ತುಮಕೂರು | ತುಕಾಲಿ ಸಂತೋಷ್‌ ಕಾರು ಅಪಘಾತ; ಆಟೋ ಚಾಲಕ ಸಾವು

Date:

ಬಿಗ್‌ಬಾಸ್‌ ಸೀಸನ್ 10ರ ಸ್ಪರ್ಧಿ, ಹಾಸ್ಯ ನಟ ತುಕಾಲಿ ಸಂತೋಷ್ ಅವರ ಕಾರು ಕುಣಿಗಲ್ ಬಳಿ ಅಪಘಾತಕ್ಕೀಡಾಗಿದೆ. ಸಂತೋಷ್ ಅವರ ಕಾರು ಮತ್ತು ಆಟೋ ನಡುವೆ ಅಪಘಾತವಾಗಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಜಗದೀಶ್ (44) ಮೃತ ದುರ್ದೈವಿ. ಈತ ಕುಣಿಗಲ್ ತಾಲೂಕಿನ ಕೋಡಿಹಳ್ಳಿ ಪಾಳ್ಯದ ನಿವಾಸಿ. ಆಟೋ ಚಾಲಕನಾಗಿ ಜೀವನ ನಡೆಸುತ್ತಿದ್ದರು.

ಅಪಘಾತದಲ್ಲಿ ಗಾಯಗೊಂಡಿದ್ದ ಜಗದೀಶ್ ಅವರನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮಾರ್ಚ್ 14ರ ಬೆಳಗಿನ ಜಾವ ಅವರು ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುಧವಾರ ರಾತ್ರಿ ಶೂಟಿಂಗ್ ಮುಗಿಸಿಕೊಂಡು ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ತುಕಾಲಿ ಸಂತೋಷ್ ಮತ್ತು ಅವರ ಪತ್ನಿ ಮಾನಸಾ ಪ್ರಯಾಣಿಸುತ್ತಿದ್ದರು. ಈ ವೇಳೆ, ಕುಣಿಗಲ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಈ ಸುದ್ದಿ ಓದಿದ್ದೀರಾ? ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಯಾವುದೇ ಅಡಚಣೆ ಆಗುವುದಿಲ್ಲ : ಸ್ಪಷ್ಟನೆ ನೀಡಿದ ಸಂಸ್ಥೆ

ಅಪಘಾತ ನಡೆದ ವೇಳೆ ಆಟೋ ಚಾಲಕ ಜಗದೀಶ್ ಮದ್ಯಪಾನ ಮಾಡಿದ್ದನು ಎಂದು ಹೇಳಲಾಗಿದೆ. ಆಟೋ ಚಾಲಕ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ತುಕಾಲಿ ಸಂತೋಷ್ ಆರೋಪಿಸುತ್ತಿದ್ದಾರೆ.

ತುಕಾಲಿ ಸಂತೋಷ್

ಘಟನೆ ಸಂಬಂಧ ದೂರು ಪ್ರತಿದೂರು ದಾಖಲಿಸಲು ಎರಡೂ ಕಡೆಯವರು ಕುಣಿಗಲ್ ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈ ಬಗ್ಗೆ ಕುಣಿಗಲ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರಿಂದ ತನಿಖೆ ಮುಂದುವರಿದಿದೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಕುಣಿಗಲ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು, “ಆಟೋ ಚಾಲಕ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆಟೋ ಚಾಲಕ ಮದ್ಯಸೇವನೆ ಮಾಡಿ ವಾಹನ ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನು ಎಫ್‌ಎಸ್‌ಎಲ್‌ ವರದಿ ಬಂದ ಬಳಿಕ ಧೃಢವಾಗಲಿದೆ. ಸದ್ಯ ಆಟೋ ಚಾಲಕನ ಸಂಬಂಧಿಕರು ತುಕಾಲಿ ಸಂತೋಷ್ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ತನಿಖೆ ಮುಂದುವರೆದಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...