ತುಮಕೂರು | ರಾಜಣ್ಣನ ಬೆನ್ನಿಗೆ ನಿಂತ ಹಿಂದುಳಿದ, ದಲಿತ ಸಮುದಾಯದ ಮಠಾಧೀಶರು

Date:

ಹಿಂದುಳಿದ, ದಲಿತ ಸಮುದಾಯದ ಮಠಾಧೀಶರು ಮಾಜಿ ಸಚಿವ ಕೆ. ಎನ್. ರಾಜಣ್ಣ ಅವರ ಬೆನ್ನಿಗೆ ನಿಂತಿದ್ದಾರೆ. ಒಕ್ಕೂಟದಿಂದ ಮುಂದಿನ ದಿನಗಳಲ್ಲಿ ನವದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್‌ ನಾಯಕರನ್ನು ಭೇಟಿಯಾಗುವ ಬಗ್ಗೆಯೂ ಚರ್ಚಿಸಿದ್ದಾರೆ. 

 ತುಮಕೂರು ನಗರದ ರಾಜಣ್ಣ ಅವರ  ಕ್ಯಾತ್ಸಂದ್ರ ನಿವಾಸಕ್ಕೆ ಭಾನುವಾರ  ಒಕ್ಕೂಟದ ನಿಯೋಗ  ಭೇಟಿ ನೀಡಿತು. 15ಕ್ಕೂ ಹೆಚ್ಚು ಮಠಾಧೀಶರು ಸುಮಾರು 2 ಗಂಟೆಗಳ ಕಾಲ ಚರ್ಚಿಸಿದರು. ಒಕ್ಕೂಟದಿಂದ ಮುಂದಿನ ದಿನಗಳಲ್ಲಿ ನವದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲಾಗುವುದು. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಲಾಗುವುದು. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಬೇಡಿಕೆ ಸಲ್ಲಿಸಲಾಗುವುದು’ ಎಂದು ಮಠಾಧೀಶರು ಸಭೆ ನಂತರ ಸುದ್ದಿಗಾರರಿಗೆ ತಿಳಿಸಿದರು.

‘ರಾಜಣ್ಣ ಅವರಿಗೆ ಒಂದು ಅವಕಾಶ ನೀಡಬಹುದಿತ್ತು. ಏಕಾಏಕಿ ಕೈಬಿಟ್ಟಿದ್ದು, ಜನರಿಗೆ ನೋವಾಗಿದೆ. ಇದನ್ನು ಸರಿ ಮಾಡಬೇಕು. ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಡಲಾಗುವುದು’ ಎಂದು ಹೊಸದುರ್ಗದ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜನಹಳ್ಳಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿ, ‘ರಾಜಣ್ಣ ಶೋಷಿತ ಸಮುದಾಯಗಳ ಗಟ್ಟಿ ಧ್ವನಿ. ಜಾತ್ಯತೀತ ನಾಯಕರಾಗಿ ಒಂದು ವ್ಯಕ್ತಿತ್ವ ಬೆಳೆಸಿಕೊಂಡಿದ್ದಾರೆ. ತಪ್ಪು ಗ್ರಹಿಕೆಯಿಂದ ಅವರನ್ನು ಸಂಪುಟದಿಂದ ಕೈ ಬಿಟ್ಟಿರುವುದು ಖಂಡನೀಯ’ ಎಂದರು.

ಮಠಾಧೀಶರು ಸತ್ಯದ ಪರ ಹೋರಾಡುವುದಕ್ಕೆ ಹೆಚ್ಚಿನ ಶಕ್ತಿ ಕೊಟ್ಟಿದ್ದಾರೆ. ರಾಜಕೀಯದ ಏರುಪೇರು ಸ್ಥಿತ್ಯಂತರದ ಬಗ್ಗೆ ಅವರ ಜತೆ ಚರ್ಚಿಸಿದ್ದೇನೆ ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ ತಿಳಿಸಿದ್ದಾರೆ 

ಚಿತ್ರದುರ್ಗದ ಅಖಿಲ ಕುಂಚಿಟಿಗ ಮಹಾಸಂಸ್ಥಾನ ಮಠದ ಶಾಂತವೀರ ಸ್ವಾಮೀಜಿ, ಚೆನ್ನಯ್ಯ ಗುರುಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ, ಮಾಚಿದೇವ ಮಹಾಸಂಸ್ಥಾನ ಮಠದ ಬಸವ ಮಾಚಿದೇವ ಸ್ವಾಮೀಜಿ, ವೇದಾರ ಕೇತೇಶ್ವರಮಠದ ಇಮ್ಮಡಿ ಕೇತೇಶ್ವರ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕೃಷ್ಣ ಯಾದವಾನಂದ ಸ್ವಾಮೀಜಿ, ನಿಟ್ಟೂರಿನ ನಾರಾಯಣ ಗುರು ಮಠದ ರೇಣುಕಾನಂದ ಸ್ವಾಮೀಜಿ, ತಂಗನಹಳ್ಳಿ ಕಾಶಿ ಅನ್ನಪೂರ್ಣೇಶ್ವರಿ ಮಠದ ಬಸವ ಮಹಾಲಿಂಗ ಸ್ವಾಮೀಜಿ, ಬೆಳ್ಳಾವಿ ಕಾರದ ಮಠದ ಕಾರದ ವೀರ ಬಸವ ಸ್ವಾಮೀಜಿ, ಕೆಂಕೆರೆಯ ಚನ್ನಬಸವ ಸ್ವಾಮೀಜಿ, ಶಾಸಕ ಎಚ್.ವಿ.ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ಆ‌ರ್.ರಾಜೇಂದ್ರ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...