ತುಮಕೂರು | ಮೂಲ ಸೌಕರ್ಯಕ್ಕೆ ಆಗ್ರಹಿಸಿ ಮಳೆಯಲ್ಲಿಯೇ ವಿದ್ಯಾರ್ಥಿನಿಯರ ಪ್ರತಿಭಟನೆ

Date:

ಬಿಸಿಎಂ ಹಾಸ್ಟೆಲ್ ಸಮಸ್ಯೆಗಳ ಪರಿಹಾರಕ್ಕೆ ವಿದ್ಯಾರ್ಥಿನಿಯರಿಂದ ಮಳೆಯಲ್ಲಿಯೇ ಪ್ರತಿಭಟನಾ ಧರಣಿ ಪ್ರಸ್ತುತ ನಡೆಯುತ್ತಿದೆ.

ಕ್ಯಾತ್ಸಂದ್ರದ ಮೈದಾಳ ರಸ್ತೆಯಲ್ಲಿರುವ ಶ್ರೀ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದ ಎದುರು ಹಾಸ್ಟೆಲ್ ವಿದ್ಯಾರ್ಥಿಯರು ಎಐಡಿಎಸ್‌ಒ ಹಾಗೂ ಎಐಎಂಎಸ್ಎಸ್ ಸಹಯೋಗದಲ್ಲಿ ಮೂಲಭೂತ ಸೌಕರ್ಯಗಳ ಈಡೇರಿಕೆಗಾಗಿ ಹಾಗೂ ಜಿಲ್ಲಾಧಿಕಾರಿ ಮತ್ತು ಬಿಸಿಎಂ ಇಲಾಖೆ ಕಮೀಷನರ್ ಸ್ಥಳಕ್ಕೆ ಆಗಮಿಸಬೇಕೆಂದು ಮಳೆಯ ನಡುವೆಯೇ ಪಟ್ಟು ಹಿಡಿದಿದ್ದಾರೆ.

ಎಂಟು ತಿಂಗಳಿಂದೆಯೇ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಮನವಿ ಮಾಡಿದ್ದರೂ ಯಾವುದೇ ಕ್ರಮವಾಗಿಲ್ಲ. ಪ್ರತಿಭಟನೆಯನ್ನು ತಡೆಯುವ ಪ್ರಯತ್ನವೂ ನಡೆದಿದೆ ಎಂದು ವಿದ್ಯಾರ್ಥಿನಿಯರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧಿಕಾರಿಗಳೇ ಬೆಡ್ ಶೀಟ್ ಗಳನ್ನು ಕದ್ದು ಮಾರಾಟ ಮಾಡಿದ್ದಾರೆ, ಕಳಪೆ ಗುಣಮಟ್ಟದ ಆಹಾರ ನೀಡುತ್ತಿದ್ದಾರೆ. ಕಿಟ್ ಗಳನ್ನು‌ ನೀಡಿ ಸಹಿ‌ ಮಾಡಿಸಿಕೊಂಡು ಹಿಂಪಡೆದಿದ್ದಾರೆ ಎಂದು ಆರೋಪಿಸಿದರಲ್ಲದೆ ತನಿಖೆಗೆ ಆಗ್ರಹಿಸಿದರು.

ಹಾಸ್ಟೆಲ್ ಅಡುಗೆಯವರನ್ನು ರೂಂ ನಲ್ಲಿ ಕೂಡಿಹಾಕಿ ಹೇಳಿಕೆ ನೀಡದಂತೆ ತಡೆಯುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ಹೇಳಿದರು.

ಪ್ರತಿಭಟನೆಗೆ ಕರುನಾಡ ವಿಜಯಸೇನೆ ಸಂಘಟನೆ ಸಾಥ್ ನೀಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...