ತುಮಕೂರು | ಪರಿಸರ ಕಾಪಾಡಬೇಕಾದ ಅಧಿಕಾರಿಗಳೇ ಪರಿಸರ ನಾಶಕ್ಕೆ ಕಾರಣವಾಗುತ್ತಿದ್ದಾರೆ : ನ್ಯಾಯಮೂರ್ತಿ ಬಿ. ವೀರಪ್ಪ

Date:

ಪರಿಸರ ಉಳಿಸಬೇಕಾದ ಅಧಿಕಾರಿಗಳೇ ಪರಿಸರ ನಾಶಕ್ಕೆ ಕಾರಣವಾಗುತ್ತಿರುವುದು ಬೇಸರ ತರುತ್ತಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

 ತುಮಕೂರು ನಗರದ ಹೊರವಲಯ ಅಮಲಾಪುರದಲ್ಲಿರುವ ಭೈರವ ಕ್ರಷರ್‌ಗೆ ಅನಿರೀಕ್ಷಿತ ಭೇಟಿ ನೀಡಿ, ಸ್ಥಳದಲ್ಲೇ ನಡೆಯುತ್ತಿರುವ ಗಣಿಗಾರಿಕೆಯಿಂದ ಪರಿಸರಕ್ಕೆ ಹಾನಿಯುಂಟಾಗುತ್ತಿರುವುದನ್ನು ಗಂಭೀರವಾಗಿ ಗಮನಿಸಿ ಮಾತನಾಡಿದ ಅವರು, ಕ್ರಷರ್ ಮಾಲೀಕರು ಬೆಟ್ಟ-ಗುಡ್ಡಗಳನ್ನು ಕೊರೆದು ಪರಿಸರವನ್ನು ಹಾಳುಮಾಡುತ್ತಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಬೆಟ್ಟಗಳನ್ನು ನಾಶಮಾಡಲು ನಿಮಗೆ ಯಾರು ಅನುಮತಿ ಕೊಟ್ಟಿದ್ದಾರೆ? ಬಫರ್ ವಲಯ ನಿಯಮವನ್ನೂ ಕೂಡ ಪಾಲಿಸದೇ ಗಣಿಗಾರಿಕೆ ನಡೆಸಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲು ಕಾರಣರಾಗುತ್ತಿದ್ದೀರಾ? ಎಂದು ಮಾಲೀಕರನ್ನು ತರಾಟೆಗೆ ತೆಗೆದುಕೊಂಡರು. 

ಅರಣ್ಯ, ಕಂದಾಯ, ಗಣಿಗಾರಿಕೆ ಸೇರಿದಂತೆ ಸಂಬಂಧಿಸಿದ ಇಲಾಖಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಪರಿಸರವನ್ನು ಸಂರಕ್ಷಿಸಬೇಕಾದವರೇ ಕ್ರಷರ್‌ಗಳಿಗೆ ಅನುಮತಿ ನೀಡಿ ಪರಿಸರ ನಾಶಕ್ಕೆ ಮುಂದಾಗುತ್ತಿದ್ದಾರೆ. ಅಧಿಕಾರಿಗಳು ಇನ್ನು ಮುಂದಾದರೂ ಪರಿಸರ ಕಾಳಜಿವಹಿಸಿ ಸ್ಥಳೀಯ ಜನರ ಬದುಕಿಗೆ ಅವಕಾಶ ಮಾಡಿಕೊಡಬೇಕೆಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ರಷರ್‌ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಕಾರ್ಮಿಕರಿಗೂ ಕ್ರಷರ್ ಮಾಲೀಕರು ಕಡ್ಡಾಯವಾಗಿ ವಿಮಾ ಸೌಲಭ್ಯ ಕಲ್ಪಿಸಬೇಕು ಎಂದು ನಿರ್ದೇಶಿಸಿದರು.

ಇದೇ ವೇಳೆ ಅರಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮಲಾಪುರದ ಹಕ್ಕಿ–ಪಿಕ್ಕಿ ಜನಾಂಗದ ನಿವಾಸಿಗಳನ್ನು ಭೇಟಿ ಮಾಡಿ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ 44 ಕುಟುಂಬಗಳಿಗೆ ಮನೆ, ಶಾಲೆ, ಪಡಿತರ ಚೀಟಿ, ವಿಧವಾ ವೇತನ, ವೃದ್ಧಾಪ್ಯ ವೇತನಗಳನ್ನು ಕಲ್ಪಿಸುವಂತೆ ತಹಸೀಲ್ದಾರ್ ರಾಜೇಶ್ವರಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಲಕ್ಷ್ಮೀನಾರಾಯಣ, ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...