ತುಮಕೂರು | ವಿವಿಧ ರೈಲ್ವೆ ಕಾಮಗಾರಿಗಳಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಶಿಲಾನ್ಯಾಸ

Date:

ತುಮಕೂರು ನಗರದ ಶೆಟ್ಟಿಹಳ್ಳಿ ಹಳೆಯ ರೈಲ್ವೆ ಗೇಟ್ ಬಳಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ ಹಾಗೂ ಭೀಮಸಂದ್ರದ ರೈಲ್ವೆ ಕೆಳ ಸೇತುವೆ ಕಾಮಗಾರಿಗಳಿಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಇಂದು ಶಿಲಾನ್ಯಾಸ ನೆರವೇರಿಸಿದರು.

ತುಮಕೂರು ನಗರದ ಶೆಟ್ಟಿಹಳ್ಳಿ ರೈಲ್ವೆ ಗೇಟ್‌ನಲ್ಲಿ ಈಗಾಗಲೇ ರಸ್ತೆ ಕೆಳ ಸೇತುವೆಯನ್ನು ನಿರ್ಮಿಸಲಾಗಿದ್ದು, ಈ ಕೆಳ ಸೇತುವೆ ಮೂಲಕ ವಾಹನಗಳ ಸಂಚರಿಸುತ್ತಿವೆ. ಆದರೆ ವಾಹನ ದಟ್ಟಣೆ ಇರುವ ಕಾರಣ ಅಂಡರ್‌ಪಾಸ್‌ನಲ್ಲಿ ಪಾದಚಾರಿಗಳು ಸಂಚರಿಸುವುದು ಕಷ್ಟಕರವಾಗಿರುವುದರಿಂದ  2.49 ಕೋಟಿ ರೂ. ವೆಚ್ಚದಲ್ಲಿ ಪಾದಚಾರಿ ಸುರಂಗ ಮಾರ್ಗ ಕಾಮಗಾರಿಗೆ  ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಹೇಳಿದರು.

1001174387

 ರಾಜ್ಯದಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿಗಳಿಗೆ ಈ ಹಿಂದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಎರಡೂ ಹಣ ನೀಡುತ್ತಿದ್ದವು. ಆದರೆ ಇತ್ತೀಚೆಗೆ ರಾಜ್ಯ ಸರ್ಕಾರಗಳು ಹಣ ಬಿಡುಗಡೆ ಮಾಡದಿರುವುದನ್ನು ಗಮನಿಸಿದ ಕೇಂದ್ರ ಸರ್ಕಾರ ಲೆವೆಲ್ ಕ್ರಾಸಿಂಗ್ ಮೇಲ್ಸೇತುವೆ ಮತ್ತು ಕೆಳ ಸೇತುವೆ ಕಾಮಗಾರಿಗಳಿಗೆ ಸಂಪೂರ್ಣ ಹಣವನ್ನು ಬಿಡುಗಡೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಸೋಮಣ್ಣ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶಾದ್ಯಂತ ಎಲ್ಲ ಕಡೆಗಳಲ್ಲಿ ಲೆವೆಲ್ ಕ್ರಾಸಿಂಗ್ ಕಾಮಗಾರಿಗಳನ್ನು ಕೇಂದ್ರ ಸರ್ಕಾರವೇ ಮಾಡುತ್ತಿದೆ. ಏಪ್ರಿಲ್ 30 ರೊಳಗೆ ಸುಮಾರು 700 ಕೋಟಿ ರೂ. ವೆಚ್ಚದಲ್ಲಿ ತುಮಕೂರು ಹಾಗೂ ಹಾಸನ ಜಿಲ್ಲೆಯ ಲೆವೆಲ್ ಕ್ರಾಸಿಂಗ್ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಈ ಕಾಮಗಾರಿಗಳನ್ನು ಮುಂಬರುವ 2027 ರೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು  ಹೇಳಿದರು

ನಾನು ಕೇಂದ್ರ ಸಚಿವನಾದ 9 ತಿಂಗಳಲ್ಲಿ ಜಿಲ್ಲೆಯ ಬಹುತೇಕ ರೈಲ್ವೆ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿಸಿದ್ದೇನೆ. ಕೇವಲ ಕರ್ನಾಟಕವಲ್ಲದೆ ದೇಶದ ಇತರೆ ರಾಜ್ಯಗಳ ರೈಲ್ವೆ ಕಾಮಗಾರಿಗಳಿಗೂ ಪ್ರಧಾನಿ ನರೇಂದ್ರ ಮೋದಿಯವರು ಅನುದಾನ ನೀಡಿದ್ದಾರೆ ಎಂದರು.

1001174385

ರೈಲ್ವೆ ಇಲಾಖೆ ರಕ್ಷಣಾ ಇಲಾಖೆಯ ಮತ್ತೊಂದು ಮುಖವಾಗಿ ಕೆಲಸ ಮಾಡುತ್ತಿದೆ. ಹಾಗಾಗಿ ಇಂದು ಶಿಲಾನ್ಯಾಸ ನೆರವೇರಿಸಿರುವ ಪಾದಚಾರಿ ಸುರಂಗ ಮಾರ್ಗ ಹಾಗೂ ಭೀಮಸಂದ್ರದ ಬಳಿ ರೈಲ್ವೆ ಕೆಳ ಸೇತುವೆ ಕಾಮಗಾರಿಗಳನ್ನು ಮುಂದಿನ 7 ತಿಂಗಳೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಸಕರಾದ ಜ್ಯೋತಿಗಣೇಶ್, ಸುರೇಶ್‌ಗೌಡ, ಮಾಜಿ ಸಂಸದ ಜಿ.ಎಸ್. ಬಸವರಾಜು, ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ, ರೈಲ್ವೆ ಇಲಾಖೆಯ ಬೆಂಗಳೂರು ವಿಭಾಗೀಯ ವ್ಯವಸ್ಥಾಪಕ ಅಮಿತೇಶ್‌ಕುಮಾರ್ ಸಿನ್ಹಾ, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್ಪೂರಿಯಾ, ಕೃಷ್ಣಚೈತನ್ಯ, ಮಂಜುನಾಥ ಕನಮಡಿ, ರಾಜೀವ್ ಶರ್ಮಾ, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ವೈ.ಹೆಚ್. ಹುಚ್ಚಯ್ಯ, ಪಾಲಿಕೆ ಮಾಜಿ ಸದಸ್ಯ ಮಲ್ಲಿಕಾರ್ಜುನಯ್ಯ, ವೇದಮೂರ್ತಿ, ರುದ್ರೇಶ್, ಹನುಮಂತರಾಜು ಮತ್ತಿತರರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...