ತುಮಕೂರು | ಸ್ಪರ್ಧೆ ಬಯಸಿರಲಿಲ್ಲ, ಪಕ್ಷ ಅವಕಾಶ ಕೊಟ್ಟಿದೆ: ವಿ ಸೋಮಣ್ಣ

Date:

ತುಮಕೂರು ಲೋಕಸಭಾ ಕ್ಷೇತ್ರವನ್ನು ನಾನು ಬಯಸಿರಲಿಲ್ಲ. ವಿಧಿ ಲಿಖಿತ ಹಾಗಾಗಿ ಹೈಕಮಾಂಡ್ ನನಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಬಿಜೆಪಿ ಪಕ್ಷದ ತುಮಕೂರು ಲೋಕಸಭಾ ಕ್ಷೇತ್ರ‍ದ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದರು.

ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೊಡ್ಡ ಪಕ್ಷದಲ್ಲಿ ಭಿನ್ನಮತ ಸಹಜ. ಅದನ್ನು ಪಕ್ಷದ ಹೈಕಮಾಂಡ್ ನೋಡಿಕೊಳ್ಳುತ್ತದೆ. ನಮ್ಮದೇನಿದ್ದರೂ ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಬೇಕು. ಆ ನಿಟ್ಟಿನಲ್ಲಿ ತುಮಕೂರಿನ ಕೊಡುಗೆ ಇರಬೇಕು ಎಂಬುದಾಗಿದೆ. ಇದನ್ನು ಬಿಟ್ಟು ಬೇರೇನಿಲ್ಲ ಎಂದರು.

ತುಮಕೂರು ಜಿಲ್ಲೆ ಅತಿವೇಗವಾಗಿ ಬೆಳೆಯತ್ತಿರುವ ಜಿಲ್ಲೆ. ಇಲ್ಲಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳು ದೊರೆಯಬೇಕು ಎಂಬುದು ನಮ್ಮ ದೂರದೃಷ್ಟಿ. ಬೆಂಗಳೂರಿನಿಂದ ತುಮಕೂರಿನವರೆಗೆ ಪ್ಲೇಓವರ್ ಹಾಗೆಯೇ ಮೆಟ್ರೋ ರೈಲು ಬರಬೇಕೆಂಬ ಕನಸಿನ ಜೊತೆಗೆ, ತುಮಕೂರನ್ನು ಮತ್ತೊಂದು ವಾರಣಾಸಿ ಮಾಡಬೇಕೆಂಬ ಕನಸಿದೆ. ಅವಕಾಶ ಸಿಕ್ಕರೆ ಈ ಕನಸನ್ನು ನನಸು ಮಾಡಲು ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರಿಗೂ ನನಗೂ ಸುಮಾರು 50 ವರ್ಷಗಳ ಅವಿನಾಭಾವ ಸಂಬಂಧ ಇದೆ. ಈ ಭಾಗದ ಜನ ಎಲ್ಲವನ್ನು ತೀರ್ಮಾನ ಮಾಡುತ್ತಾರೆ. ಸಿದ್ದಗಂಗಾ ಶ್ರೀಗಳು ಮತ್ತು ಬಾಲ ಗಂಗಾಧರನಾಥ ಶ್ರೀಗಳ ಆಶೀರ್ವಾದ ನನ್ನ ಮೇಲಿದೆ. ಮತದಾರರು ನನ್ನ ಪರವಾಗಿ ನಿಲ್ಲಲಿದ್ದಾರೆ ಎಂಬ ವಿಶ್ವಾಸವಿದೆ. ಇಂದು ಮಾಜಿ ಸಚಿವರಾದ ಬಿ.ಸಿ.ನಾಗೇಶ್ ಮನೆಗೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸಿ, ತಿಪಟೂರಿನ ಕರೆಗೋಡಿ ರಂಗಾಪುರ ಮಠಕ್ಕೂ ಭೇಟಿ ನೀಡಿ ಮಾತುಕತೆ ನಡೆಸಲಿದ್ದೇನೆ ಎಂದು ವಿ.ಸೋಮಣ್ಣ ಮಾಹಿತಿ ನೀಡಿದರು.

