ತುಮಕೂರು | ರಾಜಣ್ಣ ನೇರ ನುಡಿ ಸ್ವಾಭಿಮಾನದ ನಾಯಕ : ಡಿಸಿಎಂ ಡಿ ಕೆ ಶಿವಕುಮಾರ್

Date:

ಬೆಂಗಳೂರಿನಂತೆ ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಅನೇಕ ಯೋಜನೆ ರೂಪಿಸುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ಸಚಿವ ಕೆ ಎನ್ ರಾಜಣ್ಣ ಅವರ 75ನೇ ಜನ್ಮದಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು.

“ತುಮಕೂರಿಗೆ ಹೆಚ್ಚಿನ ಶಕ್ತಿ ತುಂಬಲು, ಸ್ಯಾಟಲೈಟ್ ಟೌನ್ ಜತೆಗೆ, ಅಂತರನಗರ ರೈಲು ಹಾಗೂ ಮೆಟ್ರೋ ರೈಲು ನೀಡಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಕಲ್ಪತರು ನಾಡು ತುಮಕೂರು ಜಿಲ್ಲೆಗೆ ತನ್ನದೇ ಆದ ಇತಿಹಾಸವಿದೆ. ಧಾರ್ಮಿಕವಾಗಿ, ಶೈಕ್ಷಣಿಕವಾಗಿ ದೊಡ್ಡ ಪರಂಪರೆ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀವೆಲ್ಲರೂ ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿ, ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಿಸಿ, ನಿಮ್ಮೆಲ್ಲರ ಸೇವೆ ಮುಂದುವರಿಸಲು ಆಶೀರ್ವಾದ ಮಾಡಬೇಕು” ಎಂದು ಮನವಿ ಮಾಡಿದರು.

“ಇದು ಐತಿಹಾಸಿಕ ಜನ್ಮದಿನ ಕಾರ್ಯಕ್ರಮ. ನೇರ ನುಡಿ ಸ್ವಾಭಿಮಾನದ ನಾಯಕ ರೈತಾಪಿ ಜನರ ಬದುಕು ಸುಧಾರಣೆಯ ಗುರಿ ಹೊಂದಿರುವ, ಆತ್ಮೀಯ ಸ್ನೇಹಿತನ ಜನ್ಮದಿನವನ್ನು ಬಹಳ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ರಾಜಣ್ಣ ಅವರಿಗೆ ಹಾಗೂ ಅವರ ಕುಟುಂಬಕ್ಕೆ ಜನರ ಸೇವೆ ಮಾಡಲು ಹೆಚ್ಚಿನ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

“ರೈತನಿಗೆ ಲಂಚ, ಬಡ್ತಿ, ನಿವೃತ್ತಿ, ಪಿಂಚಣಿ ಇಲ್ಲ. ರೈತರ ಹಿತಕ್ಕಾಗಿ ಸಹಕಾರ ಕ್ಷೇತ್ರಕ್ಕೆ ಹೆಚ್ಚು ಶಕ್ತಿ ನೀಡುತ್ತಿದ್ದೇವೆ. ರಾಜಣ್ಣ ಅವರು ಬಹಳ ಆಸಕ್ತಿಯಿಂದ ಈ ಸರ್ಕಾರದಲ್ಲಿ ಸಹಕಾರ ಸಚಿವರಾಗಿದ್ದಾರೆ. ನಾನು ಕೂಡ ಎಸ್ ಎಂ ಕೃಷ್ಣ ಅವರ ಅವಧಿಯಲ್ಲಿ ಸಹಕಾರ ಸಚಿವನಾಗಿದ್ದಾಗ, ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಹಾಗೂ ಷಡಕ್ಷರಿ ಅವರನ್ನು ಎಸ್ ಎಲ್ ಡಿ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡುವ ಅವಕಾಶ ನನಗೆ ಸಿಕ್ಕಿತ್ತು” ಎಂದು ಸ್ಮರಿಸಿದರು.

“ತುಳಿತಕ್ಕೆ ಒಳಗಾದ ಸಮಾಜದ ಧೀಮಂತ ನಾಯಕನಿಗೆ ಶುಭ ಹಾರೈಸಲು ನಾವು ಇಲ್ಲಿ ಸೇರಿದ್ದೇವೆ. ನಾನು ಹಾಗೂ ರಾಜಣ್ಣ ಅವರು ಸಿಯೋಲ್, ಜಪಾನ್ ಹಾಗೂ ದಕ್ಷಿಣ ಕೊರಿಯಾ ಇತರೆ ದೇಶಗಳಲ್ಲಿ ನಡೆದ ಅಂತಾರಾಷ್ಟ್ರೀಯ ಸಹಕಾರ ಸಹಭಾಗಿತ್ವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆವು. ಆ ಮೂಲಕ ಸಹಕಾರ ಕ್ಷೇತ್ರದ ಬಗ್ಗೆ ಹೆಚ್ಚು ಅಧ್ಯಯನ ಮಾಡಿದ್ದೆವು. ಈಗ ನಾವು ಸರ್ಕಾರದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಅಸಮಾನತೆ ತೊಲಗಿಸುವುದೆ ನಿಜವಾದ ರಾಜಕೀಯದ ಗುರಿ : ಸಿ ಎಂ ಸಿದ್ದರಾಮಯ್ಯ

“ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಈ ಮಟ್ಟಕ್ಕೆ ಬೆಳೆದಿದ್ದಾರೆ. ಪಕ್ಷದ ಬೆಳವಣಿಗೆಗೆ ಶ್ರಮಿಸಿದ್ದಾರೆ. ಅವರು ತಮ್ಮ ಕೆಲಸವನ್ನು ಹೀಗೆ ಮುಂದುವರಿಸಿಕೊಂಡು ಹೋಗಲಿ. ದೇವರು ಅವರಿಗೆ ಹೆಚ್ಚಿನ ಶಕ್ತಿ ನೀಡಲಿ” ಎಂದು ಶುಭ ಕೋರಿದರು.

“ಸರ್ವರಿಗೂ ಸಮಬಾಳು, ಸಮಪಾಲು ಎಂಬ ತತ್ವದ ಮೇಲೆ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು.
ನಾವು ಯಾವುದೇ ಜಾತಿ, ಧರ್ಮದಲ್ಲಿ ಹುಟ್ಟಿದ್ದರೂ ಎಲ್ಲರೂ ಒಟ್ಟಾಗಿ ಕೆಲಸ ಮಾಡಿಕೊಂಡು ಹೋಗಬೇಕು. ಮೇಲ್ಜಾತಿ, ಕೆಳ ಜಾತಿ ಎಂಬ ತಾರತಮ್ಯ ಬೇಡ. ಎಲ್ಲ ವರ್ಗಕ್ಕೆ ನಾವು ಶಕ್ತಿಯಾಗಿ ನಿಲ್ಲಬೇಕು. ಇದೇ ಕಾಂಗ್ರೆಸ್ ಪಕ್ಷದ ಸಿದ್ಧಾಂತ. ಅದರಂತೆ ರಾಜಣ್ಣ ಅವರ ಕುಟುಂಬ ಕೆಲಸ ಮಾಡುತ್ತಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...