ತುಮಕೂರು | ಜಾತಿ ವಿನಾಶಕ್ಕೆ ಮೀಸಲಾತಿಯೇ ಅಡಿಗಲ್ಲು: ಡಾ. ಯತೀಂದ್ರ ಸಿದ್ದರಾಮಯ್ಯ

Date:

ಭಾರತ ಅಭಿವೃದ್ಧಿಯಲ್ಲಿ ಹಿಂದುಳಿಯಲು ಜಾತಿ ಪದ್ಧತಿಯೇ ಕಾರಣ. ಅಂಬೇಡ್ಕರ್ ನೀಡಿದ ಸಂವಿಧಾನದಿಂದ ನಮಗೆಲ್ಲ ಮೀಸಲಾತಿ ಎಂಬುದು ದೊರೆತಿದೆ. ಆದ್ದರಿಂದಲೇ ಹಿಂದುಳಿದವರು ಮತ್ತು ದಲಿತರು ಮೇಲೆ ಬರಲು ಸಾಧ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ತುಮಕೂರು ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಮಾಜಿಕ ಶೈಕ್ಷಣಿಕ ಸಮೀಕ್ಷೆ-2025: ಈಡೇರುವುದೇ ಸರ್ವ ಸಮುದಾಯಗಳ ನಿರೀಕ್ಷೆ?ʼ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಹುಟ್ಟಿನಿಂದಲೇ ಯೋಗ್ಯತೆ ಅಳೆಯುವ ಮತ್ತು ತಾರತಮ್ಯ ಮಾಡುವ ವ್ಯವಸ್ಥೆ ನಮ್ಮಲ್ಲಿದೆ. ಜಾತಿ ಹೋಗಲಾಡಿಸಲು ಮೀಸಲಾತಿ ಕೂಡ ಒಂದು ಕ್ರಮ. ಶೋಷಿತರಿಗೆ, ಹಿಂದುಳಿದವರಿಗೆ ಬಲ ತುಂಬಬೇಕು ಎಂದರೆ ಸಮೀಕ್ಷೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅಗತ್ಯ. ಎಲ್ಲ ಸಮುದಾಯಗಳನ್ನು ಒಳಗೊಂಡ ಸಮೀಕ್ಷೆ ಇದಾಗಿದೆ. ಈ ಸಮೀಕ್ಷೆ ಕುರಿತಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಸಮೀಕ್ಷೆಯಲ್ಲಿ ಏನೇ ದೋಷ ಕಂಡು ಬಂದರೂ ಅದನ್ನು ಸರಿ‌ಮಾಡಿಕೊಂಡು ಮುಂದೆ ಹೋಗುವ ಕೆಲಸ ಮಾಡಲಾಗುತ್ತಿದೆ‌. ಇದನ್ನು ಹಿಂದುಳಿದ ವರ್ಗಗಳು ಅರ್ಥ ಮಾಡಿಕೊಳ್ಳಬೇಕು. ಬುದ್ಧ ಬಸವ, ಅಂಬೇಡ್ಕರ್ ಸಂವಿಧಾನದಲ್ಲಿ ನಂಬಿಕೆ ಇಟ್ಟಿರುವವರು ಎಲ್ಲರೂ ಈ ಸಮೀಕ್ಷೆಯನ್ನು ಬೆಂಬಲಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಸಚಿವ ಹಾಗೂ ಶಾಸಕ ಕೆ ಎನ್ ರಾಜಣ್ಣ ಮಾತನಾಡಿ, “ನಮ್ಮವರನ್ನು ನಾವು ಗೌರವಿಸುವ ಕೆಲಸ ಮಾಡಬೇಕು‌. ಬಲಾಢ್ಯರು ಅವಿದ್ಯಾವಂತರಾಗಿದ್ದರೂ ಅವರನ್ನು ಗೌರವದಿಂದ ಕಾಣುತ್ತೇವೆ. ವಿದ್ಯಾವಂತ ಬಂದರೂ ಅವ ಬಲಾಢ್ಯ ಅಲ್ಲ ಎನ್ನುವ ಕಾರಣಕ್ಕೆ ಗೌರವ ಕೊಡುವುದಿಲ್ಲ. ಇದು ಬದಲಾಗಬೇಕು. ಸಿದ್ದರಾಮಯ್ಯನವರು ಸಮೀಕ್ಷೆ ಎಂಬ ಗಟ್ಟಿ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಎಲ್ಲರ ಸರ್ವತೋಮುಖ ಅಭಿವೃದ್ಧಿ ಬಯಸುವಂತಹ ಜನರ ಕೈಲಿ ಅಧಿಕಾರ ಇರಬೇಕು. ಅವರೊಂದಿಗೆ ಗಟ್ಟಿಯಾಗಿ ನಾವು ನಿಲ್ಲಲಿದ್ದೇವೆ. ಕರಾವಳಿಯಲ್ಲಿ ಭೂ ಸುಧಾರಣೆ ಫಲಾನುಭವಿಗಳೆಲ್ಲರೂ ಇಂದು ಗಾಂಧಿ ಹಿಂದುತ್ವವಾದಿಗಳು; ನಾವು ಗೂಡ್ಸೆ ಹಿಂದುತ್ವಾದಿಗಳಲ್ಲ. ನಮ್ಮ ದೇಶಕ್ಕೆ ಅದು ಅಗತ್ಯವಿಲ್ಲ. ಅಹಿಂದ ಹುಟ್ಟು ಹಾಕಿದ್ದೇ ಸಿದ್ದರಾಮಯ್ಯ ಮತ್ತು ಜಾಲಪ್ಪನವರು. ಅಹಿಂದಕ್ಕೆ ಹೆಚ್ಚು ಬಲ ತುಂಬಿದವರೇ ಸಿದ್ದರಾಮಯ್ಯ ನವರು. ಸಮಾಜದಲ್ಲಿ ದುರ್ಬಲರನ್ನೇ ಗುರಿಯಾಗಿಸಿ ಶೋಷಣೆ ಮಾಡಲಾಗುತ್ತದೆ. ಸಮಾನತೆ ಬರುವವರೆಗೂ ಮೀಸಲಾತಿ ಮುಂದುವರೆಯಬೇಕು” ಎಂದು ಹೇಳಿದರು

