ತುಮಕೂರು | ವಿಶೇಷ ಚೇತನರ ಆತ್ಮಸ್ಥೈರ್ಯಕ್ಕೆ ಸಮಾಜದ ಬೆಂಬಲ ಅಗತ್ಯ : ಗೃಹ ಸಚಿವ ಪರಮೇಶ್ವರ

Date:

ವಿಕಲಚೇತನರ ಆತ್ಮಸ್ಥೈರ್ಯಕ್ಕೆ ಸಮಾಜದ ಬೆಂಬಲ ಅಗತ್ಯ. ಅವರನ್ನು ಕಡೆಗಣಿಸದೆ, ನಿಂದಿಸದೆ ಆತ್ಮಗೌರವದಿಂದ ಬದುಕಲು ಅವಕಾಶ ನೀಡಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ತಿಳಿಸಿದರು.

ಶನಿವಾರ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಹಾಗೂ ವಿಕಲಚೇತನರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಎಡಿಐಪಿ ಯೋಜನೆಯಡಿ ಜಿಲ್ಲೆಯ ಕುಣಿಗಲ್, ಶಿರಾ, ಪಾವಗಡ ತಾಲೂಕಿನ ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,   ನಮ್ಮ ದೇಶದ ಜನಸಂಖ್ಯೆಯಲ್ಲಿ ಶೇಕಡಾ 5ರಷ್ಟು ವಿಶೇಷ ಚೇತನರಿದ್ದು, ಸಾಮಾನ್ಯ ಜನರಿಗಿಂತ ಹೆಚ್ಚು ಪ್ರತಿಭೆ, ಬುದ್ದಿವಂತಿಕೆ ಹೊಂದಿದ್ದಾರೆ ಎಂದು ತಿಳಿಸಿದರು.

1001203223

 ಇತ್ತೀಚಿನ ದಿನಗಳಲ್ಲಿ ವಿಕಲಚೇತನರು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡು ಸಾಧನೆ ಮಾಡಿದ್ದಾರೆ. ಸ್ವಾವಲಂಬಿ ಬದುಕಿಗಾಗಿ ಅವರ ಉದ್ಯೋಗ ಕ್ಷೇತ್ರಗಳೂ ಬದಲಾಗುತ್ತಾ, ಹೊಸ ಅವಕಾಶಗಳೂ ದೊರೆಯುತ್ತಿವೆ. ಪ್ರಸ್ತುತ ದಿನಗಳಲ್ಲಿ ವಿಕಲಚೇತನರು ಆಧುನಿಕ ತಂತ್ರಜ್ಞಾನದ ಶಿಕ್ಷಣ ಪಡೆದು ಕಂಪ್ಯೂಟರ್ ಆಪರೇಟರ್, ಡೇಟಾ ಎಂಟ್ರಿ ಆಪರೇಟರ್ ನೌಕರಿ ಸೇರಿದಂತೆ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಮೂಲಕ ತಮ್ಮ ಜೀವನ ರೂಪಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ ವಿಕಲಚೇತನರಿಗಾಗಿ ಎಲ್ಲ ಇಲಾಖೆಗಳ ಅನುದಾನದಲ್ಲಿ ಶೇಕಡಾ 3ರಷ್ಟು ಮೀಸಲಾತಿ ನೀಡಲಾಗುತ್ತದೆ. ಈ ಅನುದಾನವನ್ನು ಬಳಸಿಕೊಂಡು ವಿಲಚೇತನರಿಗೆ ಸರ್ಕಾರಿ ಸೌಲಭ್ಯಗಳು ಸಿಗುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು. 

1001203242

ವಿಶೇಷ ಯೋಜನೆಯಡಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಯುಡಿಐಡಿ ಗುರುತಿನ ಚೀಟಿ ಹೊಂದಿರಬೇಕು. ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ವಿಶೇಷ ಶಿಬಿರಗಳನ್ನು ನಡೆಸಿ ವಿಶೇಷ ಚೇತನರಿಗೆ ಗುರುತಿನ ಚೀಟಿ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಈಗಾಗಲೇ ಶೇ.99ರಷ್ಟು ಯುಡಿಐಡಿ ಕಾರ್ಡುಗಳನ್ನು ನೀಡಲಾಗಿದೆ ಎಂದರು.

ವಿವಿಧ ವಸತಿ ಯೋಜನೆಯಡಿ ಈವರೆಗೆ ಜಿಲ್ಲೆಯಲ್ಲಿ 10,000 ನಿವೇಶನಗಳನ್ನು ಗುರುತಿಸಲಾಗಿದ್ದು, ಇದರಲ್ಲಿ ವಿಶೇಷಚೇತನರಿಗಾಗಿ ಶೇಕಡಾ 3ರಷ್ಟು ಮೀಸಲಾತಿ ನೀಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ವಿಶೇಷಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಹತೆಗನುಗುಣವಾಗಿ ಲ್ಯಾಪ್‌ಟಾಪ್‌ಗಳನ್ನು ನೀಡಲು ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದರು.

1001203225

  ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಮಾತನಾಡಿ. ವಿಕಲಚೇತನರಿಗೂ ಸಮಾನ ಅವಕಾಶಗಳು ದೊರೆಯಬೇಕು. ವಿಕಲಚೇತನರಲ್ಲಿಯೂ ಬಹಳ ಪ್ರತಿಭಾವಂತವರಿದ್ದು, ಉತ್ತೇಜನ ನೀಡುವ ಕಾರ್ಯವನ್ನು ಸರ್ಕಾರದಿಂದ ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭಾಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಹೆಚ್.ಎ.ಎಲ್ ಪ್ರತಿನಿಧಿ ಪ್ರಧಾನ ವ್ಯವಸ್ಥಾಪಕ ಕೃಷ್ಣಪ್ಪ, ವಿಕಲ ಚೇತನ ಕಲ್ಯಾಣಾಧಿಕಾರಿ ಚಿದಾನಂದಮೂರ್ತಿ, ಮತ್ತಿತರ ಅಧಿಕಾರಿಗಳು ಇದ್ದರು.

ಇದೇ ಸಂದರ್ಭದಲ್ಲಿ ಸುಮಾರು 600 ಫಲಾನುಭವಿಗಳಿಗೆ ಬ್ಯಾಟರಿ ಚಾಲಿತ ಮೊಪೆಡ್, ಕೈ ಚಾಲಿತ ಸೈಕಲ್, ಕ್ರಚಸ್, ವಾಕರ್, ಸ್ಮಾರ್ಟ್ ಫೋನ್, ವ್ಹೀಲ್ ಚೇರ್, ಎಂ.ಆರ್. ಕಿಟ್, ಮತ್ತಿತರ ಸಲಕರಣೆ ಹಾಗೂ ಪಾಲಿಕೆ ವ್ಯಾಪ್ತಿಯ 3 ವಾರ್ಡು ಮತ್ತು 38 ಗ್ರಾಮ ಪಂಚಾಯತಿಗಳಿಗೆ ಕ್ಷಯರೋಗ ಮುಕ್ತವೆಂದು ಘೋಷಿಸಿ ಸಾಂಕೇತಿಕವಾಗಿ ಪ್ರಮಾಣಪತ್ರಗಳನ್ನು ಸಚಿವರು ವಿತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...