ತುಮಕೂರು | ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ : ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

Date:

ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಉಲ್ ಫಿತರ್ ರಂಜಾನ್ ಹಬ್ಬವನ್ನು ತುಮಕೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ತುಮಕೂರು ಜಿಲ್ಲೆಯಾದ್ಯಂತ ರಂಜಾನ್ ಪ್ರಯುಕ್ತ ಮಸೀದಿಗಳು, ದರ್ಗಾಗಳನ್ನು ವಿದ್ಯುತ್ ದೀಪಾಲಂಕಾರದಿಂದ ವಿಶೇಷವಾಗಿ ಸಿಂಗರಿಸಲಾಗಿತ್ತು.  ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಸಹ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಿದರು.

1001240468

ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಜಮಾಯಿಸಿದ ಸಾವಿರಾರು ಮುಸ್ಲಿಂ ಬಾಂಧವರು ಈ ಬಾರಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಬೆಳಿಗ್ಗೆ 10ಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಹಬ್ಬದ ಶುಭಾಶಯವನ್ನು ವಿನಿಮಯ ಮಾಡಿಕೊಂಡರು.ಹೊಸ ಉಡುಪುಗಳನ್ನು ಧರಿಸಿ, ಒಬ್ಬರಿಗೊಬ್ಬರು ಆಲಿಂಗನ ಮಾಡಿ ಹಬ್ಬದ ಶುಭಾಶಯ ಕೋರಿದ್ದು ವಿಶೇಷವಾಗಿತ್ತು. ರಂಜಾನ್ ಹಬ್ಬದ ಸಂಭ್ರಮ ಹಿಂದೂ ಮತ್ತು ಮುಸ್ಲಿಂ ಬಾಂಧವರ ಭಾವೈಕ್ಯತೆಯ ಸಂಕೇತವಾಗಿ ಮಾರ್ಪಟ್ಟಿದ್ದು, ಮುಸ್ಲಿಂ ಬಾಂಧವರಿಗೆ ಹಿಂದೂ ಸಮುದಾಯದವರು ಸಹ ಹಬ್ಬದ ಶುಭಾಶಯ ಕೋರುವ ಮೂಲಕ ಭಾವೈಕ್ಯತೆಯನ್ನು ಸಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001240762

ಈದ್ಗಾ ಮೈದಾನಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ, ಮಾಜಿ ಶಾಸಕರಾದ ಎಸ್. ಷಫಿಅಹಮದ್, ಡಾ. ರಫೀಕ್ ಅಹಮದ್, ಇಕ್ಬಾಲ್ ಅಹಮದ್, ಅಸ್ಲಾಂಪಾಷ, ಅಪ್ತಾಫ್, ನಯಾಜ್ ಅಹಮದ್ ಮತ್ತಿತರರು ಭೇಟಿ ನೀಡಿ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯ ಕೋರಿದರು.ಈದ್ಗಾ ಮೈದಾನಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಮುರುಳೀಧರ ಹಾಲಪ್ಪ ಅವರನ್ನು ಮುಸ್ಲಿಂ ಬಾಂಧವರು ಅಭಿನಂದಿಸಿದರು.  

ಶುಭಕೋರಿದ ಗೃಹ ಸಚಿವರು

ಇದೇ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಒಂದು ತಿಂಗಳು ರೋಜಾ ಆಚರಣೆ ಮಾಡಿ ಅತ್ಯಂತ ಪವಿತ್ರವಾಗಿ ಆಚರಿಸುವ ಹಬ್ಬ ರಂಜಾನ್. ಎಲ್ಲಾ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಶುಭಾಶಯ ಕೋರುತ್ತೇನೆ ಎಂದರು.

1001240461

ನಾಡಿನ ಎಲ್ಲ ಮುಸ್ಲಿಂ ಬಾಂಧವರಿಗೆ ಪವಿತ್ರವಾದ ರಂಜಾನ್ ಹಬ್ಬದ ಶುಭಾಶಯ ಕೋರಿದ ಅವರು ಅವರ ಜೀವನದಲ್ಲಿ ಎಲ್ಲ ಕಷ್ಟಗಳು ದೂರವಾಗಲಿ. 6ನೇ ಶತಮಾನದಲ್ಲಿ ಮಹಮದ್ ಪೈಂಗಬರರು ಇಡೀ ವಿಶ್ವಕ್ಕೆ ಎಲ್ಲರೂ ಸಹೋದರತ್ವದಿಂದ ಬಾಳಬೇಕು ಎಂಬ ಶಾಂತಿಯ ಸಂದೇಶವನ್ನು ಸಾರಿದರು. ಈ ಸಂದೇಶವನ್ನು ಎಲ್ಲ ಮುಸಲ್ಮಾನ್ ಬಾಂಧವರು ಪಾಲಿಸುತ್ತಾರೆ ಎಂಬುದು ನನ್ನ ನಂಬಿಕೆ ಎಂದರು.

ಹಿಂದೂ ಮತ್ತು ಮುಸ್ಲಿಂ ನಾವೆಲ್ಲರೂ ಸಹೋದರತ್ವ ಭಾವನೆಯಿಂದ ಒಟ್ಟಾಗಿ ಬಾಳೋಣ ಎಂದು ಕರೆ ನೀಡಿದರು.ನಿನ್ನೆ ಯುಗಾದಿ ಹಬ್ಬ ಸಹ ಆಚರಣೆಯಾಗಿದೆ. ಯುಗಾದಿ ಮತ್ತು ರಂಜಾನ್ ಎರಡೂ ಹಬ್ಬಗಳು ಒಟ್ಟೊಟ್ಟಿಗೆ ಬಂದಿದ್ದು, ಇಬ್ಬರು ಸಹೋದರತ್ವದಿಂದ ಬಾಳಬೇಕು ಎಂದು ಆ ದೇವರೇ ಒಟ್ಟಿಗೆ ಹಬ್ಬವನ್ನು ಕೊಟ್ಟಿದ್ದಾನೆ. ನಾವೆಲ್ಲರೂ ಅಣ್ಣ ತಮ್ಮಂದಿರಂತೆ ಬಾಳೋಣ ಎಂದರು.

ಹಬ್ಬದ ಪ್ರಯುಕ್ತ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಮಾರ್ಗ ಬದಲಾವಣೆ

ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರಿಂದ ಯಾವುದೇ ರೀತಿಯ ಅಡಚಣೆಗಳು ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿತ್ತು. 

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಅಡಿಷನಲ್ ಎಸ್ಪಿ ಅಬ್ದುಲ್ ಖಾದರ್, ಡಿವೈಎಸ್ಪಿ ಚಂದ್ರಶೇಖರ್ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...