“ಅಹಿಂದ ಸಮುದಾಯದ ಜನ ಪ್ರತಿನಿಧಿಗಳು ಹೆಚ್ಚು ಹೆಚ್ಚು ಬರಬೇಕು. ನಾವು ಧ್ವನಿ ಇಲ್ಲದ ಸಮುದಾಯಗಳಿಗೆ ಧ್ವನಿಯಾಗಬೇಕು. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸಾಮಾನ್ಯ ಕ್ಷೇತ್ರದಲ್ಲಿ ಚುನಾವಣೆ ಎದುರಿಸಿ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂದು ನುಡಿದರು.

ಜಾಗೃತ ಕರ್ನಾಟಕದ ಮುಖಂಡ ಡಾ. ಎಚ್ ವಿ ವಾಸು ಮಾತನಾಡಿ, “ಮೀಸಲಾತಿ ಕುರಿತು ಈ ದೇಶದಲ್ಲಿ ಬಹಳ ದೊಡ್ಡ ತಪ್ಪು ಅಭಿಪ್ರಾಯವಿದೆ‌. ಸಮಾಜದಲ್ಲಿ ಮಾತ್ರವಲ್ಲ ಸರ್ಕಾರದಲ್ಲೂ ಬೇರೆ ಬೇರೆ ರೀತಿಯ ಅಭಿವ್ಯಕ್ತಿ ಮೀಸಲಾತಿ ಕುರಿತಾಗಿದೆ. ಈ ದೇಶದಲ್ಲಿ ಎರಡು ಸಾವಿರ ವರ್ಷಗಳಿಂದ ಮೀಸಲಾತಿ ಇದೆ. ದೇವಸ್ಥಾನದ ಗರ್ಭಗುಡಿಯಿಂದಲೂ ಬಾಗಿಲ ವರೆಗೂ ಇದು ಅನ್ವಯಿಸುತ್ತಾ ಬಂದಿದೆ. ವೈಕಂ ಸತ್ಯಾಗ್ರಹ ನಡೆದದ್ದು, ಈಳವ ಸಮುದಾಯಕ್ಕೆ ಶಿವನ ದೇವಸ್ಥಾನದ ರಸ್ತೆಗೆ ಪ್ರವೇಶಾವಕಾಶ ನೀಡಬೇಕು ಎಂದು. ದೇವಸ್ಥಾನದ ಪೂಜೆಗೆ ರೋಸ್ಟರ್ ಇರಲ್ಲ, ಎಕ್ಸಾಮ್ ಇರೋದಿಲ್ಲ ಇದು ಹುಟ್ಟಿನ ಆಧಾರದ ಮೇಲೆ ತೀರ್ಮಾನವಾಗುತ್ತಿದೆ. ಹುಟ್ಟಿದ ಕಾರಣಕ್ಕೆ ಅಲಿಖಿತ ನಿಯಮವಾಗಿ ಮೀಸಲಾತಿ ಜಾರಿಯಾಗಿದೆ. ಪಟೇಲ, ಕುಲಕರ್ಣಿ ಮೀಸಲಾತಿ ಇತ್ತು. ಈ ರೀತಿಯ ಮೀಸಲಾತಿ ಕಾರಣಕ್ಕೆ ಆ ಜಾತಿಗಳಿಗೆ ಬಂಡವಾಳ ಸಂಚಯವಾಗಿರುತ್ತೆ‌” ಎಂದು ಹೇಳಿದರು.

