಚಾಲಯದ ಅವ್ಯವಸ್ಥೆ

“ಈ ಬೇಸಿಗೆ ದಿನಗಳಲ್ಲಿ ಆಸ್ಪತ್ರೆಯಲ್ಲಿ ಪದೇ ಪದೆ ವಿದ್ಯುತ್‌ ಕಡಿತವಾಗುತ್ತಿದೆ. ಹಾಸಿಗೆ ಮೇಲಿನ ಬೆಡ್‌ಶೀಟ್‌ಗಳು ಒದ್ದೆಯಾಗಿ ಹೋಗಿದ್ದರೂ ಕೂಡ ಬದಲಾಯಿಸುತ್ತಿಲ್ಲ. ಆಸ್ಪತ್ರೆಯಲ್ಲಿ ಉಂಟಾಗಿರುವ ಅನೈರ್ಮಲ್ಯ ಸ್ಥಿತಿಯಿಂದ ಇಲ್ಲಿನ ತಾಯಿ ಮಕ್ಕಳ ಪರಿಸ್ಥಿತಿ ಹೇಳತೀರದು” ಎಂದು ಬೇಸರ ವ್ಯಕ್ತಪಡಿಸಿದರು.

ಕಮೋರ್ಡ್
ಕಮೋರ್ಡ್‌ ಅವ್ಯವಸ್ಥೆ

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಜನ ವಿರೋಧಿ ಬಿಜೆಪಿ ಸೋಲಿಸಿ, ಜನಪರ ಕಾಂಗ್ರೆಸ್ ಗೆಲ್ಲಿಸೋಣ: ದಸಂಸ

ಚಿಕಿತ್ಸೆಯಿಂದ ಬೇಗ ಚೇತರಿಸಿಕೊಳ್ಳಬೇಕಾದ ಮಕ್ಕಳು ಇಲ್ಲಿನ ಅನೈರ್ಮಲ್ಯದಿಂದ ಇನ್ನಷ್ಟು ರೋಗಕ್ಕೆ ತುತ್ತಾಗುತ್ತಿದ್ದಾರೆ. ಮಕ್ಕಳಿಗಂತೂ ತುಂಬಾ ಸಮಸ್ಯೆ ಎದುರಾಗುತ್ತಿರುವುದು ಬೇಸರದ ಸಂಗತಿ” ಎಂದು ಅವಲತ್ತುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...