ತುಮಕೂರು | ರಾಜಣ್ಣರನ್ನು ಸಚಿವ ಸಂಪುಟಕ್ಕೆ ಮರು ಸೇರ್ಪಡೆಗೊಳಿಸಿ: ಜಿ ಎನ್‌ ಮೂರ್ತಿ

Date:

ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಬೆನ್ನೆಲುಬಾದ ಹಾಗೂ ಅವರ ವಿರುದ್ಧ ಯಾರಾದರೂ ಧ್ವನಿ ಎತ್ತಿದರೆ ಸಿದ್ದರಾಮಯ್ಯ ಅವರ ಪರ ಮಾತನಾಡುತ್ತಿದ್ದ ಏಕೈಕ ಸಚಿವ ಕೆ ಎನ್ ರಾಜಣ್ಣರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದು ಖಂಡನೀಯ. ಈ ಕೂಡಲೇ ಅವರನ್ನು ಸಚಿವ ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳಬೇಕೆಂದು ತುಮಕೂರು ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ ಎನ್ ಮೂರ್ತಿ ಒತ್ತಾಯಿಸಿದರು.

ತುಮಕೂರಿನ ಶಿರಾ ತಾಲೂಕಿನಲ್ಲಿ ದಲಿತ, ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತರ ಕ್ರಿಯಾ ಸಮಿತಿ ಹಾಗೂ ಕೆಎನ್ಆರ್ ಮತ್ತು ಆರ್‌ಆರ್ ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಕೆ.ಎನ್.ರಾಜಣ್ಣ ಅವರು ಜಾತ್ಯತೀತ ನಾಯಕರು. ಅದಕ್ಕೆ ಸಾಕ್ಷಿ ಇಲ್ಲಿ ಸೇರಿರುವ ಸಾವಿರಾರು ಮಂದಿ ರಾಜಣ್ಣ ಅಭಿಮಾನಿಗಳು. ಸಿದ್ದರಾಮಯ್ಯ ಅವರು ಹೈಕಮಾಂಡ್ ಮೇಲೆ ಒತ್ತಡ ತರುವ ಶಕ್ತಿ ಹೊಂದಿದ್ದು ಮುಂದಿನ ಸಚಿವ ಸಂಪುಟದ ಪುನರ್ವಿಂಗಡಣೆಯಲ್ಲಿ ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಸಿಸಿ ಬ್ಯಾಂಕ್ ನಿರ್ದೇಶಕ ಜಿ ಎಸ್ ರವಿ ಮಾತನಾಡಿ, “ರಾಜ್ಯದ ಅತ್ಯಂತ ಪ್ರಭಾವಿ ಸಚಿವರಾದ ರಾಜಣ್ಣ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಅನೇಕ ಬದಲಾವಣೆ ತಂದು ಸಹಕಾರಿ ರತ್ನರಾಗಿರುವ ಅವರನ್ನು ಸಚಿವ ಸಂಪುಟಕ್ಕೆ ಪುನಃ ಸೇರ್ಪಡೆ ಮಾಡಿಕೊಳ್ಳಬೇಕು. ಇದು ಸಾವಿರಾರು ಅಭಿಮಾನಿಗಳ ಮನವಿ” ಎಂದರು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಜಯ್ ಕುಮಾರ್ ಮಾತನಾಡಿ‌, “ಜಿಲ್ಲೆಯಲ್ಲಿ ಬಡವರ ಪರವಾಗಿ ಕೆಲಸ ಮಾಡುತ್ತಿದ್ದ ಏಕೈಕ ವ್ಯಕ್ತಿ ಕೆ.ಎನ್.ರಾಜಣ್ಣ ಅವರು. ಇವರು ನೇರನುಡಿ ವ್ಯಕ್ತಿಯಾಗಿದ್ದು ಯಾರೇ ತಪ್ಪು ಮಾಡಿದ್ದರೂ ನೇರವಾಗಿ ಹೇಳುತ್ತಾರೆ. ಆದರೆ ಕೆಲವರು ಅದನ್ನೇ ಅಸ್ತ್ರ ಮಾಡಿಕೊಂಡು ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿದ್ದಾರೆ. ನಾವು ಯಾವತ್ತೂ ರಾಜಣ್ಣ ಪರವಾಗಿದ್ದೇವೆ. ಆದ್ದರಿಂದ ನಾವೆಲ್ಲರೂ ಅವರಿಗೆ ಸಚಿವ ಸ್ಥಾನ ನೀಡುವವರೆಗೂ ಹೋರಾಟ ಮಾಡುತ್ತೇವೆ” ಎಂದರು.

