ತುಮಕೂರು | ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ಪ್ರತಿಭಟನೆ; ಡಿಸಿ ಕಚೇರಿಗೆ ಮುತ್ತಿಗೆ ಯತ್ನ

Date:

ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬರುತ್ತಿದ್ದ ಭಜರಂಗದಳ ಮುಖಂಡ ಪುತ್ತೂರಿನ ಮುರಳಿಕೃಷ್ಣ ಅಸಂತಡ್ಕಅವರನ್ನು ಪೊಲೀಸರು ಬಂಧಿಸಿದ ಕ್ರಮ ಖಂಡಿಸಿ, ಜಿಲ್ಲಾಧಿಕಾರಿಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್ ಹಾಗೂ ಮುಖಂಡರನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ.

ಬುಧವಾರ (ಮಾ.6) ಜಿಲ್ಲಾಧಿಕಾರಿಕಚೇರಿ ಬಳಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಶಾಸಕ ಜಿ.ಬಿ. ಜ್ಯೋತಿಗಣೇಶ್ ಸೇರಿದಂತೆ ಬಿಜೆಪಿಯ ಮುಖಂಡರು ಭಾಗವಹಿಸಿದ್ದ ಈ ಸಭೆಯಲ್ಲಿ ಪಾಲ್ಗೊಳ್ಳಲು ಮಂಗಳೂರಿನ ಪುತ್ತೂರಿನಿಂದ ಆಗಮಿಸುತ್ತಿದ್ದ ಭಜರಂಗದಳ ರಾಜ್ಯ ಸಹಸಂಯೋಜಕ್ ಮುರಳಿಕೃಷ ಅಸಂತಡ್ಕಅವರನ್ನು ಪೊಲೀಸರು ಕುಣಿಗಲ್ ಬಳಿ ಬಂಧಿಸಿದ್ದರು. ಸಕಾರಣವಿಲ್ಲದೆ ಮುರಳಿಕೃಷ್ಣರನ್ನು ಬಂಧಿಸಿದ್ದನ್ನು ಖಂಡಿಸಿ ಪ್ರತಿಭಟನಾಕಾರರು ಸರ್ಕಾರ ಹಾಗೂ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬಿಡುಗಡೆಗೆ ಒತ್ತಾಯಿಸಿದರು.

ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ಹೆಚ್ಚಾಗುತ್ತಿದೆ. ದೇಶವಿರೋಧ ಕೃತ್ಯಗಳು ವ್ಯಾಪಕವಾಗಿ ನಡೆಯುತ್ತಿವೆ. ಇವುಗಳನ್ನು ತಡೆಯಬೇಕಾಗಿದ್ದರಾಜ್ಯಕಾಂಗ್ರೆಸ್ ಸರ್ಕಾರ ದೇಶದ್ರೋಹಿಗಳಿಗೆ ಕುಮ್ಮಕ್ಕು ನೀಡುತ್ತಾ ಪೋಷಿಸಿತ್ತಿದೆ ಎಂದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಭಜರಂಗದಳದ ಮುಖಂಡ ಮುರಳಿಕೃಷ್ಣರನ್ನು ಪೊಲೀಸರು ಬಂಧಿಸಿದ ಕ್ರಮಖಂಡನೀಯ, ಅವರನ್ನುತಕ್ಷಣ ಬಿಡುಗಡೆ ಮಾಡಬೇಕುಎಂದು ಒತ್ತಾಯಿಸಿದರು.

ಪಾಕಿಸ್ತಾನ ಪರಘೋಷಣೆ ಕೂಗುವವರನ್ನು ವಿಧಾನಸೌಧದ ಒಳಗೆ ಬಿಡುತ್ತಾರೆ. ಅವರನ್ನು ಬಂಧಿಸಲು ಮೀನಾಮೇಷ ಎಣಿಸುವ ಪೊಲೀಸರು, ರಾಜ್ಯಕಾಂಗ್ರೆಸ್ ಸರ್ಕಾರ ಮುರಳಿಕೃಷ್ಣರನ್ನು ಬಂಧಿಸಿ ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ದೇಶ ವಿರೋಧಿಗಳಿಗೆ ಕಾಂಗ್ರೆಸ್ ಸರ್ಕಾರ ಮೃದುಧೋರಣೆ ತಳೆದಿದೆ, ವೋಟಿನ ಓಲೈಕೆ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್‌ನವರು ದೇಶದ್ರೋಹಿಗಳಿಗೆ ಕುಮ್ಮಕ್ಕು ನೀಡುತ್ತಾ ರಾಜ್ಯವನ್ನು ಭಯೋತ್ಪಾದಕರ ತಾಣ ಮಾಡಲು ಹೊರಟಿದ್ದಾರೆ. ಇದೇ ಕಾರಣಕ್ಕೆ ಬಾಂಬ್ ಬ್ಲಾಸ್ಟ್ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ ಎಂದು ಟೀಕಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್, ರಾಜ್ಯ ಬಿಜೆಪಿ ಕಾರ್ಯದರ್ಶಿ ವಿನಯ್ ಬಿದರೆ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಮುಖಡರಾದ ಎಸ್.ಶಿವಪ್ರಸಾದ್, ವೈ.ಎಚ್. ಹುಚ್ಚಯ್ಯ, ಎಚ್.ಎನ್. ಚಂದ್ರಶೇಖರ್, ಎಚ್.ಟಿ.ಭೈರಪ್ಪ, ಭೈರಣ್ಣ, ಜಿ.ಕೆ.ಶ್ರೀನಿವಾಸ್, ಟಿ.ಆರ್.ಸದಾಶಿವಯ್ಯ, ರುದ್ರೇಶ್, ಹನುಮಂತರಾಜು, ನವಚೇತನ್, ಎಚ್.ಎಂ. ರವೀಶಯ್ಯ, ಸಂದೀಪ್‌ಗೌಡ, ಜಗದೀಶ್, ಬೆಳ್ಳಿ ಲೋಕೇಶ್, ಬಾವಿಕಟ್ಟೆ ನಾಗಣ್ಣ, ಸಿ.ಎನ್.ರಮೇಶ್, ವಿಷ್ಣುವರ್ಧನ್, ಸತ್ಯಮಂಗಲ ಜಗದೀಶ್, ಗಣೇಶ್, ಲತಾ ಬಾಬು, ಶಕುಂತಲಾ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...