ತುಮಕೂರು | ವಿವಿಧ ಸಾಲಸೌಲಭ್ಯ : ನಿರ್ಗತಿಕರ ಅರ್ಜಿಗಳಿಗೆ ಆದ್ಯತೆ ನೀಡಲು ಸಿಇಒ ಸೂಚನೆ

Date:

ಫಲಾನುಭವಿಗಳಿಗೆ ವಿವಿಧ ಇಲಾಖೆ, ನಿಗಮಗಳಡಿ ಅನುಷ್ಠಾನವಾಗುವ ಸಾಲ ಸೌಲಭ್ಯವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬ್ಯಾಂಕುಗಳ ಮೂಲಕ ತಲುಪಿಸಲಾಗುತ್ತಿದ್ದು, ಈ ಸೌಲಭ್ಯಗಳಲ್ಲಿ ಆಯ್ಕೆಯಾಗಿರುವ ರೈತರು, ಬಡವರು, ಮಹಿಳೆಯರು ಹಾಗೂ ನಿರ್ಗತಿಕರ ಅರ್ಜಿಗಳಿಗೆ ಆದ್ಯತೆಯ ಮೇಲೆ ಸಾಲ ಮಂಜೂರಾತಿ ನೀಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಭು ಜಿ. ಸೂಚಿಸಿದ್ದಾರೆ. 

ಇತ್ತೀಚೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪರಿಶೀಲನಾ ಸಭೆ ಹಾಗೂ ಜಿಲ್ಲಾ ಸಮಾಲೋಚನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸಾಲದ ಅರ್ಜಿಗಳನ್ನು ವಿಲೇವಾರಿ ಮಾಡದೆ ಹೆಚ್ಚಿನ ಕಾಲಾವಧಿ ತೆಗೆದು ಕೊಳ್ಳುವ ಬ್ಯಾಂಕುಗಳ ವಿರುದ್ಧ ಕ್ರಮಕೈಗೊಳ್ಳಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಸಂಸದರಿಗೆ ವರದಿ ನೀಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. 

ತುಮಕೂರು ಜಿಲ್ಲೆಯಲ್ಲಿ ಕೈಗಾರಿಕೋದ್ಯಮಕ್ಕಾಗಿ ಸಾಕಷ್ಟು ಅವಕಾಶಗಳಿದ್ದು, ಬ್ಯಾಂಕುಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಎಂಎಸ್‌ಎಂಇ ವಲಯದ ಮುಖ್ಯವಾಗಿ ಪಿಎಂಇಜಿಪಿ ಹಾಗೂ ವಿಶ್ವಕರ್ಮ ಯೋಜನೆಯಲ್ಲಿ ಸಾಲದ ಸೌಲಭ್ಯ ಕಲ್ಪಿಸಲು ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001248472

ಪಿಎಂಎಫ್‌ಎಂಇ ಮತ್ತು ಎನ್‌ಎಲ್‌ಎಂ ಯೋಜನೆಗಳು ಯುವಕರಿಗೆ ಹೆಚ್ಚಿನ ಉದ್ಯೋಗವಕಾಶಗಳನ್ನು ಸೃಷ್ಟಿಸುವಲ್ಲಿ ಮಹತ್ತರ ಪಾತ್ರವಹಿಸುತ್ತಿದ್ದು, ಬ್ಯಾಂಕುಗಳು ಆಧ್ಯತೆಯ ಮೇರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಗಳಿಗೆ ಸಾಲ ಸೌಲಭ್ಯ ಒದಗಿಸಲು ಸೂಚನೆ ನೀಡಿದ್ದಾರೆ. 

 ನಂತರ ಕೃಷಿ, ತೋಟಗಾರಿಕೆ, ಕೈಗಾರಿಕೆ ಹಾಗೂ ವಿವಿಧ ಅಭಿವೃದ್ಧಿ ನಿಗಮಗಳ ಯೋಜನೆಯಡಿ ಸಾಲ ವಿತರಣೆಯಾಗಿರುವ ಬಗ್ಗೆ ಪ್ರಗತಿ ಪರಿಶೀಲಿಸಿದರು.

ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ವ್ಯವಸ್ಥಾಪಕ ಚೈತನ್ಯ ಕಂಚಿ ಬೈಲ್ ಮಾತನಾಡಿ, 2024ರ ಅಕ್ಟೋಬರ್ 15 ರಿಂದ 2025ರ ಜನವರಿ 15ರವರೆಗೆ ನಡೆದಂತಹ ಜನ ಸುರಕ್ಷಾ ಅಭಿಯಾನದಲ್ಲಿ ಹಣಕಾಸು ಸೇವೆಗಳ ಇಲಾಖೆಯ ನಿರ್ದೇಶನದಂತೆ ಪಿಎಂಎಸ್‌ಬಿವೈ ಹಾಗೂ ಪಿಎಂಜೆಜೆಬಿವೈ ಯೋಜನೆಗಳ ಅಡಿ ಪ್ರತಿ ಗ್ರಾಮ ಪಂಚಾಯತಿಗಳು ನೋಂದಾಯಿಸಲು ನಡೆದಂತಹ ಅಭಿಯಾನದಲ್ಲಿ ಪಿಎಂಜೆಜೆಬಿವೈನಲ್ಲಿ ಶೇ.53 ಹಾಗೂ ಪಿಎಂಎಸ್‌ಬಿವೈನಲ್ಲಿ ಶೇ.76ರಷ್ಟು ಪ್ರಗತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 

ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಡಿಸೆಂಬರ್ ಮಾಹೆ ಅಂತ್ಯಕ್ಕೆ ವಾರ್ಷಿಕ ಸಾಲ ಯೋಜನೆಯಡಿ 8405 ಕೋಟಿ ರೂ.ಗಳ ಸಾಲ ನೀಡಲು ಗುರಿ ಹೊಂದಲಾಗಿತ್ತು. ಇದರಲ್ಲಿ ಕೃಷಿ ಸಾಲ ಹಾಗೂ ಕೃಷಿಗೆ ಪೂರಕವಾದ ಚಟುವಟಿಕೆಗಳಿಗಾಗಿ 6741 ಕೋಟಿ ರೂ., ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗಾಗಿ 2124 ಕೋಟಿ ರೂ.ಗಳನ್ನು ಹಾಗೂ ವ್ಯಾಪಾರ ಮತ್ತು ಸೇವೆಗಳಿಗಾಗಿ 178 ಕೋಟಿ ರೂ.ಗಳ ಸಾಲ ನೀಡುವ ಮೂಲಕ ಶೇಕಡ 108ರಷ್ಟು ಗುರಿ ಮಿರಿ ಸಾಧನೆ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಆರ್‌ಬಿಐನ ಡಿಜಿಎಂ ವಿ. ಹರಿಪ್ರಸಾದ್ ಮಾತನಾಡುತ್ತಾ, ಬ್ಯಾಂಕುಗಳು ತಮಗೆ ನೀಡಲಾಗಿರುವಂತಹ ಎಲ್ಲಾ ಆಧ್ಯತಾವಲಯಗಳ ಗುರಿಯನ್ನು ತಲುಪಬೇಕೆಂದು ಬ್ಯಾಂಕುಗಳಿಗೆ ಸೂಚನೆ ನೀಡಿದರು. 

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಬ್ಯಾಂಕಿನ ಅಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...