“ಒಂದು ಶಾಲೆಯಲ್ಲಿ ಎಲ್ಲಾ ಸಮಾಜದ ಮಕ್ಕಳು ಕಲಿಯದೇ ಇದ್ದರು ಅದು ಹಿಂದುಳಿದ ಶಿಕ್ಷಣದ ಸಂಕೇತ ಎಂದು ಕರೆಸಿಕೊಳ್ಳುತ್ತದೆ. ಎಲ್ಲ ಸಮುದಾಯಕ್ಕೆ ಸೇರಿದ ಮಕ್ಕಳು ಶಾಲೆಗೆ ಬಂದರೆ ಆ ಶಾಲೆ ಸಮೃದ್ಧವಾಗುತ್ತೆ‌. ಆಗ ಶಿಕ್ಷಣದ ಗುಣಮಟ್ಟ ಹೆಚ್ಚಾಗುತ್ತದೆ. ತಿಳಿಳಿಕೆಯೂ ಹೆಚ್ಚಾಗುತ್ತೆ. ಆದರೆ ಇದಕ್ಕೆಲ್ಲ ಕೊಳ್ಳಿ ಇಟ್ಟದ್ದು ಮನುಸ್ಮೃತಿ. ಶಾಲೆಗಳಲ್ಲಿ ಉತ್ಪಾದಕ ಚಟುವಟಿಕೆಗಳಲ್ಲಿ ಭಾಗವಹಿಸದವರನ್ನು ನೀವು ಶಿಕ್ಷಕರನ್ನಾಗಿ ನೇಮಿಸುತ್ತಿದ್ದೀರ. ಕುಂಬಾರರಂತಹ ಕೌಶಲ್ಯವನ್ನೂ ಜ್ಞಾನವೆಂದು ಪರಿಗಣಿಸಿ ಎಂದು ಜ್ಯೋತಿ ಬಾ ಫುಲೆ 1891ರಲ್ಲಿ ಬ್ರಿಟೀಷ್ ಸರ್ಕಾರಕ್ಕೆ ಮನವಿ ಕೊಟ್ಟರು. ಮದ್ರಾಸ್ ಬ್ರಾಹ್ಮಣರ ವಿರುದ್ಧ ಮೈಸೂರು ಬ್ರಾಹ್ಮಣರು ಮೀಸಲಾತಿ ಹೋರಾಟವನ್ನು ಶುರು ಮಾಡಿದರು ಹೀಗೆ ಮೀಸಲಾತಿಗೆ ಎಲ್ಲರೂ ಫಲಾನುಭವಿಗಳೇ” ಎಂದು ಹೇಳಿದರು.

ಇದನ್ನೂ ಓದಿ: ತುಮಕೂರು | ಸರ್ಕಾರಿ ಇಲಾಖೆಗಳಲ್ಲಿ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

