ತುಮಕೂರು | ಮೈಸೂರು ದಸರಾ ಮಾದರಿಯಲ್ಲಿ “ತುಮಕೂರು ದಸರಾ”

Date:

ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಾದರಿಯಲ್ಲಿ ಬರುವ ಅಕ್ಟೋಬರ್ ಮಾಹೆಯ 11 ಹಾಗೂ 12ರಂದು 2 ದಿನಗಳ ಕಾಲ ತುಮಕೂರು ದಸರಾ ಕಾರ್ಯಕ್ರಮವನ್ನು ಆಯೋಜಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಕಳೆದ 36 ವರ್ಷಗಳಿಂದ ವಿವಿಧ ಸಂಘಟನೆಗಳನ್ನೊಳಗೊಂಡ ದಸರಾ ಸಮಿತಿಯಿಂದ ನಗರದಲ್ಲಿ ದಸರಾ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಈ ದಸರಾ ಉತ್ಸವವನ್ನು ಮತ್ತಷ್ಟು ಮೆರಗುಗೊಳಿಸಲು ಜಿಲ್ಲಾಡಳಿತದ ವತಿಯಿಂದ ಈ ವರ್ಷ ಮೊದಲ ಬಾರಿಗೆ ತುಮಕೂರು ದಸರಾ ಉತ್ಸವವನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಉತ್ಸವದ ಯಶಸ್ವಿಗೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು.

ತುಮಕೂರು ದಸರಾ ಉತ್ಸವದಲ್ಲಿ ಜಿಲ್ಲೆಯ ಸಾಹಿತ್ಯ, ಸಂಸ್ಕೃತಿ, ಕ್ರೀಡೆಯ ಹಿರಿಮೆಯನ್ನು ಹೆಚ್ಚಿಸುವಂತಹ ಕಾರ್ಯಕ್ರಮಗಳನ್ನು ರೂಪಿಸಬೇಕು. ದಸರಾ ಸಾಂಸ್ಕೃತಿಕ ಹಬ್ಬವನ್ನು ಪಕ್ಷಬೇಧವಿಲ್ಲದೆ ಜಿಲ್ಲೆಯ ಶಾಸಕರು, ಸಂಸದರು, ಸಚಿವರು ಸೇರಿ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರು ಒಗ್ಗೂಡಿ ಆಚರಿಸಬೇಕೆಂದರಲ್ಲದೆ ದಸರಾ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಬಹುದಾದ ಧಾರ್ಮಿಕ ಆಚರಣೆ, ಜಂಬೂಸವಾರಿ, ಸಾಹಿತ್ಯ-ಕಲೆ-ಸಾಂಸ್ಕೃತಿಕ ಕಾರ್ಯಕ್ರಮ, ಆಹಾರ ಮೇಳಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಸರಾ ಪ್ರಯುಕ್ತ ನಗರದ ಪ್ರಮುಖ ಬೀದಿಗಳಲ್ಲಿ ಜನಾಕರ್ಷಿಸುವಂತಹ ಮೆರವಣಿಗೆಯನ್ನು ಏರ್ಪಡಿಸಬೇಕು. ಮೆರವಣಿಗೆಯಲ್ಲಿ ಜಿಲ್ಲೆಯ ಸಂಸ್ಕೃತಿಯನ್ನು ಬಿಂಬಿಸುವಂತಹ ಕಲಾತಂಡಗಳು ಕಲಾ ಪ್ರದರ್ಶನ ನೀಡಬೇಕು. ವಿವಿಧ ದೇವರುಗಳ ಉತ್ಸವ ಮೂರ್ತಿಗಳು ಪಾಲ್ಗೊಂಡು ಅರ್ಥಪೂರ್ಣ ಆಚರಣೆಯಾಗಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ದಸರಾ ಉತ್ಸವದ ಮುಖ್ಯ ವೇದಿಕೆಯನ್ನು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ಮಿಸಲು ಅಗತ್ಯ ಸಿದ್ಧತೆಗಳನ್ನು ಯೋಜಿಸಲಾಗಿದ್ದು, ಸಿದ್ಧಪಡಿಸಿರುವ ದಸರಾ ಉತ್ಸವದ ರೂಪು-ರೇಷೆಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.