ಮಾಜಿ ಸಚಿವ ಮಾಧುಸ್ವಾಮಿ ಅವರನ್ನು ಭೇಟಿ ಮಾಡಲು ನಿನ್ನೆ ದೂರವಾಣಿ ಕರೆ ಮಾಡಿದ್ದೆ. ಆದರೆ, ಅವರು ಈಗ ಬರುವುದು ಬೇಡ ಎಂದು ಸ್ವಲ್ಪ ಬೇಸರದಿಂದಲೇ ಮಾತನಾಡಿದರು. ಇನ್ನು 3-4 ದಿನ ಕಳೆದ ಬಳಿಕ ಅವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಎಲ್ಲವೂ ಸರಿ ಹೋಗಲಿದೆ. ಪಕ್ಷದ ನಾಯಕರು ಎಲ್ಲವನ್ನೂ ಸರಿ ಮಾಡಲಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರು, ಮುಖಂಡರುಗಳು ಎಲ್ಲರೂ ಒಟ್ಟಾಗಿ ಸೇರಿ ಚುನಾವಣೆ ಎದುರಿಸುತ್ತೇವೆ. ಮತ್ತೇ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುವ ಸಂಕಲ್ಪ ನಮ್ಮೆಲ್ಲರದ್ದಾಗಿದೆ ಎಂದರು.

ಶಾಸಕ ಬಿ.ಸುರೇಶಗೌಡ ಮಾತನಾಡಿ, ಲೋಕಸಭೆಯಲ್ಲಿ ಎರಡು ಸೀಟು ಇದ್ದಾಗಲೂ ತುಮಕೂರಿನಿಂದ ಬಿಜೆಪಿ ಪಕ್ಷದ ಅಭ್ಯರ್ಥಿ ಗೆದ್ದಿದ್ದಾರೆ. ಮಲ್ಲಿಕಾರ್ಜುನಯ್ಯ, ಜಿ.ಎಸ್. ಬಸವರಾಜು ಅವರುಗಳು ನಿರಂತರವಾಗಿ ಪಕ್ಷದಿಂದ ಗೆದ್ದಿದ್ದಾರೆ. ಹಾಗಾಗಿ ಈ ಬಾರಿಯೂ ಗೆಲುವು ನಮ್ಮದೆ ಜೆ.ಸಿ. ಮಾಧುಸ್ವಾಮಿ ಅವರಿಗೆ ಪಕ್ಷ ಎಲ್ಲವನ್ನು ನೀಡಿದೆ. ಶಾಸಕರನ್ನಾಗಿಮಾಡಿ, ಸಚಿವರನ್ನಾಗಿಯೂ ಮಾಡಿದೆ. ಅವರು ಪಕ್ಷಕ್ಕೆ ಕೃತಜ್ಞರಾಗಿರಬೇಕು ಎಂದರು.

ಇದೇ ಸಂದರ್ಭದಲ್ಲಿ  ಜ್ಯೋತಿಗಣೇಶ್, ರವಿಶಂಕರ್ ಹೆಬ್ಬಾಕ, ಎಂ.ಡಿ. ಲಕ್ಷ್ಮೀನಾರಯಣ್, ಶಿವಪ್ರಸಾದ್, ಮಧುಗಿರಿ ಮಾಜಿ ಶಾಸಕ ವೀರಭದ್ರಯ್ಯ, ಗುಬ್ಬಿ ಹೊನ್ನಗಿರಿಗೌಡ, ರೈತಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಬಾವಿಕಟ್ಟೆ ನಾಗಣ್ಣ, ರಾಜಪ್ಪ, ಡಾ. ಪರಮೇಶ್, ರುದ್ರೇಶ್ ಮತ್ತಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...