ತುಮಕೂರು | ಮಕ್ಕಳ ದೌರ್ಜನ್ಯ, ಅಪಹರಣ ತಡೆಗಟ್ಟಲು ಸಾರ್ವಜನಿಕರು ಸಹಕರಿಸಿ : ತ್ರಿವಿಕ್ರಮ್

Date:

ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಮಕ್ಕಳ ಅಪಹರಣ, ಕಳ್ಳ ಸಾಗಾಣಿಕೆಗಳನ್ನು ತಡೆಗಟ್ಟುವಿಕೆಯಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ರೈಲ್ವೆ ವಲಯ ಪೊಲೀಸ್ ಠಾಣೆಯ ಎಎಸ್ಪಿಎಪ್ ತ್ರಿವಿಕ್ರಮ್ ತಿಳಿಸಿದರು.

ತುಮಕೂರು ನಗರದ ರೈಲ್ವೆ ನಿಲ್ದಾಣದಲ್ಲಿ ಜಸ್ಟ್ ರೈಟ್ಸ್ ಮತ್ತು ರೀಡ್ ಸಂಸ್ಥೆಯ ಸಹಯೋಗದಲ್ಲಿ ನಡೆದ ಮಾನವ ಮತ್ತು ಮಕ್ಕಳ ಮಾರಾಟ ಹಾಗೂ ದೌರ್ಜನ್ಯ ತಡೆಗಟ್ಟುವಿಕೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರಲ್ಲಿ ಮಹಿಳಾ ಮತ್ತು ಮಕ್ಕಳ ರಕ್ಷಣೆ ಕುರಿತು ಅರಿವು ಮೂಡಿಸಬೇಕು. ಮಕ್ಕಳನ್ನು ಅಪಹರಿಸುವ ಮತ್ತು ಅವರ ಮೇಲೆ ದೌರ್ಜನ್ಯವೆಸೆಗುವ ದೊಡ್ಡ ಜಾಲವೇ ಇದ್ದು, ಸಾರ್ವಜನಿಕರು ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಘಟನೆಗಳು ಕಂಡು ಬಂದರೆ ಕೂಡಲೇ ಹತ್ತಿರದ ಪೊಲೀಸ್ ಠಾಣೆ, ಮಕ್ಕಳ ಸಹಾಯವಾಣಿ, ಸಂಘ ಸಂಸ್ಥೆಗಳು ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ತಿಳಿಸುವ ಮೂಲಕ ಮಕ್ಕಳನ್ನು ರಕ್ಷಿಸಬೇಕು ಎಂದು ಅವರು ತಿಳಿಸಿದರು.

ನಂತರ ಮಾತನಾಡಿದ ರೀಡ್ ಸಂಸ್ಥೆಯ ಜಿಲ್ಲಾ ಸಂಯೋಜಕ ಮಂಜುನಾಥ್ ಎನ್. ಅವರು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಅಪಹರಣ ಮತ್ತು ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರ ಮತ್ತು ರೀಡ್ ಸಂಸ್ಥೆ ಸಹಯೋಗದಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದ್ದು, ಎಲ್ಲಿಯಾದರೂ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಕಂಡುಬಂದರೆ ಮಕ್ಕಳ ಸಹಾಯವಾಣಿಯನ್ನು ಸಂಪರ್ಕಿಸಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ರೈಲ್ವೆ ವಲಯ ಪೊಲೀಸ್ ಠಾಣೆಯ ಎಎಸ್ಪಿಎಪ್ ನಿರ್ಮಲ,ಬಪ್ಪನ್ ಕುಮಾರ್ ನಾಯಕ್, ರೀಡ್ ಸಂಸ್ಥೆಯ ಸಮುದಾಯ ಸಂಘಟಕರಾದ  ಉಮೇರಾಖಾನ್, ರಂಗದಾಮಯ್ಯ ಸೇರಿದಂತೆ ರೈಲ್ವೇ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...