ತುಮಕೂರು | ಪಿಂಚಿಣಿ ನಿಗದಿಗೆ ಆಗ್ರಹಿಸಿ ಸಹಕಾರಿ ಹಾಲು ಒಕ್ಕೂಟದ ನಿವೃತ್ತ ನೌಕರರ ಸಂಘದಿಂದ ಪ್ರತಿಭಟನೆ

Date:

ತುಮಕೂರು ಹಾಲು ಒಕ್ಕೂಟದಲ್ಲಿ ಕೆಲಸ ಮಾಡಿ ನಿವೃತ್ತರಾಗಿರುವ ನೌಕರರಿಗೆ ಸುಪ್ರಿಂಕೋರ್ಟಿನ 4-11-2022ರ ತೀರ್ಪಿನ ಅನ್ವಯ ಇಪಿಎಫ್ ಪ್ರಾದೇಶಿಕ ಕಚೇರಿಯಿಂದ ಪಿಂಚಿಣಿ ನಿಗದಿಗೊಳಿಸಬೇಕು. ಅಲ್ಲದೇ, ಈಗಾಗಲೇ ಹಣ ಕಟ್ಟಿಸಿಕೊಂಡಿರುವ ನೌಕರರಿಗೆ ಪಿಂಚಿಣಿ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ತುಮಕೂರು ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ನಿವೃತ್ತ ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಇಪಿಎಫ್ ಪ್ರಾದೇಶಿಕ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ತುಮಕೂರು ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ನಿವೃತ್ತ ನೌಕರರ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾಧ್ಯಕ್ಷ ಕೆ.ಬಸವನ ಗೌಡ, ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ.ಡಿ.ಎಸ್ ನೇತೃತ್ವದಲ್ಲಿ ನೂರಾರು ನಿವೃತ್ತ ನೌಕರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿ, ಮನವಿ ಸಲ್ಲಿಸಿದ ನಂತರ, ಶಿರಾಗೇಟ್‌ನಲ್ಲಿ ಪ್ರಾದೇಶಿಕ ಇಪಿಎಫ್ ಕಚೇರಿ ಬಳಿ ತೆರಳಿ ಧರಣಿ ಆರಂಭಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸಮಾವೇಶಗೊಂಡ ನಿವೃತ್ತ ನೌಕರರನ್ನು ಉದ್ದೇಶಿಸಿ ಮಾತನಾಡಿದ ಸಂಘ ಅಧ್ಯಕ್ಷ ಕೆ.ಬಸವನಗೌಡ, “2022ರ ನವೆಂಬರ್ 4ರ ಸುಪ್ರಿಂಕೋರ್ಟಿನ ತೀರ್ಪಿನಂತೆ ನಿವೃತ್ತ ನೌಕರರ ಹೆಚ್ಚಿನ ಪಿಂಚಿಣಿಗಾಗಿ ಸಾಲ, ಸೂಲ ಮಾಡಿ, ಇಪಿಎಫ್ ಅಧಿಕಾರಿಗಳು ನಿಗದಿ ಪಡಿಸಿದ ಹಣವನ್ನು ಕಟ್ಟಿ ಒಂದು ವರ್ಷ ಕಳೆದರೂ ಕೆಲವರಿಗೆ ಮಾತ್ರ ಪಿಂಚಿಣಿ ನಿಗದಿ ಪಡಿಸಿ, ಅವರ ಖಾತೆಗೆ ಜಮೆಯಾಗುತ್ತಿದೆ. ಹಣಕಟ್ಟಿರುವ ಸುಮಾರು 21 ಜನರಿಗೆ ಇದುವರೆಗೂ ಯಾವುದೇ ರೀತಿಯ ಪಿಂಚಿಣಿ ಬಂದಿಲ್ಲ. ಹೆಚ್ಚಿನ ಪಿಂಚಿಣಿ ಆಸೆಗೆ ಸರಕಾರಕ್ಕೆ 1.39 ಕೋಟಿ ಹಣ ಕಟ್ಟಿ ವರ್ಷ ಕಳೆದರೂ ಪಿಂಚಿಣಿ ನಿಗದಿ ಮಾಡದೇ ಕಾಲಹರಣ ಮಾಡುತ್ತಿರುವುದು ನಾಚಿಕೆಗೇಡಿನ ವಿಚಾರ. ಈ ಕೂಡಲೇ ನಮಗೆ ನ್ಯಾಯಯುತವಾಗಿ ದೊರೆಯಬೇಕಾದ ಪಿಂಚಿಣಿ ನೀಡಬೇಕು. ಹಾಗೂ ಸರಕಾರ ನಿಗದಿ ಮಾಡಿ ಹಣ ಕಟ್ಟದ ನೌಕರರು ಹಣ ಪಾವತಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂಬುದು ನಮ್ಮ ಒತ್ತಾಯವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರು 21