ತುಮಕೂರು ದಸರಾ ಯಶಸ್ವಿಗಾಗಿ ಸ್ವಾಗತ, ಆಹ್ವಾನ ಪತ್ರಿಕೆ ಮತ್ತು ವೇದಿಕೆ ಸಮಿತಿ, ಮೆರವಣಿಗೆ ಸಮಿತಿ(ಸ್ತಬ್ದಚಿತ್ರಗಳ ಮೆರವಣಿಗೆ ಒಳಗೊಂಡAತೆ), ಗ್ರಾಮೀಣ ದಸರಾ(ರೈತ ದಸರಾ) ಸಮಿತಿ, ಕ್ರೀಡಾ ದಸರಾ ಸಮಿತಿ, ಸಾಂಸ್ಕೃತಿಕ ದಸರಾ ಸಮಿತಿ, ದೀಪಾಲಂಕಾರ ಸಮಿತಿ, ಕವಿಗೋಷ್ಠಿ ದಸರಾ ಸಮಿತಿ, ಮಹಿಳಾ ಮತ್ತು ಮಕ್ಕಳ ದಸರಾ ಸಮಿತಿ, ಆಹಾರ ಮೇಳ ಸಮಿತಿ, ಸ್ವಚ್ಛತೆ ಮತ್ತು ವ್ಯವಸ್ಥೆ ಸಮಿತಿ ಸೇರಿದಂತೆ ಇತರೆ ಸಮಿತಿಗಳನ್ನು ರಚಿಸಲಾಗಿದ್ದು, ಅಕ್ಟೋಬರ್ 11 ಹಾಗೂ 12ರಂದು ಹಮ್ಮಿಕೊಂಡಿರುವ ಮಿನಿ ಮ್ಯಾರಥಾನ್, ಮಹಿಳಾ ದಸರಾ, ಯುವ ದಸರಾ, ಮಕ್ಕಳ ದಸರಾ, ವಸ್ತುಪ್ರದರ್ಶನ, ಕವಿಗೋಷ್ಠಿ, ತೆಪ್ಪೋತ್ಸವ, ಸ್ತಬ್ಧಚಿತ್ರ ಮೆರವಣಿಗೆ, ಪಂಜಿನ ಕವಾಯಿತು, ಕ್ರೀಡಾ ಸ್ಪರ್ಧೆ, ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ, ರೈತ ದಸರಾ, ದೀಪಾಲಂಕಾರ, ಆಹಾರ ಮೇಳ, ಸ್ವಚ್ಛತೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಲಾಗಿದ್ದು, ಸೆಪ್ಟೆಂಬರ್ 15ರಂದು ದಸರಾ ಉತ್ಸವದ ಲಾಂಛನ(ಲೋಗೋ)ವನ್ನು ಬಿಡುಗಡೆ ಮಾಡಲಾಗುವುದೆಂದು ಮಾಹಿತಿ ನೀಡಿದರು.

ತುಮಕೂರು ದಸರಾ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನೃತ್ಯರೂಪಕ, ಚಿತ್ರನಟ-ನಟಿ, ಪ್ರಸಿದ್ಧ ಗಾಯಕ, ಜಿಲ್ಲೆಯ ಹಿನ್ನೆಲೆಯುಳ್ಳ ಕಲಾವಿದರನ್ನು ಕರೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್ ಹಾಗೂ ಸುರೇಶ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜಿ. ಹಿಮಂತರಾಜು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಆಸ್ತಿದಾರರು ತಮ್ಮ ಸ್ಥಿರಾಸ್ತಿಗಳನ್ನು ಜಿಲ್ಲಾ ವ್ಯಾಪ್ತಿಯ ಯಾವುದೇ ಉಪನೋಂದಣಾ ಕಚೇರಿಗಳಲ್ಲಿ ನೋಂದಾಯಿಸಿಕೊಳ್ಳುವ ಬಗ್ಗೆ ಸ್ಥಾಪಿಸಿರುವ ಎನಿವೇರ್ ನೋಂದಣಿ ಸಹಾಯವಾಣಿ ಸಂಖ್ಯೆಯ 080-68265316ನ್ನೊಳಗೊಂಡ ಪೋಸ್ಟರ್ ಹಾಗೂ ರೇಷ್ಮೆ ಬೆಳೆಯನ್ನು ಬಾಧಿಸುವ ಕೀಟ ನಿರ್ವಹಣಾ ವಿಧಾನದ ಬಗ್ಗೆ ರೇಷ್ಮೆ ಇಲಾಖೆಯಿಂದ ಹೊರತಂದಿರುವ ಕರಪತ್ರವನ್ನು ಬಿಡುಗಡೆ ಮಾಡಲಾಯಿತು.

ಸಭೆಯ ನಂತರ ಸಚಿವರು ಮಾಧ್ಯಮಗೋಷ್ಠಿ ನಡೆಸಿ ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...