ತುಮಕೂರು | ಕೇಂದ್ರಕ್ಕೆ ಇಚ್ಛಾಶಕ್ತಿ ಇದ್ದಿದ್ದರೆ ಶ್ರೀಗಳಿಗೆ ʼಭಾರತ ರತ್ನʼ ದೊರಕುತಿತ್ತು: ಗೃಹ ಸಚಿವ ಪರಮೇಶ್ವರ್

Date:

ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಅಕ್ಷರ ದಾಸೋಹ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಅಪಾರ ಕೊಡುಗೆಯನ್ನು ನೀಡಿರುವ ತ್ರಿವಿಧ ದಾಸೋಹಮೂರ್ತಿ ಲಿಂಗೈಕ್ಯ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಡಾ. ಶಿವಕುಮಾರ ಸ್ವಾಮೀಜಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ “ಭಾರತ ರತ್ನ” ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒತ್ತಾಯಿಸಿದರು.

ತುಮಕೂರು ನಗರದ ಸಿದ್ದಗಂಗಾ ಮಠಕ್ಕೆ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತಿ ಪ್ರಯುಕ್ತ ಸೋಮವಾರ ಬೆಳಿಗ್ಗೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

“ಶ್ರೀಗಳು ಮಾಡಿರುವ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ನೀಡಬೇಕು. ಶ್ರೀಗಳಿಗೆ ಭಾರತ ರತ್ನ ಬೇಕಿಲ್ಲ. ಆದರೆ ಅವರ ಕೊಡುಗೆಗೆ ʼಭಾರತ ರತ್ನʼ ಕೊಡಬೇಕಾದುದು ಗೌರವ. ಈಗಾಗಲೇ ರಾಜ್ಯ ಸರ್ಕಾರವು ಶಿಫಾರಸು ಮಾಡಿರುವುದನ್ನು ಪರಿಗಣಿಸಿದರೆ ಸಾಕು. ಸ್ವಾಮೀಜಿಯವರಿಗೆ ಭಾರತ ರತ್ನ ಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಅನ್ನಿಸಿದರೆ ಯಾವ ಅರ್ಜಿಯೂ ಬೇಕಾಗುವುದಿಲ್ಲ” ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಡೀ ದೇಶದಲ್ಲಿ ಡಾ. ಶಿವಕುಮಾರ ಸ್ವಾಮೀಜಿಯವರ ಕೊಡುಗೆ ಒಂದು ರೀತಿಯ ವಿಸ್ಮಯ. ಎಷ್ಟೊಂದು ಬಡ ಮಕ್ಕಳಿಗೆ ಅನ್ನ ದಾಸೋಹ, ವಿದ್ಯಾದಾನ ಮಾಡುವ ದೊಡ್ಡ ಪ್ರಯತ್ನ ದೇಶದಲ್ಲಿ ಎಲ್ಲೂ ಇಲ್ಲ. ಈ ದೇಶದಲ್ಲಿ ಸಾಮಾನ್ಯ ಜನರು ಪ್ರಜ್ಞಾವಂತರಾಗಬೇಕು. ಆಗ ಅಭಿವೃದ್ಧಿ ಸುಲಭವಾಗುತ್ತದೆಂಬ ಮಹಾತ್ಮ ಗಾಂಧೀಜಿಯವರ ಮಾತನ್ನು ಶಿವಕುಮಾರ ಸ್ವಾಮೀಜಿಯವರು ಆಗಾಗ್ಗೆ ಹೇಳುತ್ತಿದ್ದರು. ಹೀಗಾಗಿ, ಮಕ್ಕಳಿಗೆ ಶಿಕ್ಷಣ ಕೊಡುವುದು ಅತಿ ಮುಖ್ಯ ಎಂಬುದು ಶ್ರೀಗಳಿಗೆ ತಿಳಿದಿತ್ತು. ಇಡೀ ರಾಜ್ಯದಲ್ಲಿ ಎಲ್ಲ ಭಾಗದಿಂದ ಬಂದ ಬಡ ಮಕ್ಕಳು ವಿದ್ಯೆ ಕಲಿತು, ಜೀವನವನ್ನು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ” ಎಂದರು.

“ಮಠದಲ್ಲಿ ಕಲಿತ ಅನೇಕ ಜನ ವಿದೇಶದಲ್ಲಿದ್ದಾರೆ. ರಾಜ್ಯ ಮತ್ತು ದೇಶದ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಇಡೀ ದೇಶದಲ್ಲಿ ಇದೊಂದು ಬಹಳ ದೊಡ್ಡ ಕೊಡುಗೆ” ಎಂದು ಬಣ್ಣಿಸಿದರು.

“ತುಮಕೂರು ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ ಅವರು ಏಪ್ರಿಲ್‌ 4ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಅವರು ನಾಮಪತ್ರ ಸಲ್ಲಿಸುವ ದಿನದಂದು ಮುಖ್ಯಮಂತ್ರಿಯವರು, ಕೆಪಿಸಿಸಿ ಅಧ್ಯಕ್ಷರು ಬರುವ ಸಾಧ್ಯತೆ ಇದೆ. ಆದರೆ ಇನ್ನು ಅವರ ಕಾರ್ಯಕ್ರಮ ನಿಗದಿಯಾಗಿಲ್ಲ. ಜತೆಗೆ ನಮ್ಮ ಜಿಲ್ಲೆಯ ಎಲ್ಲ ನಾಯಕರು, ಮುಖಂಡರುಗಳೂ ಕೂಡ ಭಾಗವಹಿಸಲಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಹಾಸನ, ಮಂಡ್ಯ ಸೇರಿ ಮೂರರಲ್ಲಿ ‘ಕೈ’ ಗೆಲ್ಲಿಸುವ ಹೊಣೆ ಚಂದ್ರಶೇಖರ್‌ ಹೆಗಲಿಗೆ

“ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮುದ್ದಹನುಮೇಗೌಡರ ಗೆಲುವು ನಿಶ್ಚಿತ. ಮುದ್ದಹನುಮೇಗೌಡರು ಸಜ್ಜನ ವ್ಯಕ್ತಿ, ಜತೆಗೆ ಶಾಸಕರಾಗಿ, ಸಂಸದರಾಗಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಜನಮನ್ನಣೆಯನ್ನು ಗಳಿಸಿರುವ ವ್ಯಕ್ತಿ. ಹಾಗಾಗಿ ಅವರು ಗೆಲುವು ಸಾಧಿಸುತ್ತಾರೆಂಬ ವಿಶ್ವಾಸ, ನಂಬಿಕೆ ಇದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...