ತುಮಕೂರು | ಸಿದ್ದರಾಮಯ್ಯನವರೇ ಪೂರ್ಣಾವಧಿ ಸಿಎಂ: ಸಚಿವ ಕೆ ಎನ್ ರಾಜಣ್ಣ

Date:

ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿ ಅಧಿಕಾರ ನಡೆಸಲಿದ್ದಾರೆ. ಶಾಸಕರು ಅವರ ಬೆಂಬಲಕ್ಕೆ ಇದ್ದಾರೆ. ಹಾಗಾಗಿ ಹೈಕಮಾಂಡ್ ಕೂಡ ಬದಲಾವಣೆ ಮಾಡುವ ಉದ್ದೇಶ ಹೊಂದಿಲ್ಲ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ತಿಳಿಸಿದರು.

ತುಮಕೂರು ನಗರದ ಗೃಹ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸಿಎಂ ಸಿದ್ದರಾಮಯ್ಯನವರೇ ವ್ಯಕ್ತಪಡಿಸಿದಂತೆ ನಾನೂ ಕೂಡ ಅದೇ ಆಶಯವನ್ನು ಹೊಂದಿದ್ದೇನೆ. ಸಿಎಂ ಬದಲಾವಣೆ ಆಗಬೇಕೆಂದರೆ ಹೈಕಮಾಂಡ್ ಬದಲು ಮಾಡಬೇಕೇ ಹೊರತು, ಎಂಎಲ್‌ಎಗಳು ಮಾಡಲಿಕ್ಕೆ ತಯಾರಿಲ್ಲ. ಹೈಕಮಾಂಡ್ ಕೂಡ ಸಿಎಂ ಬದಲಾವಣೆ ಮಾಡಲು ತಯಾರಿಲ್ಲ ಅಂತಾ ಅಂದುಕೊಂಡಿದ್ದೇನೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

“ದೆಹಲಿಗೆ ಕೇಂದ್ರದಲ್ಲಿ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಮಂತ್ರಿಗಳನ್ನು ಭೇಟಿ ಮಾಡುವ ಅಗತ್ಯ ಇರುತ್ತದೆ. ಹಾಗಾಗಿ ಅವರನ್ನ ಭೇಟಿ ಮಾಡವುದಕ್ಕೆ ಹೋಗಿದ್ದಾರೆ. ಭೇಟಿ ಸಂದರ್ಭದಲ್ಲಿ ಪಕ್ಷದ ಮುಖಂಡರನ್ನು ಭೇಟಿ ಮಾಡುವುದು ವಾಡಿಕೆ.
ಅದರಲ್ಲಿ ನಮ್ಮ ಪಕ್ಷದ ಕೆಲವು ತೀರ್ಮಾನಗಳು. ಬೋರ್ಡ್, ಕಾರ್ಪೋರೇಷನ್ ಎಂಎಲ್‌ಸಿಗಳು ಅಂತಿಮ ವಿಚಾರವಾಗಿ ಮಾತನಾಡುವುದು ಇರುತ್ತದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಿ ಗೊಂದಲ ಸೃಷ್ಟಿ ಮಾಡಬಾರದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಐಸಿಸಿ ಅಧ್ಯಕ್ಷರು ಸಹಿ ಮಾಡಿ ಒಂದು ಪತ್ರಕಳಿಸಿದರೆ, ಅದನ್ನು ಒಪ್ಪಿಕೊಳ್ಳಬೇಕು. ಅದನ್ನು ಬಿಟ್ಟು ಬದಲಾವಣೆ ಮಾಡುತ್ತೇವೆ ಎನ್ನುವುದು ಅಶಿಸ್ತಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ: ಹುಲಿಗಳ ಸಾವಿನ ಬಳಿಕ ಚಿರತೆ ಶವ ಪತ್ತೆ

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರು. ಹಾಗಾಗಿ ಅವರು ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಎಲ್ಲರನ್ನೂ ಭೇಟಿ ಮಾಡುವುದು ಇರುತ್ತದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ” ಎಂದು ಹೇಳಿದರು.

“ಸ್ವಾಮೀಜಿಗಳು ಒಬ್ಬೊಬ್ಬರು ಒಬ್ಬರ ಕಡೆ ಇರುತ್ತಾರೆ. ಇದು ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಹಾಗಾಗಿ ಹೇಳಿಕೆಗಳಲ್ಲಿ ತಪ್ಪು ಸರಿ ಹುಡುಕಬಾರದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...