ಸಂಘದ ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ.ಡಿ.ಎಸ್. ಮಾತನಾಡಿ, “ತುಮಕೂರು ಹಾಲು ಒಕ್ಕೂಟದಲ್ಲಿ ಕೆಲಸ ಮಾಡುತ್ತಿದ್ದ 391 ನೌಕರರು ಇದುವರೆಗೂ ನಿವೃತ್ತರಾಗಿದ್ದು, 107 ಜನರು ಈಗಾಗಲೇ ಸಾವನ್ನಪ್ಪಿದ್ದಾರೆ. 28 ಜನರು ಪಿಂಚಿಣಿಗಾಗಿ ಸುಪ್ರಿಂಕೋರ್ಟಿನ ಆದೇಶದಂತೆ ಸುಮಾರು 1.39 ಕೋಟಿ ಹಣ ಕಟ್ಟಿದ್ದಾರೆ. ಇವರಲ್ಲಿ ಕೇವಲ 7 ಜನರಿಗೆ ಮಾತ್ರ ಪಿಂಚಿಣಿ ನಿಗದಿಯಾಗಿ ಹಣ ಬರುತ್ತಿದೆ. ಉಳಿದ 231 ಜನರಿಗೆ ವರ್ಷವಾದರೂ ಕಟ್ಟಿದ ಹಣವೂ ಇಲ್ಲ. ಹೆಚ್ಚುವರಿ ಪಿಂಚಿಣಿಯೂ ಇಲ್ಲದಂತಾಗಿದೆ. ರಾಜ್ಯದ 14 ಬೇರೆ ಬೇರೆ ಹಾಲು ಒಕ್ಕೂಟದಲ್ಲಿ ಇದೇ ರೀತಿ ಇಪಿಎಫ್‌ಗಾಗಿ ಹಣ ಕಟ್ಟಿದ ನಿವೃತ್ತ ನೌಕರರಿಗೆ ಪಿಂಚಣಿ ನಿಗದಿಪಡಿಸಿ ನೀಡಲಾಗುತ್ತಿದೆ. ಆದರೆ ತುಮಕೂರು ಪ್ರಾದೇಶಿಕ ಕಚೇರಿಯಲ್ಲಿ ಮಾತ್ರ ತೀವ್ರ ನಿರ್ಲಕ್ಷ ನೀತಿ ಅನುಸರಿಸುತ್ತಿದ್ದಾರೆ” ಎಂದು ದೂರಿದರು.

“ನೌಕರರು ಅಧಿಕಾರಿಗಳನ್ನು ಭೇಟಿ ಮಾಡಿ ಮಾತನಾಡಿದರೆ ಹಾರಿಕೆಯ ಉತ್ತರ ನೀಡುವುದಲ್ಲದೆ, ನಿವೃತ್ತ ನೌಕರರನ್ನು ಗುಲಾಮರಂತೆ ವರ್ತಿಸುತ್ತಾರೆ. ಹಾಗಾಗಿ ಇಪಿಎಫ್ ಪ್ರಾದೇಶಿಕ ಕಚೇರಿಯವರು ನಮಗೆ ಪಿಂಚಣಿ ನಿಗದಿ ಮಾಡಿ ಹಣ ಬಿಡುಗಡೆ ಮಾಡುವವರೆಗೂ ಇಪಿಎಫ್ ಕಚೇರಿ ಮುಂಭಾಗದಿಂದ ತೆರಳದಿರಲು ನಾವೆಲ್ಲರೂ ನಿರ್ಧರಿಸಿದ್ದೇವೆ” ಎಂದರು.

ನಿವೃತ್ತ ನೌಕರರಾದ ಪಿ.ಮಾರುತಿರಾವ್, ಗುರುವಯ್ಯ ಎಂ.ಗೌಡ ಅವರುಗಳು ಪಿಂಚಣಿ ಹೋರಾಟ ಕುರಿತು ಮಾತನಾಡಿದರು.

ಪ್ರತಿಭಟನೆಯಲ್ಲಿ ತುಮಕೂರು ಜಿಲ್ಲಾ ಹಾಲು ಒಕ್ಕೂಟದ ನಿವೃತ್ತ ನೌಕರರ ಕ್ಷೇಮಾಭಿವೃದ್ದಿ ಸಂಘದ ಪದಾಧಿಕಾರಿಗಳಾದ ಡಿ.ಬಸವರಾಜು,ಹನುಮಂತರಾಯ.ಜಿ.ಎನ್., ಸಿ.ಶ್ರೀಧರ್ ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...