ತುಮಕೂರು | ದ್ವಿತೀಯ ಪಿ.ಯು.ಸಿ ಪರೀಕ್ಷೆ ಪ್ರಾರಂಭ : ಪಾರದರ್ಶಕತೆ ಕಾಯ್ದುಕೊಳ್ಳಲು ವೆಬ್‌ಕಾಸ್ಟಿಂಗ್

Date:

ತುಮಕೂರು ಜಿಲ್ಲೆಯಲ್ಲಿ ಮಾರ್ಚ್ 1ರ ಶನಿವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು, ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು. 

 ತುಮಕೂರು ಜಿಲ್ಲಾ ಪಂಚಾಯತಿ ಭೌಗೋಳಿಕ ಮಾಹಿತಿ ಕೇಂದ್ರದಲ್ಲಿ ಶನಿವಾರ ವೆಬ್‌ಕಾಸ್ಟಿಂಗ್ ವ್ಯವಸ್ಥೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 35 ಕೇಂದ್ರಗಳಲ್ಲಿ ಮಾರ್ಚ್ 1 ರಿಂದ 20ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ನಡೆಸಲು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇರಿಸಲು 40 ಗಣಕಯಂತ್ರಗಳನ್ನು ವ್ಯವಸ್ಥೆ ಮಾಡಲಾಗಿದ್ದು, 40 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು. 

1001118083

 ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಪೊಲೀಸ್ ಕಣ್ಗಾವಲಿನಲ್ಲಿ ಪ್ರತೀ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ತಲುಪಿಸಲು ಪ್ರತಿ ತಾಲ್ಲೂಕಿನಲ್ಲಿ ಭದ್ರತಾ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಮೇಲುಸ್ತುವಾರಿಗಾಗಿ ಮೇಲುಸ್ತುವಾರಿ ಅಧಿಕಾರಿ, ಪ್ರತೀ ಪರೀಕ್ಷಾ ಕೊಠಡಿಗೆ ಮೇಲ್ವಿಚಾರಕರು, ಸ್ಕ್ವಾಡ್ , ಪೊಲೀಸ್ ಹಾಗೂ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹೇಳಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001118085

 ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಪ್ರಸಕ್ತ ವರ್ಷ ಜಿಲ್ಲಾ ಪಂಚಾಯತಿಯಲ್ಲಿ ಕಣ್ಗಾವಲು ಕೇಂದ್ರವನ್ನು ತೆರೆಯಲಾಗಿದ್ದು, ಪರೀಕ್ಷೆ ಮುಕ್ತಾಯವಾಗುವವರೆಗೂ ಈ ಕೇಂದ್ರ ಕಾರ್ಯನಿರ್ವಹಿಸಲಿದೆ. ಕಣ್ಗಾವಲು ವ್ಯವಸ್ಥೆಯಡಿ ಪರೀಕ್ಷಾ ಕೊಠಡಿಗಳ ಮೇಲೆ ಸೂಕ್ಷö್ಮವಾಗಿ ನಿಗಾ ಇಡಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು. 

 ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಶನಿವಾರ ಮೊದಲ ದಿನ ಕನ್ನಡ ಭಾಷಾ ಪರೀಕ್ಷೆ ನಡೆದಿದ್ದು, ಕನ್ನಡ ಭಾಷಾ ಪರೀಕ್ಷೆಗೆ 22,502 ವಿದ್ಯಾರ್ಥಿಗಳು ನೋಂದಾಯಿಸಿಕೊAಡಿದ್ದು, ಈ ಪೈಕಿ 21,560 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಉಳಿದಂತೆ 942 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಅವರು ತಿಳಿಸಿದರು.  

 ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ, ವೆಬ್ ಕಾಸ್ಟಿಂಗ್ ವ್ಯವಸ್ಥೆಯ ನೋಡಲ್ ಅಧಿಕಾರಿ ಗೋಪಾಲ್, ವೆಬ್ ಕಾಸ್ಟಿಂಗ್ ನಿಯೋಜಿತ ಸಿಬ್ಬಂದಿ, ಮತ್ತಿತರರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...