ತುಮಕೂರು | ಸ್ಲಂ ನಿವಾಸಿಗಳ ಬೇಡಿಕೆ ಈಡೇರಿಕೆಗೆ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಆಗ್ರಹ 

Date:

ಸ್ಲಂ ನಿವಾಸಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

“ನಿವೇಶನ ರಹಿತ ಕುಟುಂಬಗಳಿಗೆ 4 ಎಕರೆ ಮೀಸಲಿಟ್ಟಿರುವ ಭೂಮಿಯನ್ನು ಸ್ವಾಧಿನಕ್ಕೆ ಪಡೆದುಕೊಂಡು ಮಂಡಳಿಯಿಂದ ವಸತಿ ನಿರ್ಮಿಸಲು ದಿಬ್ಬೂರು ದೇವರಾಜ್ ಅರಸು ಬಡಾವಣೆಯ ಸ್ಲಂ ನಿವಾಸಿಗಳಿಗೆ ಹಂಚಿಕೆ ಪತ್ರ ಮತ್ತು ನಗರ ಪಾಲಿಕೆಗೆ ಹಸ್ತಾಂತರಿಸಿಕೊಂಡು ಮೂಲಸೌಲಭ್ಯಗಳನ್ನು ಕಲ್ಪಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

“ಎನ್ ಆರ್ ಕಾಲೋನಿ ಭಾಗ-2 ಮತ್ತು ಭಾರತಿ ನಗರ ಭಾಗ-2ವನ್ನು ಕೊಳಚೆ ಪ್ರದೇಶವೆಂದು ಘೋಷಿಸಿ ಮಾರಿಯಮ್ಮ ನಗರದ ಸರ್ವೇ ನಂ. 120ರಲ್ಲಿ ದೇವಸ್ಥಾನ ಮತ್ತು ಹೆಚ್ಚುವರಿ ಕುಟುಂಬಗಳಿಗೆ ಪುನರ್‌ ವಸತಿ ಕಲ್ಪಿಸಬೇಕು. ಎಸ್ ಎನ್ ಪಾಳ್ಯ ಮತ್ತು ಅರಳೀಮರದ ಪಾಳ್ಯ, ಕೊಳಚೆ ಪ್ರದೇಶಗಳಿಗೆ ಹಕ್ಕುಪತ್ರ ನೀಡಬೇಕು. ಕೋಡಿಗಳ್ಳ, ಇಸ್ಮಾಯಿಲ್ ನಗರದ ಹಂದಿ ಜೋಗಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಬೇಡಿಕೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿಯವರು ಸ್ಲಂ ಜನರ ಕುಂದುಕೊರತೆ ಸಭೆ ಕರೆಯಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಚಾಲಕ ಎ ನರಸಿಂಹಮೂರ್ತಿ ಮಾತನಾಡಿ, “ನಮ್ಮ ನಿರಂತರ ಹೋರಾಟದಿಂದ 2022ರ ಸಾಲಿನಲ್ಲಿ 17ಎಕರೆ ಸರ್ಕಾರಿ ಭೂಮಿಯನ್ನು ಗುರುತಿಸಿ ನಗರ ಪಾಲಿಕೆಗೆ ನಿವೇಶನ ರಹಿತರಿಗೆ ನಿವೇಶನ ನೀಡಲು ಹಸ್ತಾಂತರಿಸಿದೆ. ಇದರಲ್ಲಿ 400 ಮಂದಿ ಮಹಿಳೆಯರಿಗೆ ವಿಶೇಷ ಪ್ರಕರಣವೆಂದು ಪರಿಗಣಿಸಿ, ಹಿಂದಿನ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ 4 ಎಕರೆ ಭೂಮಿಯನ್ನು ಕಾಯ್ದಿರಿಸಿದ್ದಾರೆ. ಆದರೆ ಈವರೆಗೆ ನಗರಪಾಲಿಕೆ ಫಲಾನುಭವಿಗಳ ಪಟ್ಟಿಯನ್ನು ಸಮೀಕ್ಷೆ ಮಾಡದೇ ಭೂಮಿಯನ್ನು ಗುರುತಿಸಿ ಸ್ವಾಧೀನಕ್ಕೆ ನೀಡದೆ ನಿರ್ಲಕ್ಷ್ಯ ಮಾಡಿದೆ” ಎಂದು ಆರೋಪಿಸಿದರು.

