ತುಮಕೂರು | ಭಯೋತ್ಪಾದನೆ ಹಿಂದೆ ಕಾಶ್ಮೀರ ಪ್ರತ್ಯೇಕಿಸುವ ಷಡ್ಯಂತ್ರವಿದೆ : ಸಿ.ಯತಿರಾಜು

Date:

 ಭಯೋತ್ಪಾದನೆ ಮನುಷ್ಯ ವಿರೋಧಿ ನಡೆ. ಕಾಶ್ಮೀರ ಭಯೋತ್ಪಾದನೆ ಕೃತ್ಯವನ್ನು ನಾಗರಿಕ ಸಮಾಜ ಖಂಡಿಸಬೇಕು. ಭಾರತದಿಂದ ಕಾಶ್ಮೀರವನ್ನು ಪ್ರತ್ಯೇಕಗೊಳಿಸುವುದು ಈ ಷಡ್ಯಂತ್ರದ ಭಾಗವಾಗಿದೆ ಎಂದು ಹಿರಿಯ ಹೋರಾಟಗಾರ ಸಿ.ಯತಿರಾಜು ಆರೋಪಿಸಿದರು.

       ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಗುರುವಾರ ಸಂಜೆ ಸಿಪಿಐ(ಎಂ) ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟವು ಜಂಟಿಯಾಗಿ  ಭಯೋತ್ಪಾದಕತೆ ವಿರೋಧಿಸಿ ನಡೆದ  ಕ್ಯಾಂಡಲ್ ಲೈಟ್ ಪ್ರತಿಭಟನೆಯಲ್ಲಿ  ಮಾತನಾಡಿದ ಅವರು, ಭಯೋತ್ಪಾದಕತೆಯನ್ನು ಸ್ಥಳೀಯರು ಪ್ರಬಲ ಪ್ರತಿರೋಧ ಒಡ್ಡಿರುವುದು ಗುರುತಿಸಬೇಕೆಂದರು. ಇಂತಹ ಘಟನೆಗಳು ಮರುಕಳಿಸಿದಂತೆ ಕ್ರಮ ವಹಿಸಲು ಆಗ್ರಹಿಸಿದರು.

 ಎಐಕೆಎಸ್ ನ ಕಂಬೇಗೌಡ  ಮಾತನಾಡಿ ಭಯೋತ್ಪಾದಕತೆಯನ್ನು ಮೂಲದಿಂದಲೇ ಇಲ್ಲದಂತೆ ಮಾಡಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಸಯ್ಯದ್ ಮುಜೀಬ್ ಮಾತನಾಡಿ ಮೃತ ಸದಸ್ಯರ ಕುಟುಂಬಗಳಿಗೆ ಸ್ವಾಂತನ ಹೇಳಿ, ಭಯೋತ್ಪಾದಕರಿಗೆ ಧರ್ಮವಿಲ್ಲ. ಕಾಶ್ಮೀರದಲ್ಲಿ ಹಿಂದೂ, ಮುಸ್ಲಿಂ ಇಬ್ಬರನ್ನು ಕೊಲ್ಲಲಾಗಿದೆ. ಈ ಘಟನೆ ಹಿಂದೆ ಭದ್ರತಾ ವೈಫಲ್ಯದ ಬಗ್ಗೆ ಸಹ ತನಿಕೆಗೆ ಆಗ್ರಹಿಸಿದರು.

ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಮಾತನಾಡಿ ರಕ್ಷಣೆ ನೀಡಬೇಕಾದ ಕೇಂದ್ರ ಸರ್ಕಾರ ವಿಫಲತೆಯಿದೆ. ಭಯೋತ್ಪಾದಕತೆ ಬಗ್ಗು ಬಡೆಯಲು ಎಲ್ಲಾ ಪ್ರಯತ್ನ ನಡೆಸಬೇಕೆಂದರು. 

ಡಿಎಸ್ಎಸ್ ನ ಪಿ.ಎನ್.ರಾಮಯ್ಯ, ಸಮಾಜಸೇವಕ ತಾಜುದ್ದೀನ್, ಅಪ್ಸರ್‌ಖಾನ್, ಸಿಐಟಿಯುನ ಬಿ .ಉಮೇಶ್, ವಕೀಲ ಮುಹ್ಮದ್‌ಆಲಿ,ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಎನ್. ಕೆ. ಸುಬ್ರಹ್ಮಣ್ಯ, ಟಿ.ಆರ್.ಕಲ್ಪನಾ, ಮಾತನಾಡಿದರು.

 ಪ್ರತಿಭಟನೆಯಲ್ಲಿ ಪ್ರಾಂತ ರೈತ ಸಂಘದ ಸಿ.ಅಜ್ಜಪ್ಪ, ಕಟ್ಟಡ ಕಾರ್ಮಿಕ ಸಂಘಟನೆಯ ಕಲೀಲ್, ಸಿಐಟಿಯು ತಾಲೂಕು ಮುಖಂಡ ರಂಗಧಾಮಯ್ಯ, ಪಿಂಚಣಿದಾರ ಸಂಘದ ಶಿವಲಿಂಗಯ್ಯ ವಕೀಲ ಸತ್ಯನಾರಾಯಣ್ ಆಟೋ ಚಾಲಕರ ಸಂಘದ ಇಂತಿಯಾಜ್,ಡಿವೈಎಫ್‌ಐ ಮಂಜುನಾಥ್ ,ರಾಘವೇಂದ್ರ, ಪಂಡಿತ್ ಜವಹಾರ್,ಎ.ಲೋಕೇಶ್ ಇತರರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...