ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

Date:

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳಲ್ಲಿನ ಇವಿಎಂ ಯಂತ್ರಗಳನ್ನು ತುಮಕೂರು ವಿವಿ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸ್ಟ್ರಾಂಗ್ ರೂಂಗಳಲ್ಲಿ ಇಡಲಾಗಿದೆ.

ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಸ್ಟ್ರಾಂಗ್ ರೂಂನಲ್ಲಿ ತಿಪಟೂರು, ಚಿಕ್ಕನಾಯಕನಹಳ್ಳಿ, ಮಧುಗಿರಿ ಹಾಗೂ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಇವಿಎಂ ಯಂತ್ರಗಳು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸ್ಟ್ರಾಂಗ್ ರೂಂನಲ್ಲಿ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ ಹಾಗೂ ಗುಬ್ಬಿ ವಿಧಾನಸಭಾ ಕ್ಷೇತ್ರಗಳ ಇವಿಎಂ ಯಂತ್ರಗಳನ್ನು ಇರಿಸಲಾಗಿದ್ದು, ಈ ಎರಡೂ ಸ್ಟ್ರಾಂಗ್ ರೂಂಗಳಿಗೆ ಸಿಆರ್‌ಪಿಎಫ್ ಯೋಧರ ಭದ್ರತೆ ಒದಗಿಸಲಾಗಿದೆ.

ಜೂ. 4ರವರೆಗೆ ಈ ಎರಡು ಡಿಸಿ ಪರಿಶೀಲನೆ ರೂಂಗಳು ಸಿಆರ್‌ಪಿಎಫ್ ಯೋಧರು ಹಾಗೂ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಇರಲಿದ್ದು, ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಸಿ ಪರಿಶೀಲನೆ

ತುಮಕೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳ ಇವಿಎಂ ಯಂತ್ರಗಳನ್ನು ಇಡಲಾಗಿರುವ ಭದ್ರತಾ ಕೊಠಡಿಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಎಲ್ಲ ಇವಿಎಂ ಯಂತ್ರಗಳನ್ನು ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಡಿಸಿ ಪರಿಶೀಲನೆ ರೂಂನಲ್ಲಿ ಇಡಲಾಗಿದ್ದು, ಈ ಎರಡು ಸ್ಟ್ರಾಂಗ್ ರೂಂಗಳ ಜವಾಬ್ದಾರಿಯನ್ನು ಸಿಆರ್‌ಪಿಎಫ್‌ನವರಿಗೆ ಹಸ್ತಾಂತರಿಸಲಾಗಿದೆ. ಜೂ. ೪ ರ ವರೆಗೆ ಸಿಆರ್‌ಪಿಎಫ್ ನಿಯಂತ್ರಣದಲ್ಲಿ ಈ ಸ್ಟ್ರಾಂಗ್ ರೂಂ ಇರುತ್ತವೆ ಎಂದು ಹೇಳಿದರು.

ಅಧಿಕಾರಿಗಳಿಗೆ ಧನ್ಯವಾದ

ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಯಶಸ್ವಿಯಾಗಿ, ಶಾಂತಿಯುತವಾಗಿ, ವ್ಯವಸ್ಥಿತವಾಗಿ ನಡೆಯಲು ಕಾರಣಕರ್ತರಾದ ಪೊಲೀಸ್ ಅಧಿಕಾರಿಗಳು, ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ 22 ಲಕ್ಷ ಮತದಾರರು, ಸಾರ್ವಜನಿಕರು, ಮಾಧ್ಯಮದವರಿಗೆ ಜಿಲ್ಲಾಡಳಿತ ಪರವಾಗಿ ಧನ್ಯವಾದ ಹೇಳುವುದಾಗಿ ತಿಳಿಸಿದರು.

ಹಾಗೆಯೇ ಎಲ್ಲ ರಾಜಕೀಯ ಪಕ್ಷಗಳವರು ಸಹ ಚುನಾವಣೆಯ ಯಶಸ್ವಿಗೆ ಸಹಕಾರ ನೀಡಿದ್ದಾರೆ. ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಸ್ವೀಪ್ ಸಮಿತಿ ಚಟುವಟಿಕೆ, ಪಾಲಿಕೆ ಅಧಿಕಾರಿಗಳು ನಡೆಸಿದ ಜಾಗೃತಿ ಜಾಥಾಗಳು ಸಹ ಪ್ರಮುಖ ಕಾರಣವಾಗಿದ್ದು, ಅವರಿಗೂ ಸಹ ಧನ್ಯವಾದ ಹೇಳುತ್ತೇನೆ ಎಂದರು.

ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಎಫ್‌ಎಸ್‌ಟಿ ತಂಡ ಕಾರ್ಯನಿರ್ವಹಿಸುತ್ತಿರುತ್ತದೆ. ರಾಜ್ಯದ ಉಳಿದ 14 ಕ್ಷೇತ್ರಗಳಿಗೆ ಮೇ 7 ರಂದು ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಚೆಕ್ ಪೋಸ್ಟ್ ಕಾರ್ಯನಿರ್ವಹಿಸುತ್ತವೆ ಎಂದು ಅವರು ಮಾಹಿತಿ ನೀಡಿದರು.

ಶೇ. 77.99ರಷ್ಟು ಮತದಾನ

ತುಮಕೂರು ಲೋಕಸಭಾ ಚುನಾವಣೆಯಲ್ಲಿ 12,95,732 ಮತದಾರರು ಮತ ಚಲಾಯಿಸುವ ಮೂಲಕ ಶೇ. 77.99 ರಷ್ಟು ಮತದಾನವಾಗಿದೆ ಎಂದು ಅವರು ಹೇಳಿದರು.

2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಶೇ. 0.7 ರಷ್ಟು ಮತದಾನ ಪ್ರಮಾಣ ಹೆಚ್ಚಳವಾಗಿದೆ ಎಂದರು.

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾನ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಆಗಿದೆ. 2ನೇ ಅತಿ ಹೆಚ್ಚು ಮತದಾನ ತುಮಕೂರು ಗ್ರಾಮಾಂತರದಲ್ಲಿ ಆಗಿದೆ. ತುಮಕೂರು ನಗರದಲ್ಲಿ 2019ಕ್ಕೆ ಹೋಲಿಸಿದಾಗ ಈ ಬಾರಿ ಶೇ. 2ರಷ್ಟು ಮತದಾನ ಪ್ರಮಾಣ ಹೆಚ್ಚಳವಾಗಿದ್ದು, ಈ ಬಾರಿ ಶೇ. 67.38ರಷ್ಟು ಮತದಾನವಾಗಿದೆ ಎಂದರು.

8ಮತಗಟ್ಟೆಯಲ್ಲಿ ಮತಯಂತ್ರಗಳ ಲೋಪದೋಷ ಕಂಡು ಬಂದಿತ್ತು. ತಕ್ಷಣ ಅದನ್ನು ಬದಲಾಯಿಸಿ ಮತದಾನ ಮುಂದುವರೆಸಲಾಯಿತು ಎಂದು ಅವರು ಹೇಳಿದರು.

ಎಸ್‌ಪಿ ಪರಿಶೀಲನೆ

ಸ್ಟ್ರಾಂಗ್ ರೂಂಗಳ ಪರಿಶೀಲನೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಮಾತನಾಡಿ, ತುಮಕೂರು ಲೋಕಸಭೆ ಸಾರ್ವತ್ರಿಕ ಚುನಾವಣೆ ಏ. 26 ರಂದು ಯಶಸ್ವಿಯಾಗಿ ಮುಗಿದಿದ್ದು, ತುಮಕೂರು ವಿವಿ ವಿಜ್ಞಾನ ಕಾಲೇಜಿನಲ್ಲಿ 4 ಕ್ಷೇತ್ರಗಳು ಹಾಗೂ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ 4 ಕ್ಷೇತ್ರಗಳ ಇವಿಎಂ ಯಂತ್ರಗಳನ್ನು ಇಡಲಾಗಿದ್ದು, ಈ ಸ್ಟ್ರಾಂಗ್ ರೂಂಗಳಿಗೆ ಸಿವಿಲ್ ಪೊಲೀಸರು ಹಾಗೂ ಸಿಆರ್‌ಪಿಎಫ್ ಯೋಧರ ಭದ್ರತೆ ಒದಗಿಸಲಾಗಿದೆ ಎಂದರು.

ಸಿವಿಲ್ ಪೊಲೀಸರು ಮತ್ತು ಸಿಆರ್‌ಪಿಎಫ್ ಪೊಲೀಸರು ಜೂ. 4ರವರೆಗೆ ಪಾಳಿ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...