“ಮುಸ್ಲೀಮರಿಗೂ ಮೀಸಲಾತಿಗಾಗಿ ಶಿಫಾರಸ್ಸು ಮಾಡಿದ್ದು ಮತ್ತು ಹಿಂದುಳಿದ ಸಮುದಾಯಗಳಿಗಾಗಿ ಶಾಲೆಗಳು, ಹಾಸ್ಟೆಲ್‌ಗಳನ್ನು ಮಾಡುವಂತೆ ಶಿಫಾರಸ್ಸು ಮಾಡಿದ್ದು ಮಿಲ್ಲರ್ ಕಮಿಟಿ. ಅದನ್ನು ಜಾರಿ ಮಾಡಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್.
ಈ ಸಮಾಜ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಬೇಕಾದರೆ ಶಿಕ್ಷಣ ಅಗತ್ಯ. ಎಲ್ಲರನ್ನೂ ಒಳಗೊಳ್ಳಲು ಮೀಸಲಾತಿಯನ್ನು ಕಲ್ಪಿಸಬೇಕು. ಎಲ್ಲರ ಪಾಲ್ಗೊಳ್ಳುವಿಕೆ‌ ಇಲ್ಲವಾದರೆ ರಾಜ್ಯ, ದೇಶ ಹಿಂದುಳಿಯುತ್ತದೆ. ಹಾಗಾಗಿ ಎಸ್ಸಿ, ಎಸ್ಟಿ ಎಂದ ಮಾತ್ರಕ್ಕೆ ನಾವು ಅಂಜಿಕೆ ಪಡುವುದನ್ನು ನಿಲ್ಲಿಸಬೇಕು. ನಮ್ಮ ಪ್ರತಿಭೆಯನ್ನು ಈ ದೇಶದ ಏಳಿಗೆಗೆ ಸಹಕಾರಿ ಎಂದು ಹೆಮ್ಮೆ ಪಡಬೇಕು” ಎಂದರು.

WhatsApp Image 2025 10 18 at 6.08.27 PM 1

“ಆರ್ಗನೈಸರ್ ಎಂಬ ಆರ್‌ಎಸ್‌ಎಸ್ ಪತ್ರಿಕೆ ಸಂವಿಧಾನವನ್ನು ಒಪ್ಪಿಕೊಂಡಿಲ್ಲ. ಯಾಕೆಂದರೆ ಈಗಾಗಲೇ ದೇಶದಲ್ಲಿ ಮನುಸ್ಮೃತಿ ಜಾರಿಯಲ್ಲಿದೆ. ಸಂವಿಧಾನದಲ್ಲಿ‌ ಮನುಸ್ಮೃತಿಯ ಅಂಶಗಳಿಲ್ಲ ಎಂದು ಹೇಳಿಕೊಂಡಿತ್ತು. ಆದರೆ ಸಿದ್ದರಾಮಯ್ಯ ನವರ ಸರ್ಕಾರ ಎಷ್ಟೇ ಸವಾಲುಗಳು ಎದುರಾದರೂ ಸಂವಿಧಾನ ಜಾರಿಮಾಡಲು ಹೊರಟಿದೆ” ಎಂದರು.

ಕಾರ್ಯಕ್ರಮದಲ್ಲಿ ಜಾಗೃತ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಅನಿಲ್ ಕುಮಾರ್ ಚಿಕ್ಕದಾಳವಟ್ಟ, ಆದಂ ಖಾನ್, ಚಂದನ್ ಡಿ ಎನ್, ಕಿಶೋರ್, ನವೀನ್ ಪೂಜಾರಹಳ್ಳಿ, ದಯಾನಂದ್, ಟೂಡಾ ಶಶಿಧ‌ರ್, ಕಾಂಗ್ರೆಸ್ ಮುಖಂಡ ಹೆತ್ತೇನಹಳ್ಳಿ ಮಂಜುನಾಥ್, ಮಧುಗಿರಿ ಕೆಡಿಪಿ ಸಭೆ ಸದಸ್ಯೆ ಜಯಲಕ್ಷ್ಮಿ ಜೆ ಕೆ, ಹಿಂದುಳಿದ ವರ್ಗಗಳ ಒಕ್ಕೂಟ ಅಧ್ಯಕ್ಷ ಧನಿಯ ಕುಮಾ‌ರ್, ತುಮಕೂರು ಮಹಾನಗರ ಪಾಲಿಕೆ ಮಾಜಿ ವಿರೋಧ ಪಕ್ಷದ ನಾಯಕ ಜೆ ಕುಮಾರ್, ಮೈಲಪ್ಪ, ಡಿ ಟಿ ವೆಂಕಟೇಶ್, ಮೊಹಮ್ಮದ್ ಜಿಯಾವುಲ್ಲಾ, ಟಿ ಆರ್ ಸುರೇಶ್, ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್, ಕರ್ನಾಟಕ ಚೆಸ್ ಅಸೋಸಿಯೇಷನ್ ಅಧ್ಯಕ್ಷ ಟಿ ಎನ್ ಮಧುಕರ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...