ಇದನ್ನೂ ಓದಿ: ತುಮಕೂರು | ಜಾತಿ ವಿನಾಶಕ್ಕೆ ಮೀಸಲಾತಿಯೇ ಅಡಿಗಲ್ಲು: ಡಾ. ಯತೀಂದ್ರ ಸಿದ್ದರಾಮಯ್ಯ

ರಾಜ್ಯದ ಅಹಿಂದ ಮುಖಂಡರು, ಡಿಸಿಸಿ ಬ್ಯಾಂಕ್ ಅಧ್ಯಕ್ಷರು, ಮಾಜಿ ಸಹಕಾರ ಸಚಿವರು ಆದ ಕೆ.ಎನ್ ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಪುನಃ ಸೇರ್ಪಡೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಕೆ.ಎನ್.ಆರ್. ಅಭಿಮಾನಿ ಬಳಗದಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷರು ಹಾಗೂ ಮಾಜಿ ನಗರಸಭಾ ಸದಸ್ಯರಾದ ರವಿಶಂಕರ್ ಹೇಳಿದರು.

ಪ್ರತಿಭಟನೆಯಲ್ಲಿ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಜಿಲ್ಲಾ ಜಾತ್ಯಾತೀತ ಯವ ವೇದಿಕೆ ಅಧ್ಯಕ್ಷರಾದ ಡ್ಯಾಗೇರಹಳ್ಳಿ ವಿರೂಪಾಕ್ಷ, ಮಾಜಿ ತಾ.ಪಂ. ಅಧ್ಯಕ್ಷರಾದ ಬುಕ್ಕಾಪಟ್ಟಣ ಮಂಜುನಾಥ್, ಸಿಂಗದಳ್ಳಿ ರಾಜಕುಮಾರ್, ಮುಕುಂದಪ್ಪ, ಮುಖಂಡರಾದ ಜೆ.ಎನ್.ರಾಜಸಿಂಹ, ಹುಳಿಗೆರೆ ಡಾ ಗುಡ್ಡಣ್ಣ, ಗಂಗಾಧರ್ ಕುಂಬಾರಹಳ್ಳಿ, ಶಿವು ಜಾನಕಲ್ಲು, ರಾಜಣ್ಣ ವಿನಾಯಕ ಚಿರತಹಳ್ಳಿ, ಎಂಸಿ ರಾಘವೇಂದ್ರ ಗೌಡ, ಮಾಜಿ ತಾ.ಪಂ. ಸದಸ್ಯ ಸಿ.ದಾಸಪ್ಪ, ಶ್ರೀನಿವಾಸ್, ನಾರಾಯಣಗೌಡ, ಲಕ್ಷ್ಮೀನಾರಾಯಣ, ಧರಣಿ ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.
೨೧ಶಿರಾ೧: ಶಿರಾ ನಗರದಲ್ಲಿ ಮಂಗಳವಾರ ಶಿರಾ ತಾಲೂಕು ದಲಿತ, ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತರ ಕ್ರಿಯಾ ಸಮಿತಿ ಹಾಗೂ ಕೆ.ಎನ್.ಆರ್ ಮತ್ತು ಆರ್.ಆರ್. ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...