ತುಮಕೂರು | ನಿರಾಶ್ರಿತ ಮಹಿಳೆ ರಾಬಿಯಾಗೆ ಒಂದೇ ದಿನದಲ್ಲಿ ನಿವೇಶನ ನೀಡಲು ಜಿಲ್ಲಾಡಳಿತದಿಂದ ಠರಾವು

Date:

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 2ರಂದು ಜರುಗಿದ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಕಲ್ಪಿಸಬೇಕೆಂದು ಶಿರಾ ನಗರದ ರಾಬಿಯಾ ಕೋಂ ಅಸ್ಲಾಂ ಪಾಷ ಎಂಬ ಮಹಿಳೆಯ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ ಒಂದೇ ದಿನದಲ್ಲಿ 20-30 ಅಳತೆಯ ನಿವೇಶನವನ್ನು ಹಂಚಿಕೆ ಮಾಡಿ ಠರಾವು ಅಂಗೀಕರಿಸಲಾಗಿದೆ.

ಮಹಿಳೆಯ ಬಡತನವನ್ನು ಮನಗಂಡು ಆಶ್ರಯ ಯೋಜನೆಯಡಿ ರಾಬಿಯಾ ಅವರಿಗೆ ನಿವೇಶನ ನೀಡಲು 2024ರ ಸೆಪ್ಟೆಂಬರ್ 25ರಂದು ನಡೆದ ಶಿರಾ ಆಶ್ರಯ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಅವರು ನಗರದಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ರಾಬಿಯಾಗೆ ನಿರ್ಣಯ ಕೈಗೊಂಡ ಆಶ್ರಯ ಸಮಿತಿ ಸಭೆಯ ನಡಾವಳಿ ಪತ್ರವನ್ನು ನೀಡಿದರು. 

  ಶಿರಾ ನಗರದಲ್ಲಿ ಆಶ್ರಯ ಯೋಜನೆಯಡಿ ರಚಿಸಲಾಗಿರುವ ನಿವೇಶನಗಳ ಪೈಕಿ ಸರ್ವೇ ನಂಬರ್ 100ರಲ್ಲಿ 20*30 ಅಳತೆಯ ಒಂದು ನಿವೇಶನವನ್ನು ರಾಬಿಯಾ ಅವರ ಕುಟುಂಬಕ್ಕೆ ಹಂಚಿಕೆ ಮಾಡಲು ತಿರ್ಮಾನಿಸಲಾಗಿದೆ. ಅರ್ಜಿದಾರರ ಸೂಕ್ತ ದಾಖಲೆಗಳನ್ನು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಸಲ್ಲಿಸಿ ನಿಯಮಾನುಸಾರ ಹಕ್ಕು ಪತ್ರ ಸೃಜಿಸಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಸೇರಿದಂತೆ ಮತ್ತಿತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...