“2017ರಲ್ಲಿ ನಗರದ ಹಲವು ಕೊಳಚೆ ಪ್ರದೇಶಗಳ 1200 ಕುಟುಂಬಗಳನ್ನು ಸ್ಥಳಾಂತರಿಸಿದ್ದು, ಫಲಾನುಭವಿಗಳಿಗೆ ಹಂಚಿಕೆ ಪತ್ರಗಳನ್ನೂ ನೀಡಿಲ್ಲ. ಅಗತ್ಯ ಮೂಲಸೌಲಭ್ಯಗಳನ್ನು ನೀಡಲು ನಗರಸಭೆಗೆ ಹಸ್ತಾಂತರ ಮಾಡಿಕೊಂಡಿಲ್ಲ. ಸರ್ವೇ ನಂ. 120 ಸರ್ಕಾರಿ ಕಂದಾಯ ಭೂಮಿಯಾಗಿದ್ದು, ಈ ಪ್ರದೇಶದಲ್ಲಿ 38 ಗುಂಟೆ ಮಾರಿಯಮ್ಮ ನಗರ ಪ್ರದೇಶವಿದೆ. ಈ ಪ್ರದೇಶದಲ್ಲಿ ದೇವಸ್ಥಾನ ಮತ್ತು ಹೆಚ್ಚುವರಿ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಿ 2024-25ನೇ ಸಾಲಿನ ನಗರಪಾಲಿಕೆ ಸಾಲಿನಲ್ಲಿ ಕೊಳಚೆ ಪ್ರದೇಶಗಳಲ್ಲಿ ಅಭಿವೃದ್ಧಿ ಕೈಗೊಳ್ಳಲು ಪ್ರತ್ಯೇಕ ಅನುದಾನವನ್ನು ಮೀಸಲಿಡಬೇಕು. ಈ ಎಲ್ಲ ಒತ್ತಾಯಗಳನ್ನು ಈಡೇರಿಸಲು ಜಿಲ್ಲಾಧಿಕಾರಿಯವರು ತುರ್ತಾಗಿ ಕುಂದುಕೊರತೆ ಸಭೆ ಕರೆಯಬೇಕು. ಕಾರಣ ಈ ಎಲ್ಲ ಬೇಡಿಕೆಗಳನ್ನು ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್‌ ಅವರ ಜನತಾದರ್ಶನದಲ್ಲಿ ನೀಡಿ 3 ತಿಂಗಳು ಕಳೆದರೂ ಜಿಲ್ಲಾಡಳಿತ ಒಂದೇ ಒಂದು ಸಮಸ್ಯೆಯನ್ನೂ ಪರಿಹರಿಸಿಲ್ಲ” ಎಂದರು.

ಜಿಲ್ಲಾಧಿಕಾರಿ ಶುಭಕಲ್ಯಾಣ್ ಮನವಿ ಸ್ವೀಕರಿಸಿ ಮಾತನಾಡಿ, ಸ್ಲಂ ಜನರ ಸಮಸ್ಯೆಗಳ ಮಾಹಿತಿಯನ್ನು ಅಧಿಕಾರಿಗಳು ನನ್ನ ಗಮನಕ್ಕೆ ತಂದಿಲ್ಲ. ನಿವೇಶನ ರಹಿತರಿಗೆ ವಿಶೇಷ ವರ್ಗದ ಮಹಿಳೆಯರಿಗೆ 4ಎಕರೆ ಭೂಮಿಯನ್ನು ಕಳೆದ ಆಗಸ್ಟ್‌ನಲ್ಲಿ ನೀಡಲು ತೀರ್ಮಾನಿಸಲಾಗಿದೆ. ಹಾಗಾಗಿ ನಿವೇಶನ ರಹಿತರಿಗೆ ಭೂಮಿ ಮತ್ತು ವಸತಿಯನ್ನು ತ್ವರಿತವಾಗಿ ನೀಡಲು ಕ್ರಮವಹಿಸುವ ಜತೆಗೆ ಸ್ಲಂ ಸಂಘಟನೆ ನೀಡಿರುವ 10 ಸಮಸ್ಯೆಗಳಿಗೆ ಜಿಲ್ಲಾಡಳಿದಿಂದ ಪರಿಹಾರ ನೀಡಲು ತುರ್ತಾಗಿ ಸಂಬಂಧಪಟ್ಟ ಇಲಾಖೆಗಳು ಮತ್ತು ಸಂಘಟನೆ ಮುಖಂಡರೊಂದಿಗೆ ಕುಂದುಕೊರತೆ ಸಭೆ ಕರೆಯಲಾಗುವುದು” ಎಂದು ಭರವಸೆ ನೀಡಿದ್ದು, ಪ್ರತಿಭಟನಾ ಧರಣಿ ಕೈಬಿಡುವಂತೆ ಕೋರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ರಾಜ್ಯ ಹೆದ್ದಾರಿಯಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆಗ್ರಹ

ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಆಂಜಿನಪ್ಪ, ಪ್ರತಿಭಟನಾ ನೇತೃತ್ವ ವಹಿಸಿಸಿದ್ದ ಕೊಳಗೇರಿ ಸಮಿತಿಯ ಪದಾಧಿಕಾರಿಗಳಾದ ಕಣ್ಣನ್, ಶಂಕ್ರಯ್ಯ, ಅರುಣ್, ತಿರುಮಲಯ್ಯ, ಜಾಬೀರ್‌ಖಾನ್, ಶಾರದಮ್ಮ, ಚಕ್ರಪಾಣಿ, ಮಂಗಳಮ್ಮ, ಮುರುಗ, ಕೃಷ್ಣಮೂರ್ತಿ, ಅನುಪಮಾ, ಪೂರ್ಣಿಮಾ, ಮಹಾದೇವಮ್ಮ, ಲಕ್ಷ್ಮೀಪತಿ, ಸಿದ್ದಪ್ಪ, ರಾಜು, ಶಾಬುದ್ದೀನ್, ಹನುಮಕ್ಕ, ಗುಲ್ನಾಜ್, ಗಣೇಶ್, ಮಂಜುನಾಥ್, ಶಿವಕುಮಾರ್, ಧನಂಜಯ್, ಮುಬಾರಕ್, ರಾಜ, ಮಾಧವನ್, ಕಾಶಿರಾಜ್, ಮಾರಿ, ಶಬಾನ, ಗೀತಾ, ನಂಜಮ್ಮ, ಮಹಾದೇವಮ್ಮ ಸೇರಿದಂತೆ ನೂರಾರು ಮಹಿಳೆಯರು ಮತ್ತು ಸ್ಲಂ ನಿವಾಸಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...