ತುಮಕೂರು | ತುಮುಲ್‌ ಚುನಾವಣಾ ಫಲಿತಾಂಶ ಪ್ರಕಟ; ಕಾಂಗ್ರೆಸ್‌ ಜಯಭೇರಿ

Date:

ಭಾರೀ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ತುಮುಲ್) ನಿರ್ದೇಶಕರ ಸ್ಥಾನಗಳಿಗೆ ನಡೆಸಿದ್ದ ಚುನಾವಣಾ ಫಲಿತಾಂಶ ಜನವರಿ 9ರಂದು ಹೊರಬಿದ್ದಿದ್ದು, ಕಾಂಗ್ರೆಸ್‌ ಜಯಭೇರಿ ಬಾರಿಸಿದೆ.

ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ ಒಟ್ಟು 10 ಮಂದಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ತುಮಕೂರು ಗ್ರಾಮಾಂತರ, ತಿಪಟೂರು, ಮಧುಗಿರಿ, ಪಾವಗಡ ಹಾಗೂ ಗುಬ್ಬಿ ಸೇರಿದಂತೆ ಒಟ್ಟು 5 ತಾಲೂಕುಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ. ಉಳಿದಂತೆ ಕುಣಿಗಲ್‌, ಸಿರಾ, ಕೊರಟಗೆರೆ ತಾಲೂಕುಗಳಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ತುರುವೇಕೆರೆ ಮತ್ತು ಚಿಕ್ಕನಾಯಕನಹಳ್ಳಿ ತಾಲೂಕುಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ತುಮಕೂರು | ಆರ್‌ಟಿಒ ಬ್ರೋಕರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರು ತಾಲೂಕಿನಿಂದ ಎಚ್‌ ಎಂ ನಂಜೇಗೌಡ, ಗುಬ್ಬಿಯಿಂದ ಭಾರತೀದೇವಿ ಕೆ ಪಿ, ಚಿಕ್ಕನಾಯಕನಹಳ್ಳಿಯಿಂದ ಬಿ ಎನ್‌ ಶಿವಪ್ರಕಾಶ್‌, ತಿಪಟೂರಿನಿಂದ ಎಂ ಕೆ ಪ್ರಕಾಶ್‌, ತುರುವೇಕೆರೆಯಿಂದ ಸಿ ವಿ ಮಹಲಿಂಗಯ್ಯ, ಕುಣಿಗಲ್‌ ಕ್ಷೇತ್ರದಿಂದ ಡಿ ಕೃಷ್ಣಕುಮಾರ್‌, ಮಧುಗಿರಿಯಿಂದ ಬಿ ನಾಗೇಶ್‌ ಬಾಬು, ಕೊರಟಗೆರೆಯಿಂದ ಸಿದ್ದಗಂಗಯ್ಯ ಪಿ, ಸಿರಾ ತಾಲೂಕಿನಿಂದ ಎಸ್‌ ಆರ್‌ ಗೌಡ ಹಾಗೂ ಪಾವಗಡದಿಂದ ಚಂದ್ರಶೇಖರ ರೆಡ್